ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಜಯಲಲಿತಾ ಆರೋಗ್ಯದಲ್ಲಿ ಚೇತರಿಕೆ: ಕಾರ್ಯಕರ್ತರ ನಿಟ್ಟುಸಿರು

By Prithviraj
|
Google Oneindia Kannada News

ಚೆನ್ನೈ, ನವೆಂಬರ್, 3: ಉಸಿರಾಟ ತೊಂದರೆ ಮತ್ತು ನಿರ್ಜಲೀಕರಣ ಸಮಸ್ಯೆಯಿಂದ ಆಸ್ಪತ್ರೆಗೆ ದಾಖಲಾಗಿದ್ದ ತಮಿಳುನಾಡು ಮುಖ್ಯಂಮಂತ್ರಿ ಜೆ.ಜಯಲಲಿತಾ ಅವರ ಆರೋಗ್ಯದಲ್ಲಿ ಚೇತರಿಕೆ ಕಂಡುಬಂದಿದೆ ಎಂದು ಪಕ್ಷದ ಮುಖಂಡರು ತಿಳಿಸಿದ್ದಾರೆ.

ನವೆಂಬರ್ 19ರಂದು ನಡೆಯುವ ಉಪಚುನಾವಣೆಗೆ ಮೊದಲೇ ಮುಖ್ಯಮಂತ್ರಿಯವರು ಚೇತರಿಸಿಕೊಳ್ಳುವ ಸಾಧ್ಯತೆ ಇದೆ ಎನ್ನಲಾಗಿದ್ದು, ಪಕ್ಷದ ಕಾರ್ಯಕರ್ತರು ಮತ್ತು ಅಭಿಮಾನಿಗಳು ನಿಟ್ಟುಸಿರು ಬಿಟ್ಟಿದ್ದಾರೆ.

Jayalalitha off respiratory support of ICU

ಸೆಪ್ಟೆಂಬರ್ 22ರಂದು ಚೆನ್ನೈನ ಅಪಲೋ ಆಸ್ಪತ್ರೆಗೆ ಜಯಲಲಿತಾ ಅವರು ದಾಖಲಾಗಿದ್ದರು. ಜಯಲಲಿತಾ ಅವರು ಶ್ವಾಸಕೋಶ ಸಂಬಂಧಿತ ಸಮಸ್ಯೆಗಳಿಗೆ ತುತ್ತಾಗಿದ್ದಾರೆ ಎಂದು ಹೇಳಲಾಗಿತ್ತು. ಆದರೆ ಈ ಬಗ್ಗೆ ಯಾವುದೇ ಅಧಿಕೃತ ಮಾಹಿತಿ ಪ್ರಕಟಿಸಿರಲಿಲ್ಲ.

ಇತ್ತೀಚಿನ ಮಾಹಿತಿ ಪ್ರಕಾರ "ಜಯಲಲಿತಾ ಅವರ ಆರೋಗ್ಯದಲ್ಲಿ ಚೇತರಿಕೆ ಕಂಡುಬಂದಿದ್ದು, ಅವರನ್ನು ಐಸಿಯುನಿಂದ ಸಾಮಾನ್ಯ ವಾರ್ಡ್ ಗೆ ಸ್ಥಳಾಂತರಿಸಲಾಗಿದೆ ಎಂದು ಹೇಳಲಾಗಿದ್ದು, ಆಸ್ಪತ್ರೆ ಸುತ್ತ ಬಿಗಿ ಬಂದೋಬಸ್ತ್ ಕಲ್ಪಿಸಲಾಗಿದೆ.

ಅಕ್ಟೋಬರ್ 21 ರಂದು ಆಸ್ಪತ್ರೆ ವೈದ್ಯರು ಜಯಲಲಿತಾ ಅವರ ಆರೋಗ್ಯದ ಕುರಿತು ಕೊನೆಯದಾಗಿ ಮಾಹಿತಿ ನೀಡಿದ್ದರು. ಪಕ್ಷದ ಕಾರ್ಯಕರ್ತರು ಮತ್ತು ಅಭಿಮಾನಿಗಳು ವೈದ್ಯರ ಅಧಿಕೃತ ಹೇಳಿಕೆಗಳಿಗಾಗಿ ಕಾತರದಿಂದ ಕಾಯುತ್ತಿದ್ದಾರೆ.

ಜಯಲಲಿತಾ ಅವರ ಆರೋಗ್ಯದಲ್ಲಿ ಚೇತರಿಕೆ ಕಂಡುಬಂದಿರುವುದು ನಿಜಕ್ಕೂ ಪಕ್ಷಕ್ಕೆ ಉತ್ತೇಜನ ನೀಡುವ ವಿಷಯವಾಗಿದ್ದು, ನವೆಂಬರ್ 19ರಂದು ನಡೆಯುವ ಉಪಚುನಾವಣೆಗೆ ಹೆಚ್ಚು ಸಹಕಾರಿಯಾಗಲಿದೆ ಎಂದು ಹೇಳಲಾಗಿದೆ.

English summary
The AIADMK seems to have some reason to breathe easy before the November 19 bypolls to Tamil Nadu assembly. Their supremo and Tamil Nadu Chief Minister J Jayalalithaa's health has made some progress with sources from the party stating that she is off respiratory support.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X