ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ತಮಿಳುನಾಡು : 24 ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಘೋಷಿಸಿದ ದಿನಕರನ್

|
Google Oneindia Kannada News

ಚೆನ್ನೈ, ಮಾರ್ಚ್ 17: ಟಿಟಿವಿ ದಿನಕರನ್ ಅವರ ಅಮ್ಮ ಮಕ್ಕಳ್ ಮುನ್ನೇತ್ರ ಕಳಗಂ(ಎಎಂಎಂಕೆ) ಭಾನುವಾರದಂದು ಮುಂಬರುವ ಲೋಕಸಭಾ ಚುನಾವಣೆಗಾಗಿ ಅಭ್ಯರ್ಥಿಗಳನ್ನು ಘೋಷಿಸಿದೆ. 24 ಲೋಕಸಭಾ ಕ್ಷೇತ್ರಗಳು ಹಾಗೂ ವಿಧಾನಸಭಾ ಉಪಚುನಾವಣೆ ನಡೆಯಲಿರುವ 9 ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಹೆಸರಿಸಲಾಗಿದೆ.

ತಿರುಚ್ಚಿಯಿಂದ ಸರುಬಾಲಾ ತೊಂಡೈಮನ್, ಮದುರೈ ಲೋಕಸಭಾ ಕ್ಷೇತ್ರದಿಂದ ಡೇವಿಡ್ ಅಣ್ಣಾದೊರೈ ಸ್ಪರ್ಧಿಸುತ್ತಿದ್ದರೆ, ಪಿ ವೆಟ್ರಿವೇಲ್ ಅವರು ಪೆರಂಬವೂರ್ ಉಪಚುನಾವಣೆಯ ಅಭ್ಯರ್ಥಿಯಾಗಿದ್ದಾರೆ.

ಡಿಎಂಕೆ- ಕಾಂಗ್ರೆಸ್ ಕ್ಷೇತ್ರ ಹಂಚಿಕೆ ಪಟ್ಟಿ ಪ್ರಕಟಿಸಿದ ಎಂಕೆ ಸ್ಟಾಲಿನ್ ಡಿಎಂಕೆ- ಕಾಂಗ್ರೆಸ್ ಕ್ಷೇತ್ರ ಹಂಚಿಕೆ ಪಟ್ಟಿ ಪ್ರಕಟಿಸಿದ ಎಂಕೆ ಸ್ಟಾಲಿನ್

ತಮಿಳುನಾಡಿನಲ್ಲಿ ಎಐಎಡಿಎಂಕೆ ಹಾಗೂ ಬಿಜೆಪಿ ಮಧ್ಯೆ ಮೈತ್ರಿಯು ತಮಿಳುನಾಡಿನಲ್ಲಿ ಅಂತಿಮಗೊಂಡ ಮರು ದಿನವೇ ಡಿಎಂಕೆ ಹಾಗೂ ಕಾಂಗ್ರೆಸ್ ಮೈತ್ರಿ ಒಪ್ಪಂದ ಮಾಡಿಕೊಂಡಿದ್ದನ್ನು ಇಲ್ಲಿ ಸ್ಮರಿಸಬಹುದು. ಒಟ್ಟು 40 ಲೋಕಸಭಾ ಕ್ಷೇತ್ರಗಳ ಪೈಕಿ ತಮಿಳುನಾಡಿನಲ್ಲಿ 39 ಹಾಗೂ ಪುದುಚೆರಿಯಲ್ಲಿ 1 ಸ್ಥಾನವಿದೆ

Lok Sabha elections 2019: TTV Dinakarans AMMK releases first list of 24 candidates

ಮುಂಬರುವ ಲೋಕಸಭೆ ಚುನಾವಣೆಗಾಗಿ ಡಿಎಂಕೆ ಹಾಗೂ ಮಿತ್ರಪಕ್ಷಗಳು ಎಲ್ಲೆಲ್ಲಿ ಸ್ಪರ್ಧಿಸಲಿವೆ ಎಂಬ ವಿವರವನ್ನು ಮಾರ್ಚ್ 15 ರಂದು ಡಿಎಂಕೆ ಅಧ್ಯಕ್ಷ ಎಂಕೆ ಸ್ಟಾಲಿನ್ ಘೋಷಿಸಿದ್ದರು.

ಏಪ್ರಿಲ್ 18ರಂದು ಲೋಕಸಭೆ ಚುನಾವಣೆ ನಿಗದಿಯಾಗಿದ್ದು, ಉಪಚುನಾವಣೆ, ಪುದುಚೇರಿಗೂ ಒಟ್ಟಿಗೆ ಚುನಾವಣೆ ನಡೆಯಲಿದೆ. ಮೇ 23ರಂದು ಫಲಿತಾಂಶ ಹೊರಬರಲಿದೆ.

English summary
TTV Dhinakaran's Amma Makkal Munnetra Kazhagam(AMMK) on Sunday announced the first list of 24 candidates for the upcoming Lok Sabha elections. The list also consists of list of candidates for nine by-election seats.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X