ಹಿಂದಿ ಹೇರಿಕೆ: ಕೇಂದ್ರ ಸರ್ಕಾರಕ್ಕೆ ಸವಾಲು ಹಾಕಿದ ಸ್ಟಾಲಿನ್

ಚೆನ್ನೈ, ಜೂನ್ 06: ತ್ರಿಭಾಷಾ ಸೂತ್ರದಡಿ ದೇಶದಲ್ಲಿ ಹಿಂದಿ ಭಾಷೆ ಹೇರಿಕೆಗೆ ಮುಂದಾಗಿದ್ದ ಕೇಂದ್ರ ಸರ್ಕಾರಕ್ಕೆ ಹಿನ್ನಡೆಯಾಗಿದೆ. ಭಾರಿ ಪ್ರತಿಭಟನೆ ನಂತರ ಪ್ರಸ್ತಾವಿತ ರಾಷ್ಟ್ರೀಯ ಶಿಕ್ಷಣ ನೀತಿಯ ಕರಡು ಪ್ರತಿಯನ್ನು ಹಿಂಪಡೆಯಲಾಗಿದೆ.ಈ ನಡುವೆ ಡಿಎಂಕೆ ಮುಖ್ಯಸ್ಥ ಎಂ.ಕೆ ಸ್ಟಾಲಿನ್ ಅವರು ಕೇಂದ್ರ ಸರ್ಕಾರಕ್ಕೆ ಸವಾಲ್​ ಹಾಕಿದ್ದಾರೆ.

ಕೇಂದ್ರ ಸರ್ಕಾರದ ಕಚೇರಿಗಳಲ್ಲಿ ತಮಿಳು ಭಾಷೆಯನ್ನು ಅಧಿಕೃತ ಭಾಷೆಯನ್ನಾಗಿ ಮಾಡುವಂತೆ ಆಗ್ರಹಿಸಿದ್ದಾರೆ. ಚೆನ್ನೈನಲ್ಲಿ ಖಾಸಗಿ ಕಾರ್ಯಕ್ರಮವೊಂದರಲ್ಲಿ ಮಾತನಾಡುತ್ತಾ, ಕೇಂದ್ರ ಸರ್ಕಾರದ ಕಚೇರಿಗಳಲ್ಲಿ ತಮಿಳು ಅಧಿಕೃತ ಭಾಷೆಯನ್ನಾಗಿ ಮಾಡಬೇಕು. ಕೇಂದ್ರ ತ್ರಿಭಾಷಾ ಸೂತ್ರದಡಿ ಹಿಂದಿ ಹೇರಿಕೆ ಮಾಡಲು ಯತ್ನಿಸುತ್ತಿದೆ. ಇದರ ವಿರುದ್ಧ ನಾವು ಹೋರಾಟ ಮಾಡಬೇಕಿದೆ' ಎಂದರು.

ದಕ್ಷಿಣದ ರಾಜ್ಯಗಳ ಮೇಲೆ ಹಿಂದಿ ಹೇರಲು ಬಂದರೆ ಬಿಜೆಪಿ ನೇತೃತ್ವದ ಕೇಂದ್ರ ಸರಕಾರದ ವಿರುದ್ಧ ಕದನವನ್ನೇ ಘೋಷಿಸಬೇಕಾಗುತ್ತದೆ. ತ್ರಿಭಾಷಾ ಸೂತ್ರವೇ ದೊಡ್ಡ ಆಘಾತ. ಈಗಿನ ಶಿಫಾರಸು ದೇಶವನ್ನೇ ವಿಭಜನೆ ಮಾಡುತ್ತದೆ ಎಂದು ಸ್ಟಾಲಿನ್ ಅಭಿಪ್ರಾಯ ಪಟ್ಟಿದ್ದಾರೆ. ''ಯಾವುದೇ ಭಾಷೆಯನ್ನು ಯಾರ ಮೇಲೂ ಹೇರುವ ಉದ್ದೇಶ ಇಲ್ಲ. ಎಲ್ಲ ಭಾರತೀಯ ಭಾಷೆಗಳನ್ನು ಪ್ರಚಾರ ಮಾಡುವುದು ನಮ್ಮ ಆಶಯ. ಇದು ಸಮಿತಿ ನೀಡಿದ ಕರಡು ಅಷ್ಟೇ. ಸಾರ್ವಜನಿಕರ ಅಭಿಪ್ರಾಯ ಪಡೆದ ನಂತರವೇ ಸರಕಾರ ನಿರ್ಧಾರ ಮಾಡುತ್ತದೆ" ಎಂದು ಜಾವಡೇಕರ್ ಹೇಳಿದ್ದಾರೆ. ಇದಾದ ಬಳಿಕ ಭಾರತ ಸರ್ಕಾರದ ಮಾನವ ಸಂಪನ್ಮೂಲ ಮಂತ್ರಾಲಯದ ಈ ಕೊಂಡಿಯಿಂದ ರಾಷ್ಟ್ರೀಯ ಶಿಕ್ಷಣ ನೀತಿ 2019ರ ಕರಡು ಮಾಯವಾಗಿದೆ.

‘Make Tamil official language in central government offices’: Stalin

ತ್ರಿಭಾಷಾ ಸೂತ್ರ: 1968ರ ನಿಲುವಳಿ ಭಾರತದ ಸಂಸತ್ತು 1963ರಲ್ಲಿ ಮಾಡಿದ "ಅಫಿಶಿಯಲ್ ಲಾಂಗ್ವೇಜ್ ಆಕ್ಟ್ - 1963"ರಲ್ಲಿ ಹಿಂದೀ ಭಾಷೆಯನ್ನು ಒಕ್ಕೂಟದ ಏಕೈಕ ಆಡಳಿತ ಭಾಷೆ ಮಾಡಿದಾಗ ಕರ್ನಾಟಕ, ತಮಿಳುನಾಡು ಮತ್ತು ಬಂಗಾಳ ಸೇರಿದಂತೆ ಅನೇಕ ಹಿಂದೀಯೇತರ ಪ್ರದೇಶಗಳಲ್ಲಿ ಇದಕ್ಕೆ ವಿರೋಧ ತೀವ್ರ ಹೋರಾಟದ ರೂಪದಲ್ಲಿ ವ್ಯಕ್ತವಾಯಿತು. ತಮಿಳುನಾಡಿನಲ್ಲಂತೂ ಈ ಹೋರಾಟದಲ್ಲಿ ನೂರಾರು ಜನ ಸಾವಿಗೀಡಾದರು. ಭಾರತದಿಂದಲೇ ಸಿಡಿದು ಹೋಗುವ ದನಿ ಹೋರಾಟದಲ್ಲಿ ಕೇಳಿ ಬಂತು. ಆಗ ಅಂದಿನ ಪ್ರಧಾನಿ ಜವಾಹರ್‌ಲಾಲ್ ನೆಹರೂರವರು "ನೀವೆಲ್ಲಾ ಒಪ್ಪೋ ತನಕ ಭಾರತದ ಆಡಳಿತ ಭಾಷೆಯಾಗಿ ಇಂಗ್ಲೀಷನ್ನೂ ಮುಂದುವರೆಸುತ್ತೇವೆ" ಎಂಬ ಭರವಸೆ ಕೊಟ್ಟರು. ಇದು ಸಂಸತ್ತಿನಲ್ಲಿ ಮುಂದೆ ಪ್ರಾದೇಶಿಕ ಭಾಷೆಗಳನ್ನು ಕೇಂದ್ರಸರ್ಕಾರಿ ನೌಕರಿಯ ನೇಮಕಾತಿ ಪರೀಕ್ಷೆಗಳಲ್ಲಿ ಬಳಸುವ ಅವಕಾಶ ನೀಡುವ, ಪ್ರಾದೇಶಿಕ ಭಾಷೆಗಳನ್ನೂ ಉಳಿಸಿಕೊಳ್ಳುವ ಉದ್ದೇಶದ "ತ್ರಿಭಾಷಾ ಸೂತ್ರ"ದ ರಚನೆಗೆ ಕಾರಣವಾಯಿತು. ಅಂದರೆ ಮೂಲತಃ ತ್ರಿಭಾಷಾಸೂತ್ರವನ್ನು ಬಿಂಬಿಸಿದ್ದು "ಪ್ರಾದೇಶಿಕ ಭಾಷೆಗಳಿಗೆ ಕೇಂದ್ರದ ಆಡಳಿತದಲ್ಲಿ ಅಧಿಕೃತತೆಯನ್ನು ತಂದುಕೊಡುವ ಪ್ರಯತ್ನ" ಎಂಬುದಾಗಿ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+