ಮೊದಲ ಉಗ್ರ ಹಿಂದು ಹೇಳಿಕೆ: ಕಮಲ್ ಹಾಸನ್ ಗೆ ನಿರೀಕ್ಷಣಾ ಜಾಮೀನು
ಚೆನ್ನೈ, ಮೇ 20: "ಸ್ವತಂತ್ರ ಭಾರತದ ಮೊದಲ ಉಗ್ರ ಓರ್ವ ಹಿಂದು" ಎಂಬ ವಿವಾದಾತ್ಮಕ ಹೇಳಿಕೆ ನೀಡಿದ್ದ ನಟ, ರಾಜಕಾರಣಿ ಕಮಲ್ ಹಾಸನ್ ಅವರಿಗೆ ಮಧುರೈ ನ್ಯಾಯಾಲಯ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ.
ಮೇ 13 ರಂದು ತಮಿಳುನಾಡಿನ ಅರವಕುರಿಚಿಯ ಪ್ರಚಾರ ಸಭೆಯಲ್ಲಿ ಭಾಗವಹಿಸಿದ್ದ ಮಕ್ಕಳ್ ನೀಧಿ ಮಯ್ಯಂ ಪಕ್ಷದ ಸಂಸ್ಥಾಪಕ ಕಮಲ್ ಹಾಸನ್, "ನಾನೊಬ್ಬ ಹೆಮ್ಮೆಯ ಭಾರತೀಯ. ಆದರೆ ನಾನೊಂದು ಮಾತು ಹೇಳುತ್ತೇನೆ. ಇದು ಮುಸ್ಲಿಂ ಜನರೇ ಹೆಚ್ಚಿರುವ ಪ್ರದೇಶ ಎಂಬ ಕಾರಣಕ್ಕಾಗಿ ನಾನು ಈ ಮಾತನ್ನು ಹೇಳುತ್ತಿಲ್ಲ. ಬದಲಿಗೆ ನಾನು ಗಾಂಧಿಜೀ ಅವರ ವಿಗ್ರಹದ ಮುಂದೆ ನಿಂತಿರುವ ಕಾರಣಕ್ಕೆ ಹೀಗೆ ಹೇಳುತ್ತಿದ್ದೇನೆ. ಸ್ವತಂತ್ರ ಭಾರತದ ಮೊದಲ ಉಗ್ರ ಒಬ್ಬ ಹಿಂದೂ, ಅವನ ಹೆಸರು ನಾಥುರಾಮ್ ಗೋಡ್ಸೆ. ಅಲ್ಲಿಂದ ಭಯೋತ್ಪಾದನೆ ಶುರುವಾಯಿತು" ಎಂದಿದ್ದರು.

ತಂತ್ರ ಭಾರತದ ಮೊದಲ ಉಗ್ರ ನಾಥೂರಾಂ ಗೋಡ್ಸೆ ಎಂದರೆ ಸಾಕಿತ್ತು. 'ಹಿಂದೂ' ಎಂಬ ಪದ ಬಳಸುವ ಅಗತ್ಯ ಏನಿತ್ತು ಎಂದು ಬಹುಸಂಖ್ಯಾತ ಹಿಂದುಗಳು ಆಕ್ರೋಶ ವ್ಯಕ್ತಪಡಿಸಿದ್ದರು. ಆದರೆ ತಾವು ತಮ್ಮ ಹೇಳಿಕೆಗೆ ಬದ್ಧರಾಗಿದ್ದು, ತಾನು ಐತಿಹಾಸಿಕ ಸತ್ಯವನ್ನೇ ಹೇಳಿದ್ದೇನೆ. ಅದರಲ್ಲಿ ಏನೂ ತಪ್ಪಿಲ್ಲ ಎಂದು ಕಮಲ್ ಹಾಸನ್ ಹೇಳಿದ್ದರು. ಆದ್ದರಿಂದ ಅವರ ವಿರುದ್ಧ ಎಫ್ ಐಆರ್ ದಾಖಲಿಸಲಾಗಿತ್ತು. ತಮ್ಮ ವಿರುದ್ಧ ದಾಖಲಾಗಿರುವ ಎಫ್ಐಆರ್ ಅನ್ನು ರದ್ದುಗೊಳಿಸುವಂತೆ ಕೋರಿ, ಕಮಲ್ ಹಾಸನ್ ಸಲ್ಲಿಸಿದ್ದ ಅರ್ಜಿಯನ್ನು ಮದ್ರಾಸ್ ಹೈಕೋರ್ಟ್ ವಜಾಗೊಳಿಸಿತ್ತು.
ನಂತರ ಅವರು ನಿರೀಕ್ಷಣಾ ಜಾಮೀನಿಗೆ ಅರ್ಜಿ ಸಲ್ಲಿಸಿದ್ದರು.












Click it and Unblock the Notifications