ಜಯಾ ಸಾವಿನ ವರದಿ ತಮಿಳುನಾಡು ರಾಜ್ಯಪಾಲರಿಗೆ ಸಲ್ಲಿಕೆ
ಏಮ್ಸ್ ವರದಿಯ ಆಧಾರದ ಮೇಲೆ ಜಯಲಲಿತಾ ಸಾವಿನ ಬಗ್ಗೆ ಅಧಿಕೃತ ಹೇಳಿಕೆ ನೀಡಲಿರುವ ತಮಿಳುನಾಡು ಸರ್ಕಾರ.
ಚೆನ್ನೈ, ಮಾರ್ಚ್ 6: ತಮಿಳುನಾಡಿನ ಮಾಜಿ ಮುಖ್ಯಮಂತ್ರಿ ಎಂ. ಜಯಲಲಿತಾ ಅವರ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಆಸ್ಪತ್ರೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿರುವ ಅಖಿಲ ಭಾರತ ಆರೋಗ್ಯ ವಿಜ್ಞಾನ ಸಂಸ್ಥೆ (ಏಮ್ಸ್), ತನ್ನ ವರದಿಯನ್ನು ಸೋಮವಾರ ತಮಿಳುನಾಡು ರಾಜ್ಯಪಾಲ ವಿದ್ಯಾಸಾಗರ್ ರಾವ್ ಅವರಿಗೆ ಸಲ್ಲಿಸಿದೆ.
ಜಯಲಲಿತಾ ಅವರ ಸಾವಿನ ಬಗ್ಗೆ ಅನೇಕ ಸಂದೇಹಗಳು ಹುಟ್ಟಿಕೊಂಡ ಹಿನ್ನೆಲೆಯಲ್ಲಿ ಏಮ್ಸ್ ಸಂಸ್ಥೆಯು ತನಿಖೆಯನ್ನು ಕೈಗೊಂಡಿತ್ತು.[ಎಐಎಡಿಎಂಕೆ ಮುಖ್ಯಸ್ಥೆ ಶಶಿಕಲಾ ನಟರಾಜನ್ ವ್ಯಕ್ತಿಚಿತ್ರ]

ಅನಾರೋಗ್ಯದಿಂದ ಜಯಲಲಿತಾ ಅವರು ಆಸ್ಪತ್ರೆಗೆ ದಾಖಲಾದಾಗಿನಿಂದ ಅವರು ಸಾವಿಗೀಡಾಗಿದ ದಿನಾಂಕದವರೆಗೂ ಅವರಿಗೆ ನೀಡಲಾದ ಚಿಕಿತ್ಸೆ ಹಾಗೂ ಇನ್ನಿತರ ಸಂಬಂಧಪಟ್ಟ ಮಾಹಿತಿಗಳನ್ನು ಕಲೆಹಾಕಿರುವ ಏಮ್ಸ್ ಆದೆಲ್ಲವನ್ನೂ ರಾಜ್ಯಪಾಲರಿಗೆ ಸಲ್ಲಿಸಿದೆ ಎಂದು ಮೂಲಗಳು ತಿಳಿಸಿವೆ.
ಜಯಲಲಿತಾ ಅವರ ಸಾವಿನ ಬಗ್ಗೆ ಮಾಜಿ ಮುಖ್ಯಮಂತ್ರಿ ಪನ್ನೀರ್ ಸೆಲ್ವಂ ಕೂಡ ಇತ್ತೀಚೆಗೆ ಕೇಂದ್ರ ಸರ್ಕಾರದ ತನಿಖೆಯಾಗಬೇಕೆಂದು ಆಗ್ರಹಿಸಿದ್ದನ್ನು ಇಲ್ಲಿ ಸ್ಮರಿಸಬಹುದು.
ತಮಿಳುನಾಡು ಸರ್ಕಾರದ ಮೇಲೂ ಜಯಲಲಿತಾ ಅವರಿಗೆ ನೀಡಲಾದ ಚಿಕಿತ್ಸೆಯ ಬಗ್ಗೆ ಜನರಿಗೆ ಉತ್ತರ ನೀಡುವ ಒತ್ತಡವಿದೆ. ಹಾಗಾಗಿ, ಈಗ ಏಮ್ಸ್ ತಂಡವು ಸಲ್ಲಿಸಿರುವ ವರದಿಯನ್ನು ಅದು ಸ್ವೀಕರಿಸಿ ಅದರ ಆಧಾರದ ಮೇಲೆ ಜಯಲಲಿತಾ ಅವರ ಸಾವಿನ ಹಿಂದಿರುವ ವಿಚಾರಗಳನ್ನು ಅದು ಬಹಿರಂಗಗೊಳಿಸಲಿದೆ ಎಂದು ಹೇಳಲಾಗಿದೆ.












Click it and Unblock the Notifications