ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಜಯಲಲಿತಾ ಘೋಷಣೆ ಮಾಡಿದ ಆಸ್ತಿ ಎಷ್ಟು ಗೊತ್ತಾ?

|
Google Oneindia Kannada News

ಚೆನ್ನೈ, ಜೂ. 06 : ಅಕ್ರಮ ಆಸ್ತಿಗಳಿಕೆ ಪ್ರಕರಣದಲ್ಲಿ ಕರ್ನಾಟಕ ಹೈಕೋರ್ಟ್‌ನಿಂದ ಖುಲಾಸೆಗೊಂಡಿರುವ ತಮಿಳುನಾಡು ಮುಖ್ಯಮಂತ್ರಿ ಜಯಲಲಿತಾ ಅವರ ಒಟ್ಟು ಆಸ್ತಿ ಮೌಲ್ಯ 117.13 ಕೋಟಿ ರೂ.ಗಳು. ನಾಲ್ಕು ವರ್ಷಗಳಲ್ಲಿ ಜಯಲಿತಾ ಅವರ ಆಸ್ತಿ ದುಪ್ಪಟ್ಟಾಗಿದೆ.

ಆರ್.ಕೆ.ನಗರ ಕ್ಷೇತ್ರದಿಂದ ವಿಧಾನಸಸಭೆ ಉಪ ಚುನಾವಣೆಗೆ ಸ್ಪರ್ಧಿಸುತ್ತಿರುವ ಜಯಲಲಿತಾ ಅವರು ಶುಕ್ರವಾರ ತಮ್ಮ ನಾಮಪತ್ರ ಸಲ್ಲಿಕೆ ಮಾಡಿದ್ದಾರೆ. ಈ ವೇಳೆ ಅವರು ತಮ್ಮ ಬಳಿ 117.13 ಕೋಟಿ ರೂ. ಆಸ್ತಿ ಇದೆ ಎಂದು ಪ್ರಮಾಣ ಪತ್ರವನ್ನು ಸಲ್ಲಿಸಿದ್ದಾರೆ. [ಅಕ್ರಮ ಆಸ್ತಿಗಳಿಕೆ ಪ್ರಕರಣ Timeline]

jayalalithaa

2011ಕ್ಕೆ ಹೋಲಿಕೆ ಮಾಡಿದಾಗ ಜಯಲಲಿತಾ ಅವರ ಆಸ್ತಿ ದುಪ್ಪಟ್ಟಾಗಿದೆ. 2011ರ ಚುನಾವಣೆಯಲ್ಲಿ ಶ್ರೀರಂಗಂನಿಂದ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸಿದ್ದ ಅವರು ತಮ್ಮ ಬಳಿ 51.40 ಕೋಟಿ ಆಸ್ತಿ ಇದೆ ಎಂದು ಪ್ರಮಾಣ ಪತ್ರ ಸಲ್ಲಿಸಿದ್ದರು. 2015ಕ್ಕೆ ಈ ಆಸ್ತಿ ಪ್ರಮಾಣ 117.13 ಕೋಟಿ ರೂ. ಆಗಿದೆ. [ಜಯಲಲಿತಾ ವಿರುದ್ಧ ಮೇಲ್ಮನವಿ ಸಲ್ಲಿಸಲು 7 ಕಾರಣಗಳು!]

ಅಕ್ರಮ ಆಸ್ತಿಗಳಿಕೆ ಪ್ರಕರಣದಲ್ಲಿ ಜೆ.ಜಯಲಲಿತಾ ಅವರು ನಿರ್ದೋಷಿ ಎಂದು ಕರ್ನಾಟಕ ಹೈಕೋರ್ಟ್ ವಿಶೇಷ ಪೀಠದ ನ್ಯಾಯಮೂರ್ತಿ ಸಿ.ಆರ್.ಕುಮಾರಸ್ವಾಮಿ ಮೇ 11ರಂದು ತೀರ್ಪು ನೀಡಿದ್ದರು. ಮೇ.23ರಂದು ಜಯಲಲಿತಾ ಅವರು ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ್ದರು.

ಜೈಲು ಶಿಕ್ಷೆಯಾದಾಗ ಶಾಸಕ ಸ್ಥಾನಕ್ಕೆ ಜಯಲಲಿತಾ ಅವರು ರಾಜೀನಾಮೆ ನೀಡಿದ್ದರು. ಈಗ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ್ದಾರೆ. ಆರು ತಿಂಗಳೊಳಗೆ ವಿಧಾನಸಭಾ ಕ್ಷೇತ್ರವೊಂದರಿಂದ ಅವರು ಶಾಸಕರಾಗಿ ಆಯ್ಕೆಯಾಗಬೇಕಾಗಿದೆ. ಅಮ್ಮನ ಕಟ್ಟಾ ಬೆಂಬಲಿಗ ಶಾಸಕ ಆರ್.ಕೆ.ನಗರ ಕ್ಷೇತ್ರದ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿ, ಜಯಲಲಿತಾ ಅವರಿಗೆ ದಾರಿ ಮಾಡಿಕೊಟ್ಟಿದ್ದಾರೆ.

English summary
Tamil Nadu chief minister J.Jayalalithaa assets have increased more than double in 4 years. Jayalalithaa declared assets worth Rs 117.13 crore according to an affidavit filed on Friday along with nomination papers for the R.K.Nagar by-election. In 2011 she declared 51.40 core asset.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X