ತನಿಖಾ ಆಯೋಗದಿಂದ ಜಯಲಲಿತಾ ಸಾವಿನ ತನಿಖೆ : ಪಳನಿಸ್ವಾಮಿ
ಚೆನ್ನೈ, ಆಗಸ್ಟ್ 17: ತಮಿಳುನಾಡಿನ ಮಾಜಿ ಮುಖ್ಯಮಂತ್ರಿ ಜಯಲಲಿತಾ ಸಾವಿನ ಪ್ರಕರಣವನ್ನು ತನಿಖೆಗೆ ಒಳಪಡಿಸಲಾಗುವುದು ಎಂದು ರಾಜ್ಯದ ಮುಖ್ಯಮಂತ್ರಿ ಎಡಪ್ಪಾಡಿ ಕೆ ಪಳನಿಸ್ವಾಮಿ ಹೇಳಿದ್ದಾರೆ.
ಚೆನ್ನೈನಲ್ಲಿ ಇಂದು ಮಾತನಾಡಿದ ಅವರು ಪ್ರಕರಣದ ತನಿಖೆಗೆ ನಿವೃತ್ತ ಜಡ್ಜ್ ನೇತೃತ್ವದ ತನಿಖಾ ಆಯೋಗ ರಚಿಸಲಾಗುವುದು ಎಂದು ಹೇಳಿದ್ದಾರೆ.

ಇನ್ನು ಜಯಲಲಿತಾರ ಪೊಯೆಸ್ ಗಾರ್ಡನ್ ನಿವಾಸವನ್ನು ಸ್ಮಾರಕವಾಗಿ ಅಭಿವೃದ್ಧಿಪಡಿಸಲಾಗುವುದು ಎಂದೂ ಅವರು ಇದೇ ಸಂದರ್ಭದಲ್ಲಿ ಘೋಷಿಸಿದ್ದಾರೆ.












Click it and Unblock the Notifications