ತಮಿಳುನಾಡಿನಲ್ಲಿ ಸಾರ್ವಜನಿಕ ಸ್ಥಳಗಳಲ್ಲಿ ಮಾಸ್ಕ್ ಕಡ್ಡಾಯ: ಉಲ್ಲಂಘಿಸಿದರೆ 500 ರೂ. ದಂಡ
ಚೆನ್ನೈ ಏಪ್ರಿಲ್ 22: ದೇಶದಲ್ಲಿ ಮತ್ತೆ ಕೊರೊನಾ ಹೆಚ್ಚಾಗುತ್ತಿದ್ದು ಕೆಲವೆಡೆ ಕೊರೊನಾ ಮಾರ್ಗಸೂಚಿಗಳನ್ನು ಕಟ್ಟುನಿಟ್ಟುಗೊಳಿಸಲಾಗುತ್ತಿದೆ. ದೆಹಲಿ ಬಳಿಕ ತಮಿಳುನಾಡಿನಲ್ಲಿ ಸಾರ್ವಜನಿಕ ಸ್ಥಳಗಳಲ್ಲಿ ಮಾಸ್ಕ್ ಧರಿಸುವುದು ಕಡ್ಡಾಯಗೊಳಿಸಲಾಗಿದೆ. ಮಾಸ್ಕ್ ಧರಿಸದವರಿಗೆ 500 ರೂಪಾಯಿ ದಂಡ ವಿಧಿಸಲಾಗಿದೆ. ಜೊತೆಗೆ ದಂಡ ವಸೂಲಿ ಮಾಡುವಂತೆ ಜಿಲ್ಲಾಧಿಕಾರಿಗಳಿಗೆ ಸೂಚಿಸಿರುವುದರಿಂದ ಎಲ್ಲರೂ ಮಾಸ್ಕ್ ಧರಿಸಬೇಕು ಎಂದು ಆರೋಗ್ಯ ಕಾರ್ಯದರ್ಶಿ ಡಾ.ರಾಧಾಕೃಷ್ಣನ್ ತಿಳಿಸಿದ್ದಾರೆ.
ಕಳೆದ ಕೆಲವು ದಿನಗಳಿಂದ ತಮಿಳುನಾಡಿನಲ್ಲಿ ಕೊರೊನಾ ಹಾವಳಿ ಹೆಚ್ಚುತ್ತಲೇ ಇದೆ. ದೆಹಲಿ, ಕೇರಳ, ಹರಿಯಾಣ ಸೇರಿದಂತೆ ಹಲವು ರಾಜ್ಯಗಳಲ್ಲಿ ಕೊರೊನಾ ಹರಡುತ್ತಿದೆ. ಆರೋಗ್ಯ ಕಾರ್ಯದರ್ಶಿ ಡಾ ರಾಧಾಕೃಷ್ಣನ್ ಇಂದು ಸುದ್ದಿಗಾರರೊಂದಿಗೆ ಮಾತನಾಡಿ, ಕೊರೊನಾ ಹೆಚ್ಚುತ್ತಿರುವ ಕಾರಣ ತಮಿಳುನಾಡಿನಲ್ಲಿ ಭಯಪಡುವ ಅಗತ್ಯವಿಲ್ಲ ಎಂದು ಕೇಂದ್ರ ಸರ್ಕಾರ ಹೇಳಿದೆ. ನಾವು ಈಗಾಗಲೇ ಶಿಕ್ಷಣ ಸಂಸ್ಥೆಗಳಿಗೆ ಕೊರೊನಾ ತಡೆಗಟ್ಟುವ ಕ್ರಮಗಳ ಕುರಿತು ಮಾರ್ಗಸೂಚಿಗಳನ್ನು ನೀಡಿದ್ದೇವೆ. ಚೆನ್ನೈನ ಐಐಟಿಯಲ್ಲಿ ಕೊರೊನಾ ವಿದ್ಯಾರ್ಥಿಗಳ ಆರೋಗ್ಯ ಸ್ಥಿರವಾಗಿದೆ ಎಂದು ಡಾ.ರಾಧಾಕೃಷ್ಣನ್ ಹೇಳಿದ್ದಾರೆ.
ಸಾರ್ವಜನಿಕ ಸ್ಥಳಗಳು, ಚಿತ್ರಮಂದಿರಗಳು ಮತ್ತು ದೇವಸ್ಥಾನಗಳಲ್ಲಿ ಜನರು ಮಾಸ್ಕ್ ಕಡ್ಡಾಯವಾಗಿ ಧರಿಸಬೇಕು ಒಂದು ವೇಳೆ ಸಾರ್ವಜನಿಕ ಸ್ಥಳಗಳಲ್ಲಿ ಮಾಸ್ಕ್ ಧರಿಸದೇ ಇದ್ದರೆ 500 ರೂಪಾಯಿ ದಂಡ ವಿಧಿಸಲಾಗುತ್ತದೆ ಎಂದು ಡಾ.ರಾಧಾಕೃಷ್ಣನ್ ಅವರು ತಿಳಿಸಿದ್ದಾರೆ.
{photo-feature}












Click it and Unblock the Notifications