• search
  • Live TV
ಚೆನ್ನೈ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ಸ್ವಾತಂತ್ರ್ಯ ದಿನಾಚರಣೆಯಿಂದ ದೂರ ಉಳಿದ ರಾಜ್ಯಪಾಲರು

|

ಚೆನ್ನೈ, ಆಗಸ್ಟ್.03: ತಮಿಳುನಾಡು ರಾಜ್ಯಪಾಲ ಬನ್ವಾರಿ ಲಾಲ್ ಪುರೋಹಿತ್ ಅವರಿಗೆ ನೊವೆಲ್ ಕೊರೊನಾವೈರಸ್ ಸೋಂಕು ತಗಲಿರುವುದು ವೈದ್ಯಕೀಯ ತಪಾಸಣೆ ವೇಳೆ ದೃಢಪಟ್ಟಿದೆ. ಈ ಹಿನ್ನೆಲೆ ರಾಜಭವನದಲ್ಲಿ ನಡೆಯಲಿರುವ ಸ್ವಾತಂತ್ರ್ಯ ದಿನಾಚರಣೆ ಆತಿಥ್ಯ ವಹಿಸದಿರಲು ರಾಜ್ಯಪಾಲರು ತೀರ್ಮಾನಿಸಿದ್ದಾರೆ.

ಜಾಗತಿಕ ವ್ಯಾಕ್ಸಿನ್ ವಾರ್: ಭಾರತವೇ ಯುದ್ಧ ಕೇಂದ್ರ..!

ಆಗಸ್ಟ್.15ರಂದು ತಮಿಳುನಾಡು ರಾಜಧಾನಿ ಚೆನ್ನೈನಲ್ಲಿರುವ ರಾಜ್ಯಪಾಲರ ಅಧಿಕೃತ ನಿವಾಸ ರಾಜಭವನದಲ್ಲಿ ಸ್ವಾತಂತ್ರ್ಯ ದಿನಾಚರಣೆ ಸರಳವಾಗಿ ಆಚರಿಸಲಾಗುತ್ತದೆ. ಕೊವಿಡ್-19 ಸೋಂಕು ದೃಢಪಟ್ಟಿದ್ದರಿಂದ ಈ ಬಾರಿ ಧ್ವಜಾರೋಹಣ ಕಾರ್ಯಕ್ರಮದಿಂದ ರಾಜ್ಯಪಾಲರು ದೂರ ಉಳಿಯಲು ತೀರ್ಮಾನಿಸಿದ್ದಾರೆ.

ತಮಿಳುನಾಡು ರಾಜ್ಯಪಾಲ ಬನ್ವಾರಿಲಾಲ್ ಪುರೋಹಿತ್ ರಿಗೆ ಕೊವಿಡ್-19 ಸೋಂಕು

ಚೆನ್ನೈನ ಅಲ್ವಾರ್ ಪೇಟ್ ನಲ್ಲಿರುವ ಕಾವೇರಿ ಆಸ್ಪತ್ರೆಯಲ್ಲಿ ರಾಜ್ಯಪಾಲ ಬನ್ವಾರಿ ಲಾಲ್ ಪುರೋಹಿತ್ ಅವರನ್ನು ಈಗಾಗಲೇ ದಾಖಲಿಸಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ. ಕೊವಿಡ್-19 ಸೋಂಕು ಇನ್ನೂ ಆರಂಭಿಕ ಹಂತದಲ್ಲಿದೆ ಎಂದು ವೈದ್ಯರು ತಿಳಿಸಿದ್ದಾರೆ.

ರಾಜ್ಯಪಾಲರಿಗೆ ಹೋಮ್ ಐಸೋಲೇಷನ್ ನಲ್ಲಿ ಇರಿಸಿ ಚಿಕಿತ್ಸೆ ನೀಡುವ ಬಗ್ಗೆ ವೈದ್ಯರು ಸಲಹೆ ನೀಡಿದ್ದಾರೆ. ಕಾವೇರಿ ಆಸ್ಪತ್ರೆಯ ವೈದ್ಯರ ತಂಡವೇ ಬನ್ವಾರಿ ಲಾಲ್ ಪುರೋಹಿತ್ ಅವರ ಆರೋಗ್ಯದ ತಪಾಸಣೆ ನಡೆಸಲಿದೆ ಎಂದು ತಿಳಿದು ಬಂದಿದೆ.

ರಾಜಭವನ ಸಿಬ್ಬಂದಿಗೂ ಕೊವಿಡ್-19 ಕಾಟ:

ಜುಲೈ 23ರಂದು ತಮಿಳುನಾಡು ರಾಜ್ಯಪಾಲರ ಕಚೇರಿ 23 ಸಿಬ್ಬಂದಿಗೆ ಕೊರೊನಾವೈರಸ್ ಸೋಂಕು ತಗುಲಿತ್ತು. ಕಳೆದ ವಾರ ತಮಿಳುನಾಡು ರಾಜಭವನದ 84 ಸಿಬ್ಬಂದಿಗೆ ಕೊರೊನಾ ವೈರಸ್ ಸೋಂಕು ತಗುಲಿತ್ತು. ಜುಲೈ 29ರಿಂದ ಅವರು ರಾಜಭವನದಲ್ಲಿ ಕ್ವಾರಂಟೈನ್ ‌ನಲ್ಲಿದ್ದರು. ಆದರೆ ಜುಲೈ 29ರಂದು ಮತ್ತೆ ಮೂವರು ಸಿಬ್ಬಂದಿಗೆ ಸೋಂಕು ತಗುಲಿದ್ದು ಖಚಿತವಾಗಿತ್ತು. ಮುಂಜಾಗ್ರತಾ ಕ್ರಮವಾಗಿ ರಾಜಭವನದ ಉಳಿದ 38 ಸಿಬ್ಭಂದಿಗಳಿಗೂ ಕೊರೊನಾ ವೈರಸ್ ಸೋಂಕಿನ ಪರೀಕ್ಷೆ ಮಾಡಿಸಲಾಗಿತ್ತು. ಇವರಲ್ಲಿ 35 ಜನರ ವರದಿ ನೆಗೆಟಿವ್ ಬಂದಿತ್ತು. ಸೋಂಕು ತಗುಲಿದ್ದ ಮೂವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು.

English summary
Tamil Nadu Governor Decided Not To Host The 'At Home Reception' At Raj Bhavan On The Occasion Of Independence Day.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X