ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಮೋದಿ ಪ್ರಮಾಣ ವಚನ ಸ್ವೀಕಾರಕ್ಕೆ 'ಅಮ್ಮ' ಬರ್ತಿಲ್ಲ

By Mahesh
|
Google Oneindia Kannada News

ಚೆನ್ನೈ, ಮೇ. 25: ನರೇಂದ್ರ ಮೋದಿ ಅವರು ಸೋಮವಾರ ದೇಶದ 15ನೇ ಪ್ರಧಾನಿಯಾಗಿ ಪ್ರಮಾಣ ವಚನ ಸ್ವೀಕರಿಸುವಾಗ ಅವರ ಅಮ್ಮ ಹೀರಾಬೆನ್ ಉಪಸ್ಥಿತರಿರುವುದಿಲ್ಲ. ಅನಾರೋಗ್ಯದ ಕಾರಣ ಮೋದಿ ಅವರ ತಾಯಿ ಕಾರ್ಯಕ್ರಮಕ್ಕೆ ಗೈರು ಹಾಜರಾಗುತ್ತಿದ್ದಾರೆ. ಇದರ ಜತೆಗೆ ತಮಿಳರ ಅಮ್ಮ ಜಯಲಲಿತಾ ಕೂಡಾ ಕಾರ್ಯಕ್ರಮ ಬಹಿಷ್ಕರಿಸುವ ಸುದ್ದಿ ಬಂದಿದೆ.

ತಮಿಳುನಾಡು ಮುಖ್ಯಮಂತ್ರಿ ಜಯಲಲಿತಾ ಅವರು ಮೋದಿ ಅವರ ಪ್ರಮಾಣ ವಚನ ಸ್ವೀಕಾರ ಕಾರ್ಯಕ್ರಮಕ್ಕೆ ಬಹಿಷ್ಕಾರ ಹೇರಿದ್ದಾರೆ ಎಂದು ರಾಷ್ಟ್ರೀಯ ಟಿವಿ ಮಾಧ್ಯಮಗಳು ವರದಿ ಮಾಡಿವೆ. ಮೋದಿ ಅವರ ಪ್ರಮಾಣ ವಚನ ಸ್ವೀಕಾರ ಸಮಾರಂಭಕ್ಕೆ ಶ್ರೀಲಂಕಾ ಅಧ್ಯಕ್ಷ ಮಹಿಂದಾ ರಾಜಪಕ್ಸೆ ಅವರಿಗೆ ಆಹ್ವಾನ ನೀಡಿರುವುದನ್ನು ಖಂಡಿಸಿ ಜಯಲಲಿತಾ ಅವರು ಈ ನಿರ್ಣಯ ಕೈಗೊಂಡಿದ್ದಾರೆ.

Jaya not to attend Modi's swearing-in, won't send any representative too

ತಮಿಳುನಾಡು ಸರ್ಕಾರದ ಯಾವುದೇ ಪ್ರತಿನಿಧಿ ಈ ಕಾರ್ಯಕ್ರಮದಲ್ಲಿ ಭಾಗವಹಿಸುತ್ತಿಲ್ಲ. ಜತೆಗೆ ತಮಿಳುನಾಡಿನನ ಪ್ರಮುಖ ರಾಜಕೀಯ ಪಕ್ಷಗಳು ಸಮಾರಂಭವನ್ನು ಬಹಿಷ್ಕರಿಸಿದೆ ಎನ್ನಲಾಗಿದೆ. ಹಲವು ವಿದ್ಯಾರ್ಥಿ ಸಂಘಟನೆಗಳು ಮೇ.26ರಂದು ಕಪ್ಪು ಬಾವುಟ ಹಿಡಿದು ಪ್ರತಿಭಟನೆ ನಡೆಸಲು ನಿರ್ಧರಿಸಿವೆ.

ಬಿಜೆಪಿ ರಾಷ್ಟ್ರಾಧ್ಯಕ್ಷ ರಾಜನಾಥ್ ಸಿಂಗ್ ಅವರನ್ನು ಭೇಟಿ ಮಾಡಿದ್ದ ಎನ್‌ಡಿಎ ಮೈತ್ರಿಕೂಟದ ಅಂಗ ಪಕ್ಷವಾಗಿರುವ ಎಂಡಿಎಂಕೆ ಮುಖ್ಯಸ್ಥ ವೈಕೋ ಅವರು, ಶ್ರೀಲಂಕಾ ಅಧ್ಯಕ್ಷ ಮಹಿಂದಾ ರಾಜಪಕ್ಸೆ ಅವರಿಗೆ ಆಹ್ವಾನ ನೀಡಿರುವ ಕುರಿತು ಅಸಮಾಧಾನ ವ್ಯಕ್ತಪಡಿಸಿದ್ದರು. ಅಲ್ಲದೆ ಆಹ್ವಾನವನ್ನು ಹಿಂಪಡೆಯುವಂತೆ ಕೋರಿದ್ದರು.

ನವದೆಹಲಿಯಲ್ಲಿರುವ ರಾಷ್ಟ್ರಪತಿ ಭವನದಲ್ಲಿ ಸೋಮವಾರ ಸಂಜೆ 6ಗಂಟೆಗೆ ನರೇಂದ್ರ ಮೋದಿ ಅವರು ದೇಶದ ಪ್ರಧಾನಿಯಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದು, ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅವರು ನರೇಂದ್ರ ಮೋದಿ ಅವರಿಗೆ ಪ್ರತಿಜ್ಞಾವಿಧಿ ಬೋಧಿಸಲಿದ್ದಾರೆ. ಕಾರ್ಯಕ್ರಮದಲ್ಲಿ ದೇಶದ ಸುಮಾರು 2,500ಕ್ಕೂ ಅಧಿಕ ಗಣ್ಯರು ಮತ್ತು ವಿವಿಧ ದೇಶಗಳ ಪ್ರಧಾನಿಗಳು ಮತ್ತು ಸಾರ್ಕ್ ಸಮಿತಿಯ ಸದಸ್ಯರು ಪಾಲ್ಗೊಳ್ಳಲ್ಲಿದ್ದಾರೆ.

English summary
To mark her protest against the presence of Sri Lankan President Mahinda Rajapajkse, Tamil Nadu Chief Minister J Jayalalithaa will skip the swearing of Prime Minister elect Narendra Modi on Monday. Sources also say that she will not be sending any representative for the event as well.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X