ಮೇಕೆದಾಟು ಯೋಜನೆ ವಿರೋಧಿಸಿ ತಮಿಳುನಾಡು ಬಂದ್

ಬೆಂಗಳೂರು, ಮಾ. 27: ಕಾವೇರಿ ನೀರಿಗಾಗಿ ತಮಿಳುನಾಡು ಕ್ಯಾತೆ ತೆಗೆಯುವುದು ನಡೆದುಕೊಂಡ ಬಂದ 'ಪರಂಪರೆ'. ಇದೀಗ ನಮ್ಮ ರಾಜ್ಯದ ಒಳಗೆ ಅಣೆಕಟ್ಟು ಕಟ್ಟಿದರೂ ಅವರಿಗೆ ಸರಿ ಬರಲ್ವಂತೆ.

ಮೇಕೆದಾಟು ಬಳಿ ರಾಜ್ಯ ಸರ್ಕಾರ ನಿರ್ಮಾಣಕ್ಕೆ ಮುಂದಾಗಿರುವ ಅಣೆಕಟ್ಟು ವಿರೋಧಿಸಿ ಮಾರ್ಚ್ 28 ರಂದು ತಮಿಳುನಾಡಿನ ವಿವಿಧ ರೈತ ಸಂಘಟನೆಗಳು ತಮಿಳುನಾಡು ಬಂದ್ ಗೆ ಕರೆ ನೀಡಿವೆ.[ಮೇಕೆದಾಟು ಯೋಜನೆ ವಿವಾದ ಏಕೆ, ಏನು?]

mekedatu

ಕರ್ನಾಟಕ ಸರ್ಕಾರದ ಕಾನೂನಿಗೆ ವಿರುದ್ಧವಾಗಿ ನಡೆದುಕೊಳ್ಳುತ್ತಿದೆ. ರಾಜ್ಯ ರಾಜ್ಯಗಳ ನಡುವೆ ಇದ್ದ ಒಪ್ಪಂದವನ್ನು ಮುರಿಯಲಾಗಿದೆ ಎಂದು ತಮಿಳುನಾಡಿನ ರಾಜಕೀಯ ಪಕ್ಷಗಳ ನಾಯಕರು, ವಿವಿಧ ಸಂಘಟನೆಗಳು ಆರೋಪ ಮಾಡಿವೆ. [ಕರ್ನಾಟಕ ಬಂದ್: ಸಾರ್ವಜನಿಕರಿಗೆ ಗೈಡ್ ಲೈನ್ಸ್]

ಡಿಎಂಕೆ, ಡಿಎಂಡಿಕೆ, ವಿಸಿಕೆ, ಪಿಎಂಕೆ ಹಾಗೂ ಎಂಎಂಕೆ ಸೇರಿದಂತೆ ಅನೇಕ ರಾಜಕೀಯ ಪಕ್ಷಗಳು ಈ ಬಂದ್‌ಗೆ ಬೆಂಬಲ ಸೂಚಿಸಿವೆ ಎಂದು ರೈತ ಸಂಘಟನೆಗಳ ಒಕ್ಕೂಟದ ಅಧ್ಯಕ್ಷ ಪಿ.ಆರ್‌.ಪಾಂಡ್ಯನ್‌ ತಿಳಿಸಿದ್ದಾರೆ.[ಮೇಕೆದಾಟು ಯೋಜನೆಗೆ ಮತ್ತೆ ತಮಿಳುನಾಡು ಅಡ್ಡಗಾಲು]

ಮೇಕೆದಾಟುವಿನಲ್ಲಿ ಸರಣಿ ಅಣೆಕಟ್ಟು ನಿರ್ಮಾಣವನ್ನು ಸ್ಥಗಿತಗೊಳಿಸುವಂತೆ ಹಾಗೂ ಕಾವೇರಿ ನಿರ್ವಹಣಾ ಮಂಡಳಿ ಹಾಗೂ ಕಾವೇರಿ ನೀರು ಪ್ರಾಧಿಕಾರ ಮಂಡಳಿಯನ್ನು ಶೀಘ್ರ ಸ್ಥಾಪನೆ ಮಾಡುವಂತೆ ಕೇಂದ್ರವನ್ನು ಒತ್ತಾಯಿಸಿ ರಾಜ್ಯದಾದ್ಯಂತ ಬಂದ್‌ಗೆ ಕರೆ ನೀಡಲಾಗಿದೆ. ಈ ವಿಚಾರಕ್ಕೆ ಸಂಬಂಧಿಸಿದಂತೆ ಎಲ್ಲಾ ರಾಜಕೀಯ ಪಕ್ಷಗಳ ಪ್ರತಿನಿಧಿಗಳು ಪ್ರಧಾನಿ ಅವರನ್ನು ಒತ್ತಾಯಿಸಬೇಕು ಎಂದು ಆಗ್ರಹಿಸಿದ್ದಾರೆ.

ಗಡಿ ಭಾಗದಲ್ಲಿ ಎಚ್ಚರ
ಬಂದ್ ಪರಿಣಾಮ 2 ರಾಜ್ಯಗಳ ನಡುವಿನ ಬಸ್ ಮತ್ತು ರೈಲು ಸಂಚಾರದಲ್ಲಿ ವ್ಯತ್ಯಯವಾಗಲಿದೆ. ಅಲ್ಲದೇ ಗಡಿ ಭಾಗದ ಜನರು ಎಚ್ಚರಿಕೆಯಿಂದ ಇರಬೇಕಾಗುತ್ತದೆ. ರಾಜ್ಯ ಪೊಲೀಸ್ ಇಲಾಖೆ ಈ ಬಗ್ಗೆ ಸಕಲ ಮುನ್ನೆಚ್ಚರಿಕೆ ಕ್ರಮ ತೆಗೆದುಕೊಂಡಿದೆ ಎಂದು ಹಿರಿಯ ಅಧಿಕಾರಿಗಳು ತಿಳಿಸಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+