ನಟ ಕಮಲ್ ಹಾಸನ್ ಆಸ್ಪತ್ರೆಗೆ ದಾಖಲು
ಚೆನ್ನೈ, ಸೆ.16 : ನಟ ಕಮಲ್ ಹಾಸನ್ ಆರೋಗ್ಯದಲ್ಲಿ ಏರುಪೇರಾಗಿದ್ದು ಅವರನ್ನು ಚೆನ್ನೈನ ಅಪೊಲೋ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಮಂಗಳವಾರ ಬೆಳಗ್ಗೆ ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದ್ದು ಸಂಜೆ ಅಥವ ಬುಧವಾರ ಡಿಸ್ಚಾರ್ಜ್ ಮಾಡುವ ಸಾಧ್ಯತೆ ಇದೆ ಎಂದು ವೈದ್ಯರು ಹೇಳಿದ್ದಾರೆ.
ಪುಡ್ ಪಾಯ್ಸನ್‌ನಿಂದಾಗಿ ಕಮಲ್ ಹಾಸನ್ ಆರೋಗ್ಯದಲ್ಲಿ ಏರುಪೇರಾಗಿತ್ತು ಎಂದು ಅಪೊಲೋ ಆಸ್ಪತ್ರೆ ವೈದ್ಯರು ಹೇಳಿದ್ದಾರೆ. ಇಂದು ಬೆಳಗ್ಗೆ ಕಮಲ್ ಹಾಸನ್ ಅವರನ್ನು ಆಸ್ಪತ್ರೆಗೆ ದಾಖಲಿಸಿಕೊಂಡಿದ್ದೇವೆ. ಅವರಿಗೆ ಅಗತ್ಯ ಚಿಕಿತ್ಸೆ ನೀಡಲಾಗುತ್ತಿದ್ದು, ಇಂದು ಸಂಜೆ ಅಥವ ಬುಧವಾರ ಅವರನ್ನು ಡಿಸ್ಚಾರ್ಚ್ ಮಾಡಲಾಗುತ್ತದೆ ಎಂದು ವೈದ್ಯರು ತಿಳಿಸಿದ್ದಾರೆ.

ಕಮಲ್ ಹಾಸನ್ ಅವರು ವಿಶ್ವರೂಪಂ 2 ಮತ್ತು ಉತ್ತಮ ವಿಲನ್ ಚಿತ್ರಗಳ ಕೆಲಸಗಳಲ್ಲಿ ಬ್ಯುಸಿಯಾಗಿದ್ದರು. ಆದ್ದರಿಂದ ಎರಡು ದಿನದಿಂದ ಸರಿಯಾಗಿ ಆಹಾರ ಸೇವಿಸಿರಲಿಲ್ಲ ಮತ್ತು ನಿದ್ರೆ ಮಾಡಿರಲಿಲ್ಲ. ಅವರಿಗೆ ಅಗತ್ಯ ಚಿಕಿತ್ಸೆ ನೀಡಲಾಗಿದ್ದು, ವಿಶ್ರಾಂತಿ ಪಡೆದುಕೊಳ್ಳುತ್ತಿದ್ದಾರೆ. ಅವರ ಅಭಿಮಾನಿಗಳು ಆತಂಕಪಡುವ ಅಗತ್ಯವಿಲ್ಲ ಎಂದು ಅಪೊಲೋ ಆಸ್ಪತ್ರೆ ವೈದ್ಯರು ಮಾಧ್ಯಮಗಳ ಮೂಲಕ ಕರೆ ನೀಡಿದ್ದಾರೆ. [ನಾಸ್ತಿಕ ಕಮಲ್ ಹಾಸನ್, ತ್ರಿನಾಮ ಮಠದಲ್ಲಿ ಪ್ರತ್ಯಕ್ಷ]












Click it and Unblock the Notifications