ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ನೀಟ್ ವಿರೋಧಿಸುವಂತೆ ಕೋರಿ 12 ರಾಜ್ಯಗಳ ಸಿಎಂಗಳಿಗೆ ಸ್ಟಾಲಿನ್ ಪತ್ರ

|
Google Oneindia Kannada News

ಚೆನ್ನೈ, ಅಕ್ಟೋಬರ್ 04: ನೀಟ್ ಪರೀಕ್ಷೆಯನ್ನು ವಿರೋಧಿಸುವಂತೆ ಕೋರಿ ತಮಿಳುನಾಡು ಮುಖ್ಯಮಂತ್ರಿ ಎಂಕೆ ಸ್ಟಾಲಿನ್ 12 ರಾಜ್ಯಗಳ ಮುಖ್ಯಮಂತ್ರಿಗಳಿಗೆ ಪತ್ರ ಬರೆದಿದ್ದಾರೆ. ನೀಟ್ ವಿರೋಧಿಸಲು ಹಾಗೂ ಶಿಕ್ಷಣದಲ್ಲಿ ರಾಜ್ಯಗಳ ಆದ್ಯತೆ ಪುನರ್ ಸ್ಥಾಪನೆಗೆ ಬೆಂಬಲ ಕೋರಿ ಸ್ಟಾಲಿನ್ ಪತ್ರೆ ಬರೆದಿದ್ದಾರೆ.

ನಮ್ಮ ಸಂವಿಧಾನದಲ್ಲಿ ಕಲ್ಪಿಸಲಾಗಿರುವ ಶಿಕ್ಷಣ ಕ್ಷೇತ್ರ ನಿರ್ವಹಿಸುವಲ್ಲಿ ರಾಜ್ಯ ಸರ್ಕಾರಗಳ ಪ್ರಾಮುಖ್ಯತೆ ಪುನರ್‌ಸ್ಥಾಪಿಸಲು ನಾವು ಒಗ್ಗಟ್ಟಿನ ಪ್ರಯತ್ನ ಮಾಡಬೇಕಿದೆ. ಈ ನಿರ್ಣಾಯಕ ವಿಷಯದಲ್ಲಿ ನಿಮ್ಮ ಸಹಕಾರಕ್ಕಾಗಿ ನಾನು ಎದುರು ನೋಡುತ್ತಿದ್ದೇನೆ ಎಂದು ಸ್ಟಾಲಿನ್ ಪತ್ರದಲ್ಲಿ ಹೇಳಿದ್ದಾರೆ.

 NEET-UG 2021: ಪರೀಕ್ಷೆ ಮುಂದೂಡಲು ಸುಪ್ರೀಂಕೋರ್ಟ್ ನಕಾರ NEET-UG 2021: ಪರೀಕ್ಷೆ ಮುಂದೂಡಲು ಸುಪ್ರೀಂಕೋರ್ಟ್ ನಕಾರ

ಛತ್ತೀಸ್‌ಗಢ, ಆಂಧ್ರಪ್ರದೇಶ, ದೆಹಲಿ, ಜಾರ್ಖಂಡ್, ಕೇರಳ, ಮಹಾರಾಷ್ಟ್ರ, ಒಡಿಶಾ, ಪಂಜಾಬ್, ರಾಜಸ್ಥಾನ, ತೆಲಂಗಾಣ, ಪಶ್ಚಿಮ ಬಂಗಾಳ ಹಾಗೂ ಗೋವಾ ಮುಖ್ಯಮಂತ್ರಿಗೆ ಪತ್ರ ಬರೆದಿದ್ದಾರೆ.

NEET-UG 2021: Tamil Nadu CM Stalin Writes To 12 Chief Ministers, Seeks Support In Opposing Medical Entrance

ಅಕ್ಟೋಬರ್ 1ರಂದು ಬರೆದಿರುವ ಪತ್ರವನ್ನು ಸೋಮವಾರ ಮಾಧ್ಯಮಗಳುಗೆ ನೀಡಿದ್ದು, ರಾಜ್ಯ ಸರ್ಕಾರಗಳು ತಮ್ಮ ಉನ್ನತ ಶಿಕ್ಷಣ ಸಂಸ್ಥೆಗಳಿಗೆ ಪ್ರವೇಶ ವಿಧಾನವನ್ನು ನಿರ್ಧರಿಸುವಲ್ಲಿ ತಮ್ಮ ಸಾಂವಿಧಾನಿಕ ಹಕ್ಕು ಹಾಗೂ ಸ್ಥಾನವನ್ನು ಪ್ರತಿಪಾದಿಸಬೇಕಾಗಿದೆ ಎಂದು ಒತ್ತಾಯಿಸಿದ್ದಾರೆ.

ರಾಜ್ಯಗಳು ಸ್ಥಾಪಿಸಿರುವ ಮತ್ತು ನಿರ್ವಹಿಸುತ್ತಿರುವ ವೈದ್ಯಕೀಯ ಶಿಕ್ಷಣ ಸಂಸ್ಥೆಗಳಲ್ಲಿ ಯಾರಿಗೆ ಪ್ರವೇಶ ಸಿಗಬೇಕು ಎಂದು ನಿರ್ಧರಿಸುವ ಅವಕಾಶವನ್ನು ನೀಟ್ ಮೂಲಕ ಕೇಂದ್ರ ಸರ್ಕಾರ ತನ್ನ ಬಳಿ ಇರಿಸಿಕೊಂಡಿದೆ.

ಇದು ಒಕ್ಕೂಟ ವ್ಯವಸ್ಥೆಯ ಆಶಯಗಳಿಗೆ ವ್ಯತಿರಿಕ್ತವಾಗಿದೆ. ಅಧಿಕಾರ ಹಂಚಿಕೆಯ ಆಶಯದೊಂದಿಗೆ ಸಂವಿಧಾನವು ನೀಡಿರುವ ಅವಕಾಶಗಳನ್ನೂ ಉಲ್ಲಂಘಿಸುತ್ತದೆ ಎಂದು ಹೇಳಿದ್ದಾರೆ.

ನೀಟ್​ಗೆ ಪರ್ಯಾಯವಾಗಿ ಅನುಸರಿಸಬಹುದಾದ ವಿಧಾನಗಳ ಬಗ್ಗೆ ಶಿಫಾರಸು ಮಾಡುವಂತೆಯೂ ಈ ಸಮಿತಿಯನ್ನು ತಮಿಳುನಾಡು ಸರ್ಕಾರ ಕೋರಿತ್ತು. ಸಮಿತಿಯ ಶಿಫಾರಸಿನ ಮೇರೆಗೆ ತಮಿಳುನಾಡು ವಿಧಾನಸಭೆಯು ಈಚೆಗೆ, 'ತಮಿಳುನಾಡು ವೈದ್ಯಕೀಯ ಪದವಿ ಕೋರ್ಸ್​ಗಳ ಕಾಯ್ದೆ 2021' (Tamil Nadu Admission to Undergraduate Medical Degree Courses Act, 2021) ಅಂಗೀಕರಿಸಿತ್ತು.

ಕಳೆದ ಕೆಲವು ವರ್ಷಗಳಿಂದ ಸಮಾಜದ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳ ಮೇಲೆ ನೀಟ್ ಪರೀಕ್ಷೆ ಬೀರಿರುವ ಪರಿಣಾಮಗಳ ಬಗ್ಗೆ ಅಧ್ಯಯನ ಮಾಡಲು ತಮಿಳುನಾಡು ಸರ್ಕಾರ ನೇಮಿಸಿದ್ದ ನ್ಯಾಯಮೂರ್ತಿ ಎ.ಕೆ.ರಾಜನ್ ಸಮಿತಿಯ ವರದಿಯನ್ನು ಸ್ಟಾಲಿನ್ ತಮ್ಮ ಪತ್ರದೊಂದಿಗೆ ಲಗತ್ತಿಸಿದ್ದಾರೆ.

English summary
Tamil Nadu Chief Minister M K Stalin has written to his counterparts in 11 non-BJP ruled states and Goa, seeking their support to oppose the National Eligibility cum Entrance Test and restore "the primacy of states" in education, the government said on Monday.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X