ಹಿಂದೂಗಳಲ್ಲಿ ಉಗ್ರವಾದ, ಭಯೋತ್ಪಾದನೆ ಇದೆ : ಕಮಲ್

Posted By:
Subscribe to Oneindia Kannada

ಚೆನ್ನೈ, ನವೆಂಬರ್ 02: ಯೂನಿವರ್ಸಲ್ ಸ್ಟಾರ್ ಕಮಲ್ ಹಾಸನ್ ಮತ್ತೊಮ್ಮೆ ಹಿಂದೂಗಳ ಕೆಂಗಣ್ಣಿಗೆ ಗುರಿಯಾಗಿದ್ದಾರೆ. ಬಲಪಂಥೀಯರಲ್ಲಿ ಉಗ್ರವಾದ ಇದೆ ಎಂಬರ್ಥದಲ್ಲಿ ಹೇಳಿಕೆ ನೀಡಿದ್ದಾರೆ.

ಹಿಂದೂಗಳಲ್ಲಿ ಉಗ್ರವಾದ, ಭಯೋತ್ಪಾದನೆ ಇದೆ, ಇಲ್ಲ ಎಂದು ಬಲಪಂಥೀಯರು ಸವಾಲು ಹಾಕುವಂತಿಲ್ಲ. ಕಾರಣ, ಹಿಂದೂಗಳ ಕ್ಯಾಂಪಿನಲ್ಲೂ ಭಯೋತ್ಪಾದನೆ ಹರಡಿದೆ ಎಂದು ಕಮಲ್ ಹೇಳಿರುವುದನ್ನು ಸಾಮಾಜಿಕ ಜಾಲ ತಾಣಗಳಲ್ಲಿ ತೀವ್ರ ಖಂಡಿಸಲಾಗುತ್ತಿದೆ.

Kamal Haasan steps in with Hindu terror coinage

ಈ ಮುಂಚೆ ಉಗ್ರವಾದ, ವಿಧ್ವಂಸಕ ಕೃತ್ಯಗಳಲ್ಲಿ ಹಿಂದೂಗಳು ತೊಡಗಿಕೊಳ್ಳುತ್ತಿರಲಿಲ್ಲ. ಮಾತಿನ ಮೂಲಕವೇ ಎಲ್ಲಾ ಸಮಸ್ಯೆ ಇತ್ಯರ್ಥ ಮಾಡಿಕೊಳ್ಳುತ್ತಿದ್ದರು. ಮಾತು ಸೋಲುತ್ತಿರುವುದರಿಂದ ಈಗ ತೋಳ್ಬಲ ಬಳಸಲು ಶುರು ಮಾಡಿದ್ದಾರೆ. ಗಲಭೆ, ವಿಧ್ವಂಸಕ ಕೃತ್ಯಗಳಲ್ಲಿ ತೊಡಗುತ್ತಿದ್ದಾರೆ. ಇಂಥ ಕೃತ್ಯಗಳಿಂದ ಯಾರಿಗೂ ಲಾಭವಿಲ್ಲ ಎಂದು ಕಮಲ್ ಹೇಳಿದ್ದಾರೆ.

ನವೆಂಬರ್ 047ರಂದು ಕಮಲ್ ಹಾಸನ್ ಅವರು ತಮ್ಮ ಹೊಸ ಪಕ್ಷದ ಬಗ್ಗೆ ಘೋಷಿಸಲಿದ್ದಾರೆ. ಅಭಿಮಾನಿಗಳು ತಮ್ಮ ನೆಚ್ಚಿನ ನಟನ ಹುಟ್ಟುಹಬ್ಬದ ಸಂಭ್ರಮದ ಜತೆಗೆ ಹೊಸ ಪಕ್ಷವನ್ನು ಸ್ವಾಗತಿಸಲು ಸಿದ್ಧರಾಗಿದ್ದಾರೆ.


ಇತ್ತೀಚೆಗೆ ಕಮಲ್ ಅವರು ಚೆನ್ನೈನ ಎನ್ನೋರ್ ಗೆ ಭೇಟಿ ನೀಡಿ ಮೀನುಗಾರರ ಸಮಸ್ಯೆಗಳನ್ನು ಆಲಿಸಿದ್ದರು. ವಿದ್ಯುತ್ ಸ್ಥಾವರಗಳಿಂದ ಹಾರುವ ಬೂದಿ, ತೈಲ ಘಟಕಗಳ ಕಾರಣದಿಂದ ಅನುಭವಿಸುತ್ತಿರುವ ತೊಂದರೆಗಳ ಬಗ್ಗೆ ಸ್ಥಳೀಯರು ಮಾಹಿತಿ ನೀಡಿದ್ದಾರೆ. ಮಳೆಗಾಲದಲ್ಲಿ ಆಗುವ ಸಮಸ್ಯೆಗಳ ಬಗ್ಗೆ ತಿಳಿಸಿದ್ದರು. ನಂತರ ಈ ಬಗ್ಗೆ ಜಾಗೃತಿ ಮೂಡಿಸಿದ್ದರು.

ಕನ್ನಡ ಮ್ಯಾಟ್ರಿಮನಿಯಲ್ಲಿ ಸೂಕ್ತ ಸಂಗಾತಿಯನ್ನು ಆಯ್ಕೆ ಮಾಡಿ- ನೋಂದಣಿ ಉಚಿತ!

English summary
Kamal Haasan has hit out at the right-wing saying they cannot challenge anyone saying there are Hindu terrorists, because there are!

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ