ತಮಿಳುನಾಡು ಸಿಎಂ ಪಳನಿಸ್ವಾಮಿಗೆ ತಾತ್ಕಾಲಿಕ ರಿಲೀಫ್
ಚೆನ್ನೈ, ಸೆಪ್ಟೆಂಬರ್ 20: ತಮಿಳುನಾಡು ಮುಖ್ಯಮಂತ್ರಿ ಎಡಪ್ಪಾಡಿ ಪಳನಿಸ್ವಾಮಿ ಬೀಸೋ ದೊಣ್ಣೆಯಿಂದ ತಪ್ಪಿಸಿಕೊಂಡಿದ್ದಾರೆ.
ಒಂದೆಡೆ ವಿಶ್ವಾಸಮತ ಯಾಚನೆಗೆ ನೀಡಿದ್ದ ತಡೆಯನ್ನು ಮದ್ರಾಸ್ ಹೈಕೋರ್ಟ್ ಮುಂದುವರಿಸಿದೆ. ಇನ್ನೊಂದೆಡೆ 18 ಟಿಟಿವಿ ದಿನಕರನ್ ಬಣದ ಶಾಸಕರ ಅನರ್ಹತೆಗೆ ತಡೆ ನೀಡಲು ಹೈಕೋರ್ಟ್ ನಿರಾಕರಿಸಿದೆ.

ಹೀಗಾಗಿ ಸದ್ಯ್ಕಕೆ ಎಡಪ್ಪಾಡಿ ಪಳನಿಸ್ವಾಮಿ ನಿರಾಳರಾಗಿದ್ದರೆ, ಹೈಕೋರ್ಟ್ ಮೆಟ್ಟಿಲೇರಿ ಟಿಟಿವಿ ದಿನಕರನ್ ಮುಖಭಂಗ ಅನುಭವಿಸಿದ್ದಾರೆ.
ಮುಂದಿನ ಆದೇಶದವರೆಗೆ ತಮಿಳುನಾಡಿನಲ್ಲಿ ವಿಶ್ವಾಸಮತ ಯಾಚನೆ ನಡೆಸುವಂತಿಲ್ಲ ಎಂದು ಮದ್ರಾಸ್ ಹೈಕೋರ್ಟ್ ಸೂಚನೆ ನೀಡಿದೆ.
ಇನ್ನು ಟಿಟಿವಿ ದಿನಕರನ್ ಬಣದ 18 ಶಾಸಕರ ಅನರ್ಹತೆಗೆ ತಡೆ ನೀಡಲು ಹೈಕೋರ್ಟ್ ನಿರಾಕರಿಸಿದೆ. ಆದರೆ, ಈ 18 ಶಾಸಕರ ಕ್ಷೇತ್ರಗಳಿಗೆ ಚುನಾವಣಾ ಅಧಿಸೂಚನೆ ಹೊರಡಿಸದಂತೆ ಚುನಾವಣಾ ಆಯೋಗಕ್ಕೆ ಹೈಕೋರ್ಟ್ ನಿರ್ದೇಶನ ನೀಡಿದೆ. ಮುಂದಿನ ವಿಚಾರಣೆಯನ್ನು ನ್ಯಾಯಾಲಯವು ಅಕ್ಟೋಬರ್ 4ಕ್ಕೆ ಮುಂದೂಡಿದೆ.












Click it and Unblock the Notifications