ಕೊರೊನಾದಿಂದ ಗುಣಮುಖವಾದರೂ ಅಪಾರ್ಟ್‌ಮೆಂಟ್‌ನಲ್ಲಿ ಬೈಗುಳ

ಚೆನ್ನೈ, ಮೇ 1: ಕೆಲವು ದಿನಗಳ ಹಿಂದೆ ಚೆನ್ನೈನಲ್ಲಿ 55 ವರ್ಷದ ಮಹಿಳೆಗೆಯೊಬ್ಬರಿಗೆ ಕೊರೊನಾ ವೈರಸ್‌ ಸೋಂಕು ತಗುಲಿತ್ತು. ಈಗ ಆ ಮಹಿಳೆ ಆಸ್ಪತ್ರೆಯಿಂದ ಚಿಕಿತ್ಸೆ ಪಡೆದು ಹಿಂದಿರುಗಿದ್ದಾರೆ. ಆದರೆ, ಆ ಮಹಿಳೆ ಅಕ್ಕಪಕ್ಕದ ಮನೆಯವರು ಬೈಯುತ್ತಿದ್ದಾರೆ ಎಂದು ಆರೋಪ ಮಾಡಿದ್ದಾರೆ.

ಮಹಿಳೆ ಕೊರೊನಾ ವೈರಸ್ ಸೋಂಕಿನಿಂದ ಗುಣಮುಖವಾಗಿದ್ದಾರೆ. ಆಕೆಯ 68 ವರ್ಷದ ಪತಿಗೆ ಸಹ ಸೋಂಕು ತಗುಲಿದ್ದು, ಆಸ್ಪತ್ರೆಯಲ್ಲಿ ಇದ್ದಾರೆ. ಗಂಡ ಹೆಂಡತಿ ಇಬ್ಬರು ಚೆನ್ನೈ ಅಪಾರ್ಟ್‌ಮೆಂಟ್ ಒಂದರಲ್ಲಿ ವಾಸ ಮಾಡುತ್ತಿದ್ದಾರೆ. ಆದರೆ, ಆ ಅಪಾರ್ಟ್‌ಮೆಂಟ್‌ನಲ್ಲಿ ಅಕ್ಕ ಪಕ್ಕದ ಮನೆಯಲ್ಲಿ ಇರುವ ಜನರು ತಮಗೆ ಮಾನಸಿಕ ಹಿಂಸೆ ನೀಡುತ್ತಿದ್ದಾರೆ ಎಂದು ಮಹಿಳೆ ಹೇಳಿದ್ದಾರೆ.

ಈ ವಿಷಯವನ್ನು ತನ್ನ ಸಹೋದರನಿಗೆ ಮಹಿಳೆ ತಿಳಿಸಿದ್ದಾರೆ. ಮಹಿಳೆ ಮುಸ್ಲಿಂ ಆಗಿದ್ದ ಕಾರಣ ಅಕ್ಕ ಪಕ್ಕದ ಮನೆಯವರು ತಬ್ಲಿಘಿ ವಿಷಯ ಇಟ್ಟುಕೊಂಡು ಈ ರೀತಿ ಮಾಡುತ್ತಿದ್ದಾರೆ ಎಂದು ಮಹಿಳೆಯ ಸಹೋದರ ತಿಳಿಸಿದ್ದಾರೆ.

Neighbours Abuse Chennai Woman Even After Recovers From Coronavirus

ಘಟನೆಯನ್ನು ಪೊಲೀಸರಿಗೆ ತಿಳಿಸಿದ್ದು, ಸ್ಥಳಕ್ಕೆ ಬಂದ ಸ್ಥಳಿಯ ಪೊಲೀಸ್, ಮಹಿಳೆಯ ಸಹಾಯ ಮಾಡಿದ್ದಾರೆ. ಪೊಲೀಸರ ಸಹಾಯಕ್ಕೆ ಮಹಿಳೆ ಹಾಗೂ ಸಹೋದರ ಧನ್ಯವಾದ ತಿಳಿಸಿದ್ದಾರೆ.

ಮಹಿಳೆ, ಆಕೆಯ ಪತಿ, ಸಹೋದರ ಹಾಗೂ ಕುಟುಂಬದ ಯಾವುದೇ ಸದಸ್ಯರು ತಬ್ಲಿಘಿ ಕಾರ್ಯಕ್ರಮಕ್ಕೆ ಹೋಗಿರಲಿಲ್ಲ ಎಂದು ಈ ವೇಳೆ ಸ್ಪಷ್ಟಪಡಿಸಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+