• search

ಕಾಂಗ್ರೆಸ್ ಜತೆ ಕೈ ಜೋಡಿಸಲು ಷರತ್ತು ಹಾಕಿದ ಕಮಲ್ ಹಾಸನ್

Subscribe to Oneindia Kannada
For chennai Updates
Allow Notification
For Daily Alerts
Keep youself updated with latest
chennai News
    ಕಾಂಗ್ರೆಸ್ ಜತೆ ಕೈ ಜೋಡಿಸಲು ಷರತ್ತು ಹಾಕಿದ ಕಮಲ್ ಹಾಸನ್ | Oneindia Kannada

    ಚೆನ್ನೈ, ಅಕ್ಟೋಬರ್ 14: ಭಾರತೀಯ ಚಿತ್ರರಂಗದ ಸ್ಟಾರ್ ನಟ ಕಮಲ್ ಹಾಸನ್ ಅವರು ಕಾಂಗ್ರೆಸ್ ಜತೆ ಕೈ ಜೋಡಿಸಲು ಸಿದ್ಧ ಎಂದು ಘೋಷಿಸಿದ್ದಾರೆ. ಆದರೆ, ಇದಕ್ಕೆ ಷರತ್ತು ವಿಧಿಸಿದ್ದಾರೆ.

    ತಮ್ಮ ಪಕ್ಷವಾದ ಮಕ್ಕಳ್ ನೀದಿ ಮೈಯಂ(ಎಂಎನ್ಎಂ), ಕಾಂಗ್ರೆಸ್ ಜತೆ ಮೈತ್ರಿಗೆ ಸಿದ್ಧವಿದೆ ಆದರೆ, ಡಿಎಂಕೆ ಜತೆ ಮೈತ್ರಿಯನ್ನು ಕಾಂಗ್ರೆಸ್ ಬಿಟ್ಟು ಬಿಡಬೇಕು ಎಂದು ಷರತ್ತು ವಿಧಿಸಿದ್ದಾರೆ.

    ಕಳೆದ ಸೆಪ್ಟೆಂಬರ್ ತಿಂಗಳಿನಲ್ಲಿ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ್ದ ಕಮಲ್ ಹಾಸನ್ ಅವರು ಈಗ ಮೈತ್ರಿ ಸಾಧ್ಯತೆ ಬಗ್ಗೆ ಹೇಳುತ್ತಿದ್ದಾರೆ.

    Kamal Haaasan talks about congess MNM alliance

    ರಜನಿಕಾಂತ್ ಮತ್ತು ಕಮಲ್ ಹಾಸನ್ ಇವರಲ್ಲಿ ಯಾರು ರಾಜ್ಯದ ರಾಜಕಾರಣದಲ್ಲಿ ಕಿಂಗ್ ಮೇಕರ್ ಆಗಲಿದ್ದಾರೆ ಎಂಬ ಚರ್ಚೆ ಆರಂಭವಾಗಿದೆ.

    ತಮಿಳು ನಾಡು ರಾಜಕೀಯದಲ್ಲಿ ಕಿಂಗ್ ಮೇಕರ್ ಯಾರು?

    ತಮಿಳುನಾಡು ರಾಜ್ಯದಲ್ಲಿ 39 ಲೋಕಸಭಾ ಸ್ಥಾನಗಳಿವೆ. ಎಂ.ಕರುಣಾನಿಧಿ ಅವರು ಯುಪಿಎ, ಎನ್‌ಡಿಎ ಎರಡೂ ಮೈತ್ರಿಕೂಟಕ್ಕೆ ಬೆಂಬಲ ನೀಡಿ ಕೇಂದ್ರ ಸಚಿವ ಸ್ಥಾನಗಳನ್ನು ಪಡೆಯುವಲ್ಲಿ ಯಶಸ್ವಿಯಾಗಿದ್ದರು. 2019ರ ಲೋಕಸಭೆ ಚುನಾವಣೆ ಎಂ.ಕರುಣಾನಿಧಿ, ಜೆ.ಜಯಲಲಿತಾ ಅವರ ಅನುಪಸ್ಥಿತಿಯಲ್ಲಿ ನಡೆಯಲಿದೆ. 2014ರ ಲೋಕಸಭೆ ಚುನಾವಣೆಯಲ್ಲಿ ರಾಜ್ಯದಲ್ಲಿ 37 ಸ್ಥಾನಗಳನ್ನು ಎಐಎಡಿಎಂಕೆ ಪಕ್ಷ ಗೆದ್ದುಕೊಂಡಿತ್ತು. ಆಗ ಜಯಲಲಿತಾ ಇದ್ದರು. ಬಿಜೆಪಿ ಕೇವಲ 1 ಸ್ಥಾನಕ್ಕೆ ತೃಪ್ತಿ ಪಟ್ಟುಕೊಂಡಿತ್ತು. ಈ ಬಾರಿ ಡಿಎಂಕೆಯ ಸ್ಟಾಲಿನ್ ಕರುಣಾನಿಧಿ ಅವರ ಸಾವಿನ ವಿಚಾರವನ್ನು ಮುಂದಿಟ್ಟುಕೊಂಡು ಮತ ಕೇಳಬಹುದು.

    ಇನ್ನಷ್ಟು ಚೆನ್ನೈ ಸುದ್ದಿಗಳುView All

    ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

    English summary
    Actor-turned-politician Kamal Haasan said his party Makkal Needhi Maiam (MNM) will join hands with the Congress given the condition that they cut their alliance with DMK

    Oneindia ಬ್ರೇಕಿಂಗ್ ನ್ಯೂಸ್,
    ತಾಜಾ ಸುದ್ದಿ ತಕ್ಷಣವೇ ಪಡೆಯಿರಿ

    Notification Settings X
    Time Settings
    Done
    Clear Notification X
    Do you want to clear all the notifications from your inbox?
    Settings X
    X
    We use cookies to ensure that we give you the best experience on our website. This includes cookies from third party social media websites and ad networks. Such third party cookies may track your use on Oneindia sites for better rendering. Our partners use cookies to ensure we show you advertising that is relevant to you. If you continue without changing your settings, we'll assume that you are happy to receive all cookies on Oneindia website. However, you can change your cookie settings at any time. Learn more