ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಕರುಣಾನಿಧಿ ಆರೋಗ್ಯ ಸ್ಥಿತಿ ಗಂಭೀರ: ಆಸ್ಪತ್ರೆ ಸುತ್ತಮುತ್ತ ಬಿಗಿಭದ್ರತೆ

|
Google Oneindia Kannada News

Recommended Video

ಎಂ ಕರುಣಾನಿಧಿ ಆರೋಗ್ಯ ಸ್ಥಿತಿ ಗಂಭೀರ | ಚೆನ್ನೈ ನ ಕಾವೇರಿ ಆಸ್ಪತ್ರೆಗೆ ದಾಖಲು | Oneindia Kannada

ಚೆನ್ನೈ, ಜುಲೈ 30: ತಮಿಳುನಾಡಿನ ಮಾಜಿ ಮುಖ್ಯಮಂತ್ರಿ ಎಂ.ಕರುಣಾನಿಧಿ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದ್ದರೂ, ಅವರು ಚಿಕಿತ್ಸೆಗೆ ಧನಾತ್ಮಕವಾಗಿ ಸ್ಪಂದಿಸುತ್ತಿದ್ದಾರೆ ಎಂದು ಚೆನ್ನೈನ ಕಾವೇರಿ ಆಸ್ಪತ್ರೆಯ ವೈದ್ಯರು ತಿಳಿಸಿದ್ದಾರೆ.

ಡಿಎಂಕೆ ಮುಖಂಡರೂ ಆಗಿರುವ ಎಂ ಕರುಣಾನಿಧಿ ಅವರು ಜ್ವರ ಮತ್ತು ಮೂತ್ರನಾಳ ಸೋಂಕಿನಿಂದ ಬಳಲುತ್ತಿದ್ದರು. ಅವರನ್ನು ಜು.28 ರ ಬೆಳಿಗ್ಗೆ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಕಡಿಮೆ ರಕ್ತದೊತ್ತಡದಿಂದಾಗಿ ಅವರ ಆರೋಗ್ಯ ಏರುಪೇರಾಗಿದ್ದು, ಅವರಿಗೆ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ರಕ್ತದೊತ್ತಡ ಸದ್ಯಕ್ಕೆ ಸ್ಥಿರವಾಗಿದ್ದು, ಅವರು ಚಿಕಿತ್ಸೆ ಸ್ಪಂದಿಸುತ್ತಿದ್ದಾರೆ.

ಡಿಎಂಕೆ ಮುಖ್ಯಸ್ಥ ಎಂ ಕರುಣಾನಿಧಿ ಆರೋಗ್ಯ ಸ್ಥಿತಿ ಅಪ್ಡೇಟ್ಸ್ಡಿಎಂಕೆ ಮುಖ್ಯಸ್ಥ ಎಂ ಕರುಣಾನಿಧಿ ಆರೋಗ್ಯ ಸ್ಥಿತಿ ಅಪ್ಡೇಟ್ಸ್

ಕರುಣಾನಿಧಿ ಅನಾರೋಗ್ಯ ಹಿನ್ನೆಲೆಯಲ್ಲಿ ಆಸ್ಪತ್ರೆ ಮುಂದೆ ಜಮಾಯಿಸಿರುವ ಅವರ ಅಭಿಮಾನಿಗಳು ಕಳೆದ ಮೂರು ದಿನಗಳಿಂದ ಅವರ ಆರೋಗ್ಯಕ್ಕಾಗಿ ಪ್ರಾರ್ಥಿಸುತ್ತಿದ್ದಾರೆ. 'ಅಭಿಮಾನಿಗಳು ಆತಂಕ ಪಡುವ ಅಗತ್ಯವಿಲ್ಲ, ಅವರ ಆರೋಗ್ಯ ಸ್ಥಿರವಾಗಿದೆ' ಎಂದು ಆಸ್ಪತ್ರೆಯ ವೈದ್ಯರು ತಿಳಿಸಿದ್ದರೂ, ಆಸ್ಪತ್ರೆ ಮುಂದೆ ನೂಕುನುಗ್ಗಲು ಹೆಚ್ಚಾಗಿದೆ. ಆಸ್ಪತ್ರೆ ಮುಂದೆ ಅಭಿಮಾನಿಗಳು ಜಮಾಯಿಸಿರುವ ಹಿನ್ನೆಲೆಯಲ್ಲಿ ಸುತ್ತ ಮುತ್ತ ಬಿಗಿಭದ್ರತೆ ಏರ್ಪಡಿಸಲಾಗಿದೆ.

M Karunanidhi is being monitored by doctors in Kauvery hospital Chennai

ಕೆಲವು ಸುಳ್ಳು ವದಂತಿಗಳಿಗೆ ಕಿವಿಗೊಟ್ಟು ಆಸ್ಪತ್ರೆಯ ಬ್ಯಾರಿಕೇಡ್ ಗಳನ್ನು ಮುರಿದು ನುಗ್ಗಲು ಪ್ರಯತ್ನಿಸಿದ ಅಭಿಮಾನಿಗಳ ಮೇಲೆ ಪೊಲೀಸರು ಲಾಠಿ ಚಾರ್ಜ್ ನಡೆಸಿದ ಘಟನೆಯೂ ನಡೆದಿದೆ.

English summary
Former Chief minister of Tamil Nadu and Dravida Munnetra Kazhagam chief M Karunanidi is being continuously monitored by a team of doctors. He was admitted to Kauvery hospital in Chennai.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X