ಚೆನ್ನೈ ಮಹಿಳಾ ಉದ್ಯೋಗಿ ಹತ್ಯೆ: ಗೆಳತಿ ಬಿಚ್ಚಿಟ್ಟ ಆಘಾತಕಾರಿ ಮಾಹಿತಿ

Written By:
Subscribe to Oneindia Kannada

ಚೆನ್ನೈ, ಜೂನ್, 30: ಇನ್ಫೋಸಿಸ್ ಮಹಿಳಾ ಉದ್ಯೋಗಿ ಸ್ವಾತಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಆಘಾತಕಾರಿ ಮಾಹಿತಿಯೊಂದು ಹೊರಬಿದ್ದಿದೆ.

ಸ್ವಾತಿ ಅವರ ಸಹೋದ್ಯೋಗಿಯನ್ನು ಪ್ರಶ್ನೆ ಮಾಡಿದ ಪೊಲೀಸರಿಗೆ ಆಘಾತಕಾರಿ ಮಾಹಿತಿ ದೊರೆತಿದೆ. ಕೊಲೆಯಾದ ಜೂನ್ 9 ಮತ್ತು 10 ರಂದು ಕೊಲೆಗಾರ ಸ್ವಾತಿಯನ್ನು ಹಿಂಬಾಲಿಸಿಕೊಂಡು ಬಂದಿದ್ದ ಎಂಬ ಮಾಹಿತಿ ಸಿಕ್ಕಿದೆ.

ಈ ಬಗ್ಗೆ ಹೇಳಿಕೆ ನೀಡಿರುವ ಪೊಲೀಸ್ ಕಮಿಷನರ್ , ಸಾರ್ವಜನಿಕರು ಸಹ ಕೊಲೆಗಾರನ ಬಗ್ಗೆ ಮಾಹಿತಿ ನೀಡಬೇಕು. ವಿಶೆಷ ತಂಡಗಳನ್ನು ರಚಿಸಿದ್ದು ಆರೋಪಿಯ ಪತ್ತೆಗೆ ಶೋಧ ನಡೆಸಿದ್ದೇವೆ ಎಂದು ತಿಳಿಸಿದ್ದಾರೆ. ಪೊಲೀಸರು ಹತ್ಯೆಗೀಡಾದ ಸ್ವಾತಿಯ ಸ್ನೇಹಿತರನ್ನು, ಸಂಬಂಧಿಕರನ್ನು ಒಂದೊಂದಾಗಿ ವಿಚಾರಣೆಗೆ ಒಳಪಡಿಸುತ್ತಿದ್ದಾರೆ.[ಚೆನ್ನೈ: ಇನ್ಫೋಸಿಸ್ ಮಹಿಳಾ ಉದ್ಯೋಗಿ ಬರ್ಬರ ಹತ್ಯೆ]

chennai


ಚೆನ್ನೈನ ನುಂಗಂಬಾಕಂ ರೈಲು ನಿಲ್ದಾಣದಲ್ಲಿ ಜೂನ್ 24 ರಂದು ಮುಂಜಾನೆ ರೈಲಿಗೆ ಕಾಯುತ್ತಿದ್ದ ಇನ್ಫೋಸಿಸ್ ಉದ್ಯೋಗಿ ಸ್ವಾತಿ ಎಂಬುವರನ್ನು ಚಾಕುವಿನಿಂದ ಇರಿದು ಹತ್ಯೆ ಮಾಡಲಾಗಿತ್ತು.[ಚೆನ್ನೈ: ಇನ್ಫೋಸಿಸ್ ಮಹಿಳಾ ಉದ್ಯೋಗಿ ಕೊಲೆಗಾರನ ರೇಖಾಚಿತ್ರ]

ಚೆನ್ನೈ ನುಂಗಂಬಾಕಂ ರೈಲ್ವೆ ನಿಲ್ದಾಣದಲ್ಲಿ ಇನ್ಫೋಸಿಸ್ ಮಹಿಳಾ ಉದ್ಯೋಗಿ ಹತ್ಯೆ ಮಾಡಿದ ಯುವಕನ ಕುರಿತಾದ ರೇಖಾಚಿತ್ರವನ್ನು ಪೊಲೀಸರು ಬಿಡುಗಡೆ ಮಾಡಿದ್ದರು. ಪ್ರತ್ಯಕ್ಷದರ್ಶಿಗಳ ಹೇಳಿಕೆ ಪ್ರಕಾರ ಪೊಲೀಸರು ಶಂಕಿತ ಆರೋಪಿಯ ರೇಖಾಚಿತ್ರ ಬಿಡುಗಡೆ ಮಾಡಿದ್ದರು. ಕೊಲೆಗಾರ ಹಸಿರು ಬಣ್ಣದ ಶರ್ಟ್ ಮತ್ತು ಕಪ್ಪು ಬಣ್ಣದ ಪ್ಯಾಂಟ್ ಧರಿಸಿದ್ದ ಎನ್ನಲಾಗಿತ್ತು. ಈಗ ಹಿಂದೆಯೂ ವ್ಯಕ್ತಿ ಸ್ವಾತಿಯನ್ನು ಹಿಂಬಾಲಿಸಿಕೊಂಡು ಬಂದ ಬಗ್ಗೆ ಮಾಹಿತಿ ಲಭ್ಯವಾಗಿದೆ.

ಕನ್ನಡ ಮ್ಯಾಟ್ರಿಮನಿಯಲ್ಲಿ ಸೂಕ್ತ ಸಂಗಾತಿಯನ್ನು ಆಯ್ಕೆ ಮಾಡಿ - ನೋಂದಣಿ ಉಚಿತ!

English summary
In a big development in Infosys techie murder case on Thursday, (June 30) police investigated Swathi's colleague was staying with her. She has revealed shocking information about the killer to the cops and she also said that Swathi killer was stalking her on June 9 and 10 at Nungambakkam railway station. Swathi was brutally killed by an unidentified person in broad-day light at Nungambakkam railway station in Chennai on Friday, (June 24 ) at around 6.30 am.
Please Wait while comments are loading...