ಚೆನ್ನೈನಲ್ಲಿ ಪಳನೀಸ್ವಾಮಿಯನ್ನು ತರಾಟೆಗೆ ತೆಗೆದುಕೊಂಡ ರಜನೀಕಾಂತ್
ಚೆನ್ನೈ, ಆಗಸ್ಟ್ 14: 'ತಮಿಳುನಾಡು ಮುಖ್ಯಮಂತ್ರಿ ಕೆ ಪಳನೀಸ್ವಾಮಿ ಅವರೇನು ಜಯಲಲಿತಾ ಮತ್ತು ಕರುಣಾನಿಧಿ ಅವರಿಗಿಂತ ದೊಡ್ಡವರೇ?' ಎಂದು ನಟ, ರಾಜಕಾರಣಿ ರಜನೀಕಾಂತ್ ಪ್ರಶ್ನಿಸಿದ್ದಾರೆ.
72ನೇ ಸ್ವಾತಂತ್ರ್ಯ ದಿನಾಚರಣೆ 2018
ಇತ್ತೀಚೆಗಷ್ಟೇ ಇಹಲೋಕ ತ್ಯಜಿಸಿದ ತಮಿಳುನಾಡಿನ ಮಾಜಿ ಮುಖ್ಯಮಂತ್ರಿ ಎಂ.ಕರುಣಾನಿಧಿ ಅವರ ಅಂತ್ಯಸಂಸ್ಕಾರಕ್ಕೆ ಹಾಜರಾಗದ ಪಳನೀಸ್ವಾಮಿ ಅವರನ್ನು ರಜನೀಕಾಂತ್ ತರಾಟೆಗೆ ತೆಗೆದುಕೊಂಡಿದ್ದಾರೆ.
'ಚೆನ್ನೈನ ಮರೀನಾ ಬೀಚ್ ನಲ್ಲಿ ನಡೆದ ಎಂ ಕರುಣಾನಿಧಿ ಅವರ ಅಂತ್ಯ ಸಂಸ್ಕಾರಕ್ಕೆ ಎಲ್ಲಾ ಘಟಾನುಘಟಿ ನಾಯಕರೇ ಬಂದಿದ್ದರೂ, ತಮಿಳುನಾಡು ಮುಖ್ಯಮಂತ್ರಿಯೇ ಬಾರದಿದ್ದುದು ಏಕೆ? ಅವರೇನು ಕರುಣಾನಿಧಿ, ಜಯಲಲಿತಾ ಅವರಿಗಿಂತ ದೊಡ್ಡವರೇ' ಎಂದು ತಲೈವಾ ರಜನೀಕಾಂತ್ ಪ್ರಶ್ನಿಸಿದ್ದಾರೆ.

"ಕರುಣಾನಿಧಿ ಅವರೊಬ್ಬ ಮಹಾನ್ ಮನುಷ್ಯ. ವಿಶ್ವದ ಯಾವುದೇ ನಾಯಕರು ತಮಿಳುನಾಡಿಗೆ ಭೇಟಿ ಕೊಟ್ಟರೂ ಕರುಣಾನಿಧಿ ಅವರನ್ನು ಭೇಟಿ ಮಾಡದೆ ಹೋಗುತ್ತಿರಲಿಲ್ಲ. ಇನ್ನು ಏಲೆ ಅವರೆಲ್ಲ ಯಾರನ್ನು ಭೇಟಿ ಮಾಡುತ್ತಾರೋ" ಎಂದು ಈ ಸಂದರ್ಭದಲ್ಲಿ ಕರುಣಾನಿಧಿ ಅವರ ವ್ಯಕ್ತಿತ್ವವನ್ನು ಸೂಪರ್ ಸ್ಟಾರ್ ಹೊಗಳಿದರು.
ಅನಾರೋಗ್ಯದ ಕಾರಣ ಆಗಸ್ಟ್ 7 ರಂದು ಚೆನ್ನೈನ ಕಾವೇರಿ ಆಸ್ಪತ್ರೆಯಲ್ಲಿ ಮೃತರಾದ ಕರುಣಾನಿಧಿ ಅವರ ಅಂತ್ಯ ಸಂಸ್ಕಾರ ಆ.8 ರಂದು ಚೆನ್ನೈನ ಮರೀನಾ ಬೀಚ್ ನಲ್ಲಿ ನಡೆದಿತ್ತು. ಅವರ ಅಂತ್ಯ ಸಂಸ್ಕಾರವನ್ನು ಚೆನ್ನೈನ ಮರೀನಾ ಬೀಚ್ ನಲ್ಲಿ ಮಾಡಬಾರದು ಎಂದು ತಮಿಳುನಾಡು ಸರ್ಕಾರ ಸಲ್ಲಿಸಿದ್ದ ಅರ್ಜಿಗಳನ್ನು ಮದ್ರಾಸ್ ಹೈಕೋರ್ಟ್ ವಜಾ ಮಾಡಿತ್ತು.
-
March 21 Horoscope: 12 ರಾಶಿಗಳ ಇಂದುದಿನ ಭವಿಷ್ಯ – ಹಣ, ಆರೋಗ್ಯ, ಕೆಲಸದ ಫಲಿತಾಂಶ -
SWR: ವಿಜಯಪುರ-ಮಂಗಳೂರು ಎಕ್ಸ್ಪ್ರೆಸ್ ರೈಲು ಸಂಚಾರದಲ್ಲಿ ಭಾಗಶಃ ರದ್ದು, ವೇಳಾಪಟ್ಟಿ ಗಮನಿಸಿ -
ಜಿಯೋ, ಏರ್ಟೆಲ್ಗೆ ಸೆಡ್ಡು ಹೊಡೆಯಲು BSNL ಮಾಸ್ಟರ್ ಪ್ಲಾನ್: ವೊಡಾಫೋನ್ ಐಡಿಯಾ ಜತೆ ಮಹತ್ವದ ಹೆಜ್ಜೆ -
Rain Alert: ಕರ್ನಾಟಕದಲ್ಲಿ ಮಾ.27ರವರೆಗೆ ಗುಡುಗು ಸಹಿತ ಮಳೆ, ಕರಾವಳಿಗೆ ಉಷ್ಣ ಅಲೆ ಎಚ್ಚರಿಕೆ -
ಯುವತಿಯರ ಜೊತೆ ಸೆಕ್ಯೂರಿಟಿ ಗಾರ್ಡ್ ಭರ್ಜರಿ ಸ್ಟೆಪ್ಸ್: 'ಬೇಬಿ ಡಾಲ್' ಡ್ಯಾನ್ಸ್ ವಿಡಿಯೋ ಸಖತ್ Viral -
Gold Price Today: ಇಂದು ಚಿನ್ನ-ಬೆಳ್ಳಿ ದರದಲ್ಲಿ ದಾಖಲೆಯ ಇಳಿಕೆ, 30000 ರೂ ಕುಸಿದ ಬಿಳಿ ಲೋಹ -
India Rain Forecast: ಮುಂದಿನ 5 ದಿನ ಈ ಭಾಗಗಳಲ್ಲಿ ವ್ಯಾಪಕ ಮಳೆ, ಉಷ್ಣ ಅಲೆ ಎಚ್ಚರಿಕೆ -
ಶೃಂಗೇರಿ ಮಠದಿಂದ ಶಾಲಾ ಮಕ್ಕಳಿಗೆ ಸುವರ್ಣಾವಕಾಶ: 'ರಾಮಾಯಣ ಪರೀಕ್ಷೆ' ಬರೆದು 50 ಸಾವಿರ ರೂ. ನಗದು ಗೆಲ್ಲಿ -
Vande Bharat Express: ಬೆಂಗಳೂರು-ಕಲಬುರಗಿ ಸೇರಿದಂತೆ 4 ರೈಲುಗಳ ವೇಳಾಪಟ್ಟಿ ಪರಿಷ್ಕರಣೆ -
ಕರ್ನಾಟಕ PGCET 2026 ಅಧಿಸೂಚನೆ ಪ್ರಕಟ: ಎಂಬಿಎ ಸೇರಿ ವಿವಿಧ ಸ್ನಾತಕೋತ್ತರ ಪದವಿ ಪ್ರವೇಶಾತಿಗೆ ಮಾರ್ಚ್ 23 ರಿಂದ ಅರ್ಜಿ ಆಹ್ವಾನ -
ವಿಶ್ವಮಾತೆ ಎನ್ನುತ್ತಾ ಶ್ರೀಚಾಮುಂಡೇಶ್ವರಿಯ ಕನ್ನಡ ಹಾಡು ಹಂಚಿಕೊಂಡ ಪ್ರಧಾನಿ ಮೋದಿ -
ಮಾರ್ಚ್ 21ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ












Click it and Unblock the Notifications