ಚೆನ್ನೈ : ಕೆಎಸ್ಆರ್‌ಟಿಸಿ ಐರಾವತ ಬಸ್ಸಿಗೆ ಬೆಂಕಿ, ಪ್ರಯಾಣಿಕರು ಪಾರು
ಚೆನ್ನೈ, ಆ.12 : ಕೆಎಸ್ಆರ್‌ಟಿಸಿ ಐರಾವತ ಬಸ್‌ನಲ್ಲಿ ಬೆಂಕಿ ಕಾಣಿಸಿಕೊಂಡ ಘಟನೆ ಚೆನ್ನೈ ಸಮೀಪ ನಡೆದಿದೆ. ಪ್ರಯಾಣಿಕರು ಮತ್ತು ಸಿಬ್ಬಂದಿಗಳು ಸುರಕ್ಷಿತವಾಗಿದ್ದಾರೆ.
ಶನಿವಾರ ಬೆಳಗ್ಗೆ 8.45ರ ಸುಮಾರಿಗೆ ಪೂನಮಲ್ಲೀ ಸಮೀಪ ಐರಾವತ ಬಸ್ಸಿಗೆ ಬೆಂಕಿ ಹೊತ್ತಿಕೊಂಡಿದೆ. ತಕ್ಷಣ ಡ್ರೈವರ್ ಬಸ್ಸನ್ನು ನಿಲ್ಲಿಸಿ ಪ್ರಯಾಣಿಕರನ್ನು ಕೆಳಗಿಳಿಸಿದ್ದಾರೆ. ನಾಲ್ಕು ಅಗ್ನಿ ಶಾಮಕ ದಳದ ವಾಹನಗಳು ಸ್ಥಳಕ್ಕೆ ಆಗಮಿಸಿ ಬೆಂಕಿ ನಂದಿಸಿವೆ.

ಬೆಂಗಳೂರಿನಿಂದ ಚೆನ್ನೈಗೆ ತೆರಳುತ್ತಿದ್ದ ಬಸ್ಸಿನಲ್ಲಿ 44 ಪ್ರಯಾಣಿಕರಿದ್ದರು. ಚೆನ್ನೈನ ಕೋಯಂಬೀಡು ಬಸ್ ನಿಲ್ದಾಣದಿಂದ ಸುಮಾರು 14 ಕಿ.ಮೀ.ದೂರದಲ್ಲಿ ಈ ಅಪಘಡ ನಡೆದಿದೆ. ಪ್ರಯಾಣಿಕರ ಲಗೇಜ್‌ಗಳು ಬೆಂಕಿಗೆ ಆಹುತಿಯಾಗಿವೆ.












Click it and Unblock the Notifications