• search
  • Live TV
ಚೆನ್ನೈ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ಎಂ ಕರುಣಾನಿಧಿ ಆರೋಗ್ಯ ಸ್ಥಿರವಾಗಿದೆ: ಕನ್ನಿಮೋಳಿ

|

ಚೆನ್ನೈ, ಜುಲೈ 28: ತಮಿಳುನಾಡಿನ ಮಾಜಿ ಮುಖ್ಯಮಂತ್ರಿ ಎಂ ಕರುಣಾನಿಧಿ ಅವರ ಆರೋಗ್ಯ ಸ್ಥಿರವಾಗಿದೆ ಎಂದು ಅವರ ಪುತ್ರಿ ಮತ್ತು ಸಂಸದೆ ಕನ್ನಿಮೋಳಿ ಹೇಳಿದ್ದಾರೆ.

"ಕರುಣಾನಿಧಿ ಅವರ ಆರೋಗ್ಯ ಸ್ಥಿರವಾಗಿದೆ. ಮತ್ತು ಅವರ ರಕ್ತದೊತ್ತಡವೂ ಸ್ತಿರವಾಗಿದೆ" ಎಂದು ಕನ್ನಿಮೋಳಿ ಪತ್ರಕರ್ತರಿಗೆ ತಿಳಿಸಿದರು.

ಎಂ.ಕರುಣಾನಿಧಿ ಆರೋಗ್ಯ ಸ್ಥಿತಿ ಗಂಭೀರ: ಆಸ್ಪತ್ರೆ ಎದುರು ಜಮಾಯಿಸಿದ ಅಭಿಮಾನಿಗಳು

ಜ್ವರ ತ್ತು ಮೂತ್ರನಾಳ ಸೋಂಕಿನಿಂದ ಬಳಲುತ್ತಿದ್ದ ಡಿಎಂಕೆ ಮುಖ್ಯಸ್ಥ ಕರುಣಾನಿಧಿ ಅವರ ಆರೋಗ್ಯ ಸ್ಥಿತಿ ನಿನ್ನೆ ಗಂಭೀರವಾಗಿದ್ದ ಕಾರಣ ಅವರಿಗೆ ಮನೆಯಲ್ಲಿಯೇ ಚಿಕಿತೆ ನೀಡಲಾಗುತ್ತಿತ್ತು. ಆದರೆ ರಾತ್ರಿಯ ಹೊತ್ತಲ್ಲಿ ಅವರ ರಕ್ತದೊತ್ತಡ ತೀರಾ ಕಡಿಮೆಯಾದ ಪರಿಣಾಮ ಅವರನ್ನು ಚೆನ್ನೈಯ ಕಾವೇರಿ ಆಸ್ಪತ್ರೆಗೆ ದಾಖಲಿಸಲಾಗಿತ್ತು.

ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್, ತಮಿಳುನಾಡು ರಾಜ್ಯಪಾಲ ಬನ್ವಾರಿಲಾಲ್ ಪುರೋಹಿತ್ ಮತ್ತು ಕಾಂಗ್ರೆಸ್ ನಾಯಕ ಗುಲಾಮ್ ನಬಿ ಆಜಾದ್ ಇಂದು ಆಸ್ಪತ್ರೆಗೆ ಭೇಟಿ ನೀಡಿ ಕರುಣಾನಿಧಿ ಅವರ ಆರೋಗ್ಯದ ಕುರಿತು ವಿಚಾರಿಸಿದ್ದಾರೆ.

English summary
Dravida Munnetra Kazhagam (DMK) chief M. Karunanidhi's daughter and Rajya Sabha Member of Parliament (MP) Kanimozhi on Saturday informed that his father's health condition is now better.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X