ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ತಮಿಳುನಾಡಿನ 4 ಜಿಲ್ಲೆ ಸಂಪೂರ್ಣ ಲಾಕ್ ಡೌನ್

|
Google Oneindia Kannada News

ಚೆನ್ನೈ, ಜೂನ್ 15 : ತಮಿಳುನಾಡು ಸರ್ಕಾರ ಕೊರೊನಾ ವೈರಸ್ ಸೋಂಕು ನಿಯಂತ್ರಣಕ್ಕೆ ತರಲು 4 ಜಿಲ್ಲೆಗಳಲ್ಲಿ ಸಂಪೂರ್ಣ ಲಾಕ್ ಡೌನ್ ಘೋಷಣೆ ಮಾಡಿದೆ. ಜೂನ್ 19ರಿಂದ 30ರ ತನಕ ಅಗತ್ಯ ಸೇವೆ ಹೊರತುಪಡಿಸಿ ಉಳಿದ ಎಲ್ಲಾ ಸೇವೆಗಳು ಬಂದ್ ಆಗಿರುತ್ತದೆ.

Recommended Video

Eating Garlic During Pregnancy – Benefits, Risks | Oneindia Kannada

ಚೆನ್ನೈ, ತಿರುವಳ್ಳೂರು, ಕಾಂಚಿಪುರಂ, ಚೆಂಗಲ್‌ಪಟ್ಟು‌ ಜಿಲ್ಲೆಯಲ್ಲಿ ಸಂಪೂರ್ಣ ಲಾಕ್ ಡೌನ್ ಘೋಷಣೆ ಮಾಡಲಾಗಿದೆ. ತಮಿಳುನಾಡು ಸರ್ಕಾರ ಸೋಮವಾರ ಈ ಕುರಿತು ಆದೇಶ ಹೊರಡಿಸಿದೆ. ಅಗತ್ಯ ಸೇವೆಗಳನ್ನು ಮಾರಾಟ ಮಾಡುವ ಅಂಗಡಿಗಳು ಮಾತ್ರ ಬಾಗಿಲು ತೆರೆಯಬಹುದಾಗಿದೆ.

ಕೊರೊನಾ ವಿರುದ್ಧ ಹೋರಾಟ: ಬೆಂಗಳೂರಿನಿಂದ ಚೆನ್ನೈ ಕಲಿಯಬೇಕಾದ 6 ಸಂಗತಿಕೊರೊನಾ ವಿರುದ್ಧ ಹೋರಾಟ: ಬೆಂಗಳೂರಿನಿಂದ ಚೆನ್ನೈ ಕಲಿಯಬೇಕಾದ 6 ಸಂಗತಿ

Lockdown Extended Till June 30th In Chennai, Thiruvallur, Chengalpet Kanchipuram Districts

ಈ ನಾಲ್ಕು ಜಿಲ್ಲೆಯಲ್ಲಿ ಬೆಳಗ್ಗೆ 6 ರಿಂದ ಮಧ್ಯಾಹ್ನ 2 ಗಂಟೆ ತನಕ ಮಾತ್ರ ಅಂಗಡಿಗಳನ್ನು ತೆರೆಯಬಹುದಾಗಿದೆ ಎಂದು ಸರ್ಕಾರ ಹೇಳಿದೆ. ಪೊಲೀಸರು ತಂಡಗಳನ್ನು ರಚನೆ ಮಾಡಿಕೊಂಡು ಲಾಕ್ ಡೌನ್ ಕಟ್ಟುನಿಟ್ಟಾಗಿ ಜಾರಿಗೊಳಿಸಲಿದ್ದಾರೆ.

ಚೆನ್ನೈ ತರಕಾರಿ ಮಾರುಕಟ್ಟೆಯ 150 ಮಂದಿಗೆ ಕೋವಿಡ್ ಪರೀಕ್ಷೆ ಚೆನ್ನೈ ತರಕಾರಿ ಮಾರುಕಟ್ಟೆಯ 150 ಮಂದಿಗೆ ಕೋವಿಡ್ ಪರೀಕ್ಷೆ

ದಿನಸಿ ಅಂಗಡಿ, ತರಕಾರಿ ಅಂಗಡಿ, ಪೆಟ್ರೋಲ್ ಬಂಕ್ ಮುಂತಾದ ಅಂಗಡಿಗಳು 6 ರಿಂದ 2 ಗಂಟೆ ತನಕ ಮಾತ್ರ ತೆರೆಯಬಹುದಾಗಿದೆ. ಖಾಸಗಿ ಕಾರು ಮತ್ತು ಬೈಕ್‌ನಲ್ಲಿ ಜನರು 2 ಕಿ. ಮೀ. ತನಕ ಮಾತ್ರ ಸಂಚಾರ ನಡೆಸಬಹುದಾಗಿದೆ.

ತಮಿಳುನಾಡು; ಕೆಲವು ನಗರದಲ್ಲಿ ಲಾಕ್ ಡೌನ್ ನಿಯಮ ಸಡಿಲಿಕೆ ತಮಿಳುನಾಡು; ಕೆಲವು ನಗರದಲ್ಲಿ ಲಾಕ್ ಡೌನ್ ನಿಯಮ ಸಡಿಲಿಕೆ

ಈ ನಾಲ್ಕು ಜಿಲ್ಲೆಗಳಲ್ಲಿ ಕೋವಿಡ್ - 19 ಸ್ಥಿತಿಗತಿಗಳ ಕುರಿತು ಪರಿಶೀಲನೆ ನಡೆಸಲು ಮುಖ್ಯಮಂತ್ರಿ ಪಳನಿಸ್ವಾಮಿ ಸಮಿತಿಯೊಂದನ್ನು ರಚನೆ ಮಾಡಿದ್ದಾರೆ. 4 ಜಿಲ್ಲೆಗಳಲ್ಲಿ ವೈದ್ಯಕೀಯ ಸೇವೆಗಳಿಗೆ ಯಾವುದೇ ನಿರ್ಬಂಧ ಇರುವುದಿಲ್ಲ ಎಂದು ಸ್ಪಷ್ಟಪಡಿಸಲಾಗಿದೆ.

ತಮಿಳುನಾಡಿನಲ್ಲಿ ಪ್ರಸ್ತುತ ಕೋವಿಡ್ - 19 ಸೋಂಕಿತರ ಸಂಖ್ಯೆ 44,661. ಚೆನ್ನೈ ನಗರದಲ್ಲಿ 31,896 ಪ್ರಕರಣಗಳಿವೆ. ಕೊರೊನಾ ವೈರಸ್ ಸೋಂಕು ಹೆಚ್ಚಿರುವ 4 ಜಿಲ್ಲೆಗಳಲ್ಲಿ ಲಾಕ್ ಡೌನ್ ಘೋಷಣೆ ಮಾಡಲಾಗಿದೆ.

English summary
Tamil Nadu government announced complete lock down in Chennai, Tiruvallur, Kanchipuram and Chengalpattu districts from June 19 to June 30, 2020.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X