ತಮಿಳುನಾಡಿನ 4 ಜಿಲ್ಲೆ ಸಂಪೂರ್ಣ ಲಾಕ್ ಡೌನ್
ಚೆನ್ನೈ, ಜೂನ್ 15 : ತಮಿಳುನಾಡು ಸರ್ಕಾರ ಕೊರೊನಾ ವೈರಸ್ ಸೋಂಕು ನಿಯಂತ್ರಣಕ್ಕೆ ತರಲು 4 ಜಿಲ್ಲೆಗಳಲ್ಲಿ ಸಂಪೂರ್ಣ ಲಾಕ್ ಡೌನ್ ಘೋಷಣೆ ಮಾಡಿದೆ. ಜೂನ್ 19ರಿಂದ 30ರ ತನಕ ಅಗತ್ಯ ಸೇವೆ ಹೊರತುಪಡಿಸಿ ಉಳಿದ ಎಲ್ಲಾ ಸೇವೆಗಳು ಬಂದ್ ಆಗಿರುತ್ತದೆ.
Recommended Video
ಚೆನ್ನೈ, ತಿರುವಳ್ಳೂರು, ಕಾಂಚಿಪುರಂ, ಚೆಂಗಲ್‌ಪಟ್ಟು ಜಿಲ್ಲೆಯಲ್ಲಿ ಸಂಪೂರ್ಣ ಲಾಕ್ ಡೌನ್ ಘೋಷಣೆ ಮಾಡಲಾಗಿದೆ. ತಮಿಳುನಾಡು ಸರ್ಕಾರ ಸೋಮವಾರ ಈ ಕುರಿತು ಆದೇಶ ಹೊರಡಿಸಿದೆ. ಅಗತ್ಯ ಸೇವೆಗಳನ್ನು ಮಾರಾಟ ಮಾಡುವ ಅಂಗಡಿಗಳು ಮಾತ್ರ ಬಾಗಿಲು ತೆರೆಯಬಹುದಾಗಿದೆ.

ಈ ನಾಲ್ಕು ಜಿಲ್ಲೆಯಲ್ಲಿ ಬೆಳಗ್ಗೆ 6 ರಿಂದ ಮಧ್ಯಾಹ್ನ 2 ಗಂಟೆ ತನಕ ಮಾತ್ರ ಅಂಗಡಿಗಳನ್ನು ತೆರೆಯಬಹುದಾಗಿದೆ ಎಂದು ಸರ್ಕಾರ ಹೇಳಿದೆ. ಪೊಲೀಸರು ತಂಡಗಳನ್ನು ರಚನೆ ಮಾಡಿಕೊಂಡು ಲಾಕ್ ಡೌನ್ ಕಟ್ಟುನಿಟ್ಟಾಗಿ ಜಾರಿಗೊಳಿಸಲಿದ್ದಾರೆ.
ದಿನಸಿ ಅಂಗಡಿ, ತರಕಾರಿ ಅಂಗಡಿ, ಪೆಟ್ರೋಲ್ ಬಂಕ್ ಮುಂತಾದ ಅಂಗಡಿಗಳು 6 ರಿಂದ 2 ಗಂಟೆ ತನಕ ಮಾತ್ರ ತೆರೆಯಬಹುದಾಗಿದೆ. ಖಾಸಗಿ ಕಾರು ಮತ್ತು ಬೈಕ್‌ನಲ್ಲಿ ಜನರು 2 ಕಿ. ಮೀ. ತನಕ ಮಾತ್ರ ಸಂಚಾರ ನಡೆಸಬಹುದಾಗಿದೆ.
ಈ ನಾಲ್ಕು ಜಿಲ್ಲೆಗಳಲ್ಲಿ ಕೋವಿಡ್ - 19 ಸ್ಥಿತಿಗತಿಗಳ ಕುರಿತು ಪರಿಶೀಲನೆ ನಡೆಸಲು ಮುಖ್ಯಮಂತ್ರಿ ಪಳನಿಸ್ವಾಮಿ ಸಮಿತಿಯೊಂದನ್ನು ರಚನೆ ಮಾಡಿದ್ದಾರೆ. 4 ಜಿಲ್ಲೆಗಳಲ್ಲಿ ವೈದ್ಯಕೀಯ ಸೇವೆಗಳಿಗೆ ಯಾವುದೇ ನಿರ್ಬಂಧ ಇರುವುದಿಲ್ಲ ಎಂದು ಸ್ಪಷ್ಟಪಡಿಸಲಾಗಿದೆ.
ತಮಿಳುನಾಡಿನಲ್ಲಿ ಪ್ರಸ್ತುತ ಕೋವಿಡ್ - 19 ಸೋಂಕಿತರ ಸಂಖ್ಯೆ 44,661. ಚೆನ್ನೈ ನಗರದಲ್ಲಿ 31,896 ಪ್ರಕರಣಗಳಿವೆ. ಕೊರೊನಾ ವೈರಸ್ ಸೋಂಕು ಹೆಚ್ಚಿರುವ 4 ಜಿಲ್ಲೆಗಳಲ್ಲಿ ಲಾಕ್ ಡೌನ್ ಘೋಷಣೆ ಮಾಡಲಾಗಿದೆ.












Click it and Unblock the Notifications