• search
  • Live TV
ಚೆನ್ನೈ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ಕೊರೊನಾ 2ನೇ ಅಲೆ ಮಧ್ಯೆ ನೀಟ್ ಪರೀಕ್ಷೆ ನಡೆಸುವ ಅಗತ್ಯವಿದೆಯೇ: ಎಂಕೆ ಸ್ಟಾಲಿನ್

|

ಚೆನ್ನೈ, ಏಪ್ರಿಲ್ 15: ದೇಶದಲ್ಲಿ ಕೊರೊನಾ ಎರಡನೇ ಅಲೆ ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರವು ಸಿಬಿಎಸ್‌ಇ 10ನೇ ತರಗತಿಯನ್ನು ರದ್ದುಗೊಳಿಸಿದೆ.

ಈ ಕುರಿತು ಮಾತನಾಡಿರುವ ಡಿಎಂಕೆ ಮುಖ್ಯಸ್ಥ ಎಂಕೆ ಸ್ಟಾಲಿನ್ ಸ್ನಾತಕೋತ್ತರ ನೀಟ್ ಪರೀಕ್ಷೆ ನಡೆಸಲು ಇದು ಸರಿಯಾದ ಸಮಯವೇ ಎಂದು ಪ್ರಶ್ನಿಸಿದ್ದಾರೆ. ನೀಟ್ ಪಿಜಿ ಪರೀಕ್ಷೆ ಏಪ್ರಿಲ್ 18 ರಂದು ನಿಗದಿಯಾಗಿದೆ.

10ನೇ ತರಗತಿ ಸಿಬಿಎಸ್‌ಇ ಪರೀಕ್ಷೆ ರದ್ದು, 12ನೇ ತರಗತಿ ಪರೀಕ್ಷೆ ಮುಂದೂಡಿಕೆ10ನೇ ತರಗತಿ ಸಿಬಿಎಸ್‌ಇ ಪರೀಕ್ಷೆ ರದ್ದು, 12ನೇ ತರಗತಿ ಪರೀಕ್ಷೆ ಮುಂದೂಡಿಕೆ

ಸ್ಟಾಲಿನ್ ಟ್ವೀಟ್ ಮಾಡಿದ್ದು, ಕೊರೊನಾ ಎರಡನೇ ಅಲೆಯ ಕಾರಣದಿಂದಾಗಿ ಸಿಬಿಎಸ್‌ಇ 10ನೇ ತರಗತಿ ಪರೀಕ್ಷೆಗಳನ್ನು ರದ್ದುಪಡಿಸಲಾಗಿದೆ. ಇದೇ ಸಮಯದಲ್ಲಿ ನೀಟ್ ಪಿಜಿ ಪರೀಕ್ಷೆಗಳನ್ನು ನಡೆಸುವುದು ಎಷ್ಟು ಸಮಂಜಸ ಎಂದಿದ್ದಾರೆ.

ಕೊರೊನಾ ಸೋಂಕನ್ನು ಕಡಿಮೆ ಮಾಡಲು ವೈದ್ಯರು ಸಾಕಷ್ಟು ಕಷ್ಟ ಪಡುತ್ತಿದ್ದಾರೆ, ಇಂತಹ ಸಮಯದಲ್ಲಿ ವಿದ್ಯಾರ್ಥಿಗಳ ಜೀವದ ಜತೆ ಆಟವಾಡಬೇಡಿ ಎಂದು ಎಚ್ಚರಿಕೆ ನೀಡಿದ್ದಾರೆ. ಸಿಬಿಎಸ್‌ಇ 10 ಹಾಗೂ 12ನೇ ತರಗತಿ ಪರೀಕ್ಷೆಯನ್ನು ಏಪ್ರಿಲ್ 14 ರಂದು ರದ್ದುಗೊಳಿಸಲಾಗಿದೆ.

ಕೊರೊನಾದಿಂದಾಗಿ ಇಡೀ ದೇಶ ನಲುಗುತ್ತಿರುವ ಸಂದರ್ಭದಲ್ಲಿ ಪರೀಕ್ಷೆ ನಡೆಸುವುದು ಸುರಕ್ಷಿತವಲ್ಲ ಎಂಬ ತಜ್ಞರ ತೀರ್ಮಾನದ ಹಿನ್ನೆಲೆಯಲ್ಲಿ 10ನೆ ತರಗತಿ ಸಿಬಿಎಸ್‍ಇ ಪರೀಕ್ಷೆಯನ್ನು ರದ್ದುಗೊಳಿಸಲಾಗಿದೆ. ಇಂದು ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ನಡೆದ ಕೇಂದ್ರ ಶಿಕ್ಷಣ ಸಚಿವರು ಹಾಗೂ ಸಿಬಿಎಸ್‍ಇ ಮಂಡಳಿ ಸಭೆಯಲ್ಲಿ ಈ ಮಹತ್ವದ ನಿರ್ಧಾರ ಕೈಗೊಳ್ಳಲಾಗಿದೆ.

ನವದೆಹಲಿ , ಮಹಾರಾಷ್ಟ್ರ , ಉತ್ತರ ಪ್ರದೇಶ, ಪಂಜಾಬ್ , ಕರ್ನಾಟಕದಲ್ಲಿ ಅತಿ ಹೆಚ್ಚು ಸಿಬಿಎಸ್‍ಇ ವಿದ್ಯಾರ್ಥಿಗಳಿದ್ದು , ಈ ರಾಜ್ಯಗಳಲ್ಲಿ ಕೊರೊನಾ ಸೋಂಕು ಉಲ್ಬಣಿಸುತ್ತಿದ್ದು, ವಿದ್ಯಾರ್ಥಿಗಳು ಪರೀಕ್ಷೆ ಬರೆಯಲು ಅಪಾಯಕಾರಿ ಎಂಬ ಮಾಹಿತಿಗಳು ಬಂದಿದ್ದವು. ಆದ ಕಾರಣ ಸುಮಾರು 1 ಗಂಟೆಗೂ ಹೆಚ್ಚು ಕಾಲ ಸುದೀರ್ಘ ಚರ್ಚೆ ನಡೆಸಿ ಪರೀಕ್ಷೆಯನ್ನು ನಡೆಸುವ ಕುರಿತಂತೆ ತೀರ್ಮಾನ ಕೈಗೊಳ್ಳಲಾಗಿದೆ.

ವಿದ್ಯಾರ್ಥಿಗಳು ಮಾಸಿಕ ಪರೀಕ್ಷೆಗಳಲ್ಲಿ ತೆಗೆದುಕೊಂಡಿರುವ ಅಂಕಗಳನ್ನು ಪರಿಶೀಲಿಸಿ ಈ ನಿರ್ಧಾರವನ್ನು ಕೈಗೊಳ್ಳಲಾಗಿದೆ. ಏ. 15ರಿಂದ ಪರೀಕ್ಷೆಗಳು ಆರಂಭಗೊಳ್ಳ ಬೇಕಾಗಿತ್ತು. ಇದಕ್ಕಾಗಿ ವೇಳಾಪಟ್ಟಿಯನ್ನು ಕೂಡ ಈ ಹಿಂದೆ ಬಿಡುಗಡೆ ಮಾಡಲಾಗಿತ್ತು.

ಈಗ 10ನೆ ತರಗತಿ ವಿದ್ಯಾರ್ಥಿಗಳು ನಿರಾಳ ರಾಗಿದ್ದು , ಈ ಸಂಬಂಧ ಹಲವು ವಿದ್ಯಾರ್ಥಿಗಳು ಪರೀಕ್ಷೆ ರದ್ದು ಕುರಿತು ಆಂದೋಲನವನ್ನೇ ನಡೆಸಿದ್ದರು. ಮಹತ್ವ ವಿಷಯವಾದ 12ನೆ ತರಗತಿ ಪರೀಕ್ಷೆ ಬಗ್ಗೆ ಸದ್ಯದಲ್ಲಿಯೇ ದಿನಾಂಕ ವನ್ನು ಪ್ರಕಟಿಸಲಾಗುವುದು ಎಂದು ತಿಳಿಸಲಾಗಿದೆ. ಮೇ 4ರಿಂದ ಜೂ.1ರವರೆಗೆ ನಡೆಯಬೇಕಾಗಿದ್ದ 12ನೇ ತರಗತಿ ಪರೀಕ್ಷೆ ಈಗ ಮುಂದೂಡಲಾಗಿದೆ.

English summary
With the Centre cancelling CBSE Class 10 board exams due to an alarming surge in coronavirus cases, DMK chief M K Stalin on Thursday wondered if it was the 'right' time to conduct the National Eligibility Cum Entrance Test (NEET) for Post Graduate courses. NEET-PG 2021 is scheduled on April 18.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
loader
X