ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಮಾಜಿ ಮುಖ್ಯಮಂತ್ರಿ ಕರುಣಾನಿಧಿ ಆರೋಗ್ಯದಲ್ಲಿ ಏರುಪೇರು, ಗಣ್ಯರ ಭೇಟಿ

|
Google Oneindia Kannada News

Recommended Video

ತಮಿಳುನಾಡಿನ ಮಾಜಿ ಸಿಎಂ ಎಂ ಕರುಣಾನಿಧಿ ಆರೋಗ್ಯದಲ್ಲಿ ಏರುಪೇರು | Oneindia Kannada

ಚೆನ್ನೈ, ಜುಲೈ 27: ತಮಿಳುನಾಡಿನ ಮಾಜಿ ಮುಖ್ಯಮಂತ್ರಿ ಮತ್ತು ಡಿಎಂಕೆ ಮುಖ್ಯಸ್ಥ ಎಂ. ಕರುಣಾನಿಧಿ ಅವರ ಆರೋಗ್ಯದಲ್ಲಿ ಏರುಪೇರು ಉಂಟಾಗಿದೆ.

ಮೂತ್ರನಾಳದಲ್ಲಿನ ಸೋಂಕಿಗೆ ಒಳಗಾಗಿರುವ ಕರುಣಾನಿಧಿ, ಜ್ವರದಿಂದ ಬಳಲುತ್ತಿದ್ದಾರೆ. ಗುರುವಾರ ರಾತ್ರಿ ಅವರ ಆರೋಗ್ಯ ಸ್ಥಿತಿಯಲ್ಲಿ ಏರುಪೇರಾದ ಕಾರಣ, ಗೋಪಾಲಪುರಂನಲ್ಲಿರುವ ಅವರ ನಿವಾಸದಲ್ಲಿಯೇ ಚಿಕಿತ್ಸೆ ನೀಡಲಾಗುತ್ತಿದೆ.

ಕೆಸಿಆರ್‌ ತೃತೀಯ ರಂಗಕ್ಕೆ ಕರುಣಾನಿಧಿ ಬಲಕೆಸಿಆರ್‌ ತೃತೀಯ ರಂಗಕ್ಕೆ ಕರುಣಾನಿಧಿ ಬಲ

ಕಾವೇರಿ ಆಸ್ಪತ್ರೆಯ ಪ್ರಮುಖ ವೈದ್ಯರು ಕರುಣಾನಿಧಿ ಅವರ ಮನೆಯಲ್ಲಿದ್ದು, ಅವರ ಆರೋಗ್ಯ ತಪಾಸಣೆ ಹಾಗೂ ಚಿಕಿತ್ಸೆ ನೀಡುತ್ತಿದ್ದಾರೆ.

karunanidhi health slight decline treated at residency

ಕರುಣಾನಿಧಿ ಅವರ ಅನಾರೋಗ್ಯ ಡಿಎಂಕೆ ಬೆಂಬಲಿಗರಲ್ಲಿ ಆತಂಕ ಮೂಡಿಸಿದ್ದು, ಅವರ ನಿವಾಸದ ಎದುರು ಅಭಿಮಾನಿಗಳು ಹಾಗೂ ಪಕ್ಷದ ಕಾರ್ಯಕರ್ತರ ದಂಡು ನೆರೆದಿದೆ.

ತಮಿಳುನಾಡು ಉಪಮುಖ್ಯಮಂತ್ರಿ ಓ ಪನೀರ್‌ಸೆಲ್ವಂ ಹಾಗೂ ಎಐಎಡಿಎಂಕೆಯ ವಿವಿಧ ಮುಖಂಡರು ಗೋಪಾಲಪುರಂನ ನಿವಾಸಕ್ಕೆ ಭೇಟಿ ನೀಡಿದರು. ಕರುಣಾನಿಧಿ ಅವರ ಮಗ, ಡಿಎಂಕೆ ಕಾರ್ಯಾಧ್ಯಕ್ಷ ಎಂ.ಕೆ. ಸ್ಟಾಲಿನ್ ಅವರೊಂದಿಗೆ ಮಾತುಕತೆ ನಡೆಸಿದರು.

ನಟ ಕಮಲಹಾಸನ್ ಕೂಡ ಗುರುವಾರ ಸಂಜೆ ಸ್ಟಾಲಿನ್ ಅವರನ್ನು ಭೇಟಿ ಮಾಡಿ ಕರುಣಾನಿಧಿ ಅವರ ಆರೋಗ್ಯ ವಿಚಾರಿಸಿದರು.

ರಾಜಕೀಯ ಪಕ್ಷವೊಂದರ ಅಧ್ಯಕ್ಷರಾಗಿ 50 ವರ್ಷ ಪೂರೈಸಿದ ಮೊದಲ ರಾಜಕಾರಣಿ ಎಂಬ ಹೆಗ್ಗಳಿಕೆಗೆ ಪಾತ್ರರಾಗಿರುವ 94 ವರ್ಷದ ಕರುಣಾನಿಧಿ, ಹಲವು ವರ್ಷಗಳಿಂದ ಮನೆಯಲ್ಲಿಯೇ ಚಿಕಿತ್ಸೆ ಪಡೆಯುತ್ತಿದ್ದಾರೆ.

ಕರುಣಾನಿಧಿ ಅವರ ಅನಾರೋಗ್ಯದ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ವದಂತಿಗಳು ಹರಿದಾಡುತ್ತಿವೆ. ಅವರ ಆರೋಗ್ಯದಲ್ಲಿ ಸುಧಾರಣೆಯಾಗಿದ್ದು, ಕೆಲವೇ ದಿನಗಳಲ್ಲಿ ಹುಷಾರಾಗಲಿದ್ದಾರೆ ಎಂದು ಸ್ಟಾಲಿನ್ ಸ್ಪಷ್ಟಪಡಿಸಿದ್ದಾರೆ.

English summary
Tamil Nadu DMK chief M. Karunanidhi' treated by a team of doctors for fever due to urinary tract infection with intravenous antibiotics and fluids.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X