• search
  • Live TV
ಚೆನ್ನೈ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ಶಿಕ್ಷಕರ ದಿನವೇ ಸರ್ವಪಲ್ಲಿ ರಾಧಾಕೃಷ್ಣನ್ ಅವರ ಮೊಮ್ಮಗ ನಿಧನ

|
Google Oneindia Kannada News

ಶಿಕ್ಷಕರ ದಿನವೇ ಸರ್ವಪಲ್ಲಿ ರಾಧಾಕೃಷ್ಣನ್ ಅವರ ಮೊಮ್ಮಗ ನಿಧನರಾಗಿದ್ದಾರೆ. ಮಾಜಿ ರಾಷ್ಟ್ರಪತಿ, ವಿದ್ವಾಂಸ, ತತ್ವಜ್ಞಾನಿ ಮತ್ತು ಭಾರತ ರತ್ನ ಪ್ರಶಸ್ತಿ ಪುರಸ್ಕೃತ ಡಾ.ಸರ್ವಪಲ್ಲಿ ರಾಧಾಕೃಷ್ಣನ್ ಅವರ ಜನ್ಮದಿನವನ್ನು (ಸೆಪ್ಟೆಂಬರ್ 5) ಭಾರತದಲ್ಲಿ ಶಿಕ್ಷಕರ ದಿನವನ್ನಾಗಿ ಆಚರಿಸಲಾಗುತ್ತದೆ.

ಅನಾರೋಗ್ಯದಿಂದ ಬಳಲುತ್ತಿದ್ದ ಕೇಶವ ದೇಸಿರಾಜು (66) ಅವರು ಸೆಪ್ಟೆಂಬರ್ 5ರಂದು ಬೆಳಗ್ಗೆ ಚೆನ್ನೈನ ಅಲ್ವಾರಪೇಟೆಯ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು. ರಾಜಸ್ಥಾನ ಸರ್ಕಾರದ ಆರ್ಥಿಕ ಪರಿವರ್ತನಾ ಸಲಹಾ ಮಂಡಳಿಯ ಸದಸ್ಯರೂ ಆಗಿದ್ದ ಕೇಶವ ದೇಸಿರಾಜು ಅವರ ಸಾವಿಗೆ ರಾಜಸ್ಥಾನ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಸಂತಾಪ ವ್ಯಕ್ತಪಡಿಸಿದ್ದಾರೆ.

ಅಷ್ಟೇ ಅಲ್ಲ, ಒಬ್ಬ ಮಹಾನ್ ಶಿಕ್ಷಣ ತಜ್ಞ ಮತ್ತು ಭಾರತದ ಮಾಜಿ ರಾಷ್ಟ್ರಪತಿ ಡಾ.ಎಸ್.ರಾಧಾಕೃಷ್ಣನ್ ಅವರ ಮೊಮ್ಮಗನಾಗಿದ್ದರು. ಆ ದೇವರು ಅವರ ಕುಟುಂಬಕ್ಕೆ ದುಃಖ ಭರಿಸುವ ಶಕ್ತಿ ನೀಡಲಿ ಎಂದು ಸಿಎಂ ಗೆಹ್ಲೋಟ್ ಟ್ವೀಟ್​ ಮಾಡಿದ್ದಾರೆ.

ರಾಧಾಕೃಷ್ಣನ್ ಅವರ ಮೊಮ್ಮಗ ಹಾಗೂ ಕೇಂದ್ರ ಆರೋಗ್ಯ ಇಲಾಖೆಯ ಮಾಜಿ ಕಾರ್ಯದರ್ಶಿ ಕೇಶವ ದೇಸಿರಾಜು ಮೃತಪಟ್ಟಿದ್ದಾರೆ. ಅವರೊಬ್ಬ ವಿಶಿಷ್ಟ, ಸೌಮ್ಯ ಮತ್ತು ಸೃಜನಶೀಲ ಚಿಂತಕರಾಗಿದ್ದರು ಮತ್ತು ಮಹೋನ್ನತ ವ್ಯಕ್ತಿಯಾಗಿದ್ದರು.

ಐಎಎಸ್ ಅಧಿಕಾರಿಯಾಗಿದ್ದ ದೇಸಿರಾಜು ಅವರು 2016 ರಲ್ಲಿ ಹುದ್ದೆಯಿಂದ ನಿವೃತ್ತರಾಗಿದ್ದರು. ಇವರು ಕೇಂದ್ರ ಸರ್ಕಾರ ಹಾಗೂ ಉತ್ತರ ಪ್ರದೇಶ, ರಾಜಸ್ಥಾನ ಮತ್ತು ಉತ್ತರಾಖಂಡ ಸರ್ಕಾರಗಳಲ್ಲಿ ವಿವಿಧ ಜವಾಬ್ದಾರಿಗಳನ್ನು ನಿರ್ವಹಿಸಿದ್ದಾರೆ.

ಗಾಯಕಿ ಎಂ.ಎಸ್. ಸುಬ್ಬುಲಕ್ಷ್ಮಿ ಅವರ ಜೀವನ ಚರಿತ್ರೆಯಾದ 'ದಿ ಲೈಫ್ ಅಂಡ್ ಆರ್ಟ್ ಆಫ್ ಎಂ.ಎಸ್. ಸುಬ್ಬುಲಕ್ಷ್ಮಿ' ಪುಸ್ತಕವನ್ನು ಕೇಶವ ದೇಸಿರಾಜು ಬರೆದಿದ್ದಾರೆ.

English summary
Former Union Health Secretary Keshav Desiraju passed away at a private hospital in Chennai due to acute coronary syndrome on Sunday.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X