ಮೇಕೆದಾಟು ಯೋಜನೆಗೆ ಕ್ಯಾತೆ, ಮೋದಿಗೆ ತಮಿಳುನಾಡು ಪತ್ರ
Recommended Video

ಚೆನ್ನೈ, ನವೆಂಬರ್ 27 : ಮೇಕೆದಾಟು ಕುಡಿಯುವ ನೀರಿನ ಯೋಜನೆ ಬಗ್ಗೆ ತಮಿಳುನಾಡು ಮತ್ತೆ ಕ್ಯಾತೆ ತೆಗೆದಿದೆ. ಪ್ರಧಾನಿ ನರೇಂದ್ರ ಮೋದಿಗೆ ಅವರಿಗೆ ತಮಿಳುನಾಡು ಮುಖ್ಯಮಂತ್ರಿ ಪತ್ರ ಬರೆದಿದ್ದು, ಯೋಜನೆಗೆ ವಿರೋಧ ವ್ಯಕ್ತಪಡಿಸಿದ್ದಾರೆ.
ಮಂಗಳವಾರ ತಮಿಳುನಾಡು ಮುಖ್ಯಮಂತ್ರಿ ಕೆ.ಪಳನಿಸ್ವಾಮಿ ಅವರಿಗೆ ಪತ್ರ ಬರೆದಿದ್ದಾರೆ. ಮೇಕೆದಾಟು ಯೋಜನೆಯನ್ನು ತಡೆ ಹಿಡಿಯಬೇಕು. ಈ ಯೋಜನೆಯಿಂದ ಕಾವೇರಿ ಅಂತಿಮ ತೀರ್ಪಿನ ಉಲ್ಲಂಘನೆಯಾಗುತ್ತದೆ ಎಂದು ಪತ್ರದಲ್ಲಿ ಹೇಳಿದ್ದಾರೆ.
ಕರ್ನಾಟಕ ಈ ಯೋಜನೆಯನ್ನು ಕುಡಿಯುವ ನೀರಿನ ಉದ್ದೇಶಕ್ಕಾಗಿ ಕೈಗೆತ್ತಿಕೊಂಡಿಲ್ಲ. ಯೋಜನೆ ಜಾರಿಗೊಂಡರೆ ಕಾವೇರಿ ಜಲಾನಯನ ಪ್ರದೇಶಕ್ಕೆ ಹಾನಿಯಾಗಲಿದೆ ಎಂದು ತಮಿಳುನಾಡು ಸರ್ಕಾರ ಪತ್ರದಲ್ಲಿ ಉಲ್ಲೇಖಿಸಿದೆ.
ಕೇಂದ್ರ ಜಲ ಆಯೋಗ ಮಂಗಳವಾರ ಮೇಕೆದಾಟು ಯೋಜನೆಗೆ ಒಪ್ಪಿಗೆ ನೀಡಿತ್ತು. ಯೋಜನೆ ಕುರಿತು ವಿವರವಾದ ಸಮಗ್ರ ಯೋಜನಾ ವರದಿ (ಡಿಪಿಆರ್) ಸಿದ್ಧಪಡಿಸಿ ಸಲ್ಲಿಸುವಂತೆ ಸೂಚಿಸಿತ್ತು. ಇದಕ್ಕೆ ಪ್ರತಿಯಾಗಿ ತಮಿಳುನಾಡು ಪತ್ರ ಬರೆದಿದೆ..

ಯೋಜನೆಗೆ ಅನುಮತಿ ನೀಡಬೇಡಿ
ಮೇಕೆದಾಟು ಯೋಜನೆಗೆ ಅನುಮತಿ ನೀಡಬೇಡಿ ಎಂದು ತಮಿಳುನಾಡು ಮುಖ್ಯಮಂತ್ರಿ ಕೆ.ಪಳನಿಸ್ವಾಮಿ ಅವರು ಮಂಗಳವಾರ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದಾರೆ. ಕೇಂದ್ರ ಜಲ ಆಯೋಗ ನೀಡಿರುವ ಒಪ್ಪಿಗೆಯನ್ನು ತಡೆ ಹಿಡಿಯಬೇಕು ಎಂದು ಪತ್ರದಲ್ಲಿ ಮನವಿ ಮಾಡಿದ್ದಾರೆ.

ಜಲಾನಯನ ಪ್ರದೇಶಕ್ಕೆ ಹಾನಿ
ತಮಿಳುನಾಡು ಮುಖ್ಯಮಂತ್ರಿ ಕೆ.ಪಳನಿಸ್ವಾಮಿ ಅವರು ಮೇಕೆದಾಟು ಯೋಜನೆ ಜಾರಿಯಾದರೆ ಕಾವೇರಿ ಜಲಾನಯನ ಪ್ರದೇಶಕ್ಕೆ ಹಾನಿಯಾಗಲಿದೆ ಎಂದು ಪತ್ರದಲ್ಲಿ ಆತಂಕ ವ್ಯಕ್ತಪಡಿಸಿದ್ದಾರೆ. ಯೋಜನೆಯನ್ನು ವಿರೋಧಿಸಿದ್ದಾರೆ.

ಅಣೆಕಟ್ಟು ನಿರ್ಮಾಣ ಏಕೆ?
ಕಾವೇರಿ ವಿವಾದದ ಅಂತಿಮ ತೀರ್ಪಿನಂತೆ ಕರ್ನಾಟಕ 177 ಟಿಎಂಸಿ ನೀರನ್ನು ವಾರ್ಷಿಕವಾಗಿ ತಮಿಳುನಾಡಿಗೆ ಹರಿಸಬೇಕು. ಆದರೆ, ಹೆಚ್ಚಿನ ಮಳೆ ಆದಾಗ 80, 90 ಟಿಎಂಸಿ ಅಡಿ ನೀರು ಹೆಚ್ಚುವರಿಯಾಗಿ ತಮಿಳುನಾಡಿಗೆ ಹೋಗುತ್ತದೆ. ಇದನ್ನು ಮೇಕೆದಾಟು ಬಳಿ ಡ್ಯಾಂ ಕಟ್ಟಿ ಸಂಗ್ರಹಿಸಿ, ಕುಡಿಯುವ ನೀರಿನ ಉದ್ದೇಶಕ್ಕೆ ಬಳಸಿಕೊಳ್ಳುವುದು ಯೋಜನೆಯಾಗಿದೆ.

ಜಯಲಲಿತಾ ಸಹ ಪತ್ರ ಬರೆದಿದ್ದರು
ತಮಿಳುನಾಡು ಮೊದಲಿನಿಂದಲೂ ಮೇಕೆದಾಟು ಯೋಜನೆಗೆ ವಿರೋಧ ವ್ಯಕ್ತಪಡಿಸುತ್ತಿದೆ. ಜಯಲಲಿತಾ ಅವರು ಮುಖ್ಯಮಂತ್ರಿಯಾಗಿದ್ದಾಗಲೂ ಪ್ರಧಾನಿಗಳಿಗೆ ಪತ್ರ ಬರೆದು ಯೋಜನೆಗೆ ವಿರೋಧ ವ್ಯಕ್ತಪಡಿಸಿದ್ದರು. ಈಗಲೂ ವಿರೋಧ ವ್ಯಕ್ತವಾಗಿದೆ.












Click it and Unblock the Notifications