ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ರಾಷ್ಟ್ರೀಯ ಪೌರತ್ವ ತಿದ್ದುಪಡಿ; ಕಮಲ ಹಾಸನ್ ಏನಂದ್ರು?

|
Google Oneindia Kannada News

ಚೆನ್ನೈ, ಡಿಸೆಂಬರ್, 11: ರಾಷ್ಟ್ರೀಯ ಪೌರತ್ವ ತಿದ್ದುಪಡಿ ಮಸೂದೆ ವಿರೋಧಿಸಿ ದಕ್ಷಿಣ ಭಾರತದ ಪ್ರಸಿದ್ದ ನಟ ಹಾಗೂ ಮಕ್ಕಳ ನಿಧಿ ಮಯಂ ಪಕ್ಷದ ಅಧ್ಯಕ್ಷ ಕಮಲ ಹಾಸನ್ ಹೇಳಿಕೆ ನೀಡಿದ್ದಾರೆ. ಈ ಮಸೂದೆ ತಾರತಮ್ಯವನ್ನು ಮತ್ತಷ್ಟು ಹೆಚ್ಚು ಮಾಡುವ ಬಿಜೆಪಿಯ ನಡೆಯಾಗಿದೆ ಎಂದು ಅವರು ಹೇಳಿದ್ದಾರೆ.

ಪೌರತ್ವ ತಿದ್ದುಪಡಿ ವಿರೋಧಿಸಿ ಪ್ರತಿಭಟನೆ; ಅಸ್ಸಾಂನಲ್ಲಿ ಮಗು ಸಾವುಪೌರತ್ವ ತಿದ್ದುಪಡಿ ವಿರೋಧಿಸಿ ಪ್ರತಿಭಟನೆ; ಅಸ್ಸಾಂನಲ್ಲಿ ಮಗು ಸಾವು

ಈ ಕುರಿತು ಬುಧವಾರ ಚೆನ್ನೈನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿರುವ ಕಮಲ್ ಹಾಸನ್, ರಾಷ್ಟ್ರೀಯ ಪೌರತ್ವ ತಿದ್ದುಪಡಿ ಮಸೂದೆ ಆರೋಗ್ಯವಂತ ವ್ಯಕ್ತಿಗೆ ಶಸ್ತ್ರ ಚಿಕಿತ್ಸೆ ಮಾಡಲು ಹೊರಟಂತಿದೆ. ಮಸೂದೆಗೆ ತಿದ್ದುಪಡೆ ತರುವ ಮೂಲಕ ಕೇಂದ್ರ ಸರ್ಕಾರ ಸಂವಿಧಾನಕ್ಕೆ ದ್ರೋಹ ಮಾಡಲು ಹೊರಟಿದೆ. ಕೇಂದ್ರದ ಇಂತಹ ನಡೆಯನ್ನು ನವಭಾರತದ ಯುವಕರು ಖಂಡಿಸಬೇಕು ಮತ್ತು ಮುಂದೆ ಇಂತಹ ಕೆಲಸಕ್ಕೆ ಇಳಿಯದಂತೆ ಪಾಠ ಕಲಿಸಬೇಕು ಎಂದು ಅವರು ಹೇಳಿದ್ದಾರೆ.

Kamal Haasan Reaction

ವಿವಾದಿತ ರಾಷ್ಟ್ರೀಯ ಪೌರತ್ವ ತಿದ್ದುಪಡಿ ಮಸೂದೆ ಇಂದು ರಾಜ್ಯಸಭೆಯಲ್ಲಿ ಮಂಡನೆಯಾಗಿ ಚರ್ಚೆ ನಡೆಯುತ್ತಿದೆ. ನಿನ್ನೆ ಲೋಕಸಭೆಯಲ್ಲಿ ಮಹುಮತದೊಂದಿಗೆ ಪಾಸಾಗಿದೆ. ಈ ಹಿನ್ನೆಲೆಯಲ್ಲಿ ಇದರ ವಿರೋಧ ವ್ಯಕ್ತಪಡಿಸಿ ದೇಶಾದ್ಯಂತ ಅನೇಕ ಸಂಘಟನೆಗಳು ಪ್ರತಿಭಟನೆಗೆ ಕರೆ ನೀಡಿವೆ. ಪ್ರತಿಭಟನೆ ಈಶಾನ್ಯ ರಾಜ್ಯಗಳಲ್ಲಿ ತೀವ್ರ ಸ್ವರೂಪ ಪಡೆದುಕೊಂಡಿದೆ.

English summary
Senior actor and Politician Kamal Haasan reacts on Citizenship Amendment Bill. he said cab genarate discrimination in india.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X