• search
 • Live TV
ಚೆನ್ನೈ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

'ತಮಿಳುನಾಡಿನಲ್ಲಿ ರಾಷ್ಟ್ರೀಯ ಶಿಕ್ಷಣ ನೀತಿ ಜಾರಿ ಮಾಡಲ್ಲ': ಸಿಎಂ ಸ್ಟಾಲಿನ್‌

|
Google Oneindia Kannada News

ಚೆನ್ನೈ, ಅಕ್ಟೋಬರ್‌ 28: ರಾಷ್ಟ್ರೀಯ ಶಿಕ್ಷಣ ನೀತಿಯನ್ನು (ಎನ್‌ಇಪಿ) ತಮಿಳುನಾಡು ರಾಜ್ಯದಲ್ಲಿ ಜಾರಿ ಮಾಡುವುದಿಲ್ಲ ಎಂದು ತಮಿಳುನಾಡು ಮುಖ್ಯಮಂತ್ರಿ ಎಂ ಕೆ ಸ್ಟಾಲಿನ್‌ ಗುರುವಾರ ತಿಳಿಸಿದ್ದಾರೆ.

ರಾಜ್ಯದಲ್ಲಿ ಹೊಸ ಶಿಕ್ಷಣ ನೀತಿಯನ್ನು ರಚನೆ ಮಾಡುವ ನಿಟ್ಟಿನಲ್ಲಿ ತಜ್ಞರ ಸಮಿತಿಯನ್ನು ರಚನೆ ಮಾಡಲಾಗುವುದು ಎಂದು ಇದೇ ಸಂದರ್ಭದಲ್ಲಿ ತಮಿಳುನಾಡು ಮುಖ್ಯಮಂತ್ರಿ ಎಂ ಕೆ ಸ್ಟಾಲಿನ್‌ ಹೇಳಿದರು. ದ್ರಾವಿಡ ಮುನ್ನೇತ್ರ ಕಳಗಂ (ಡಿಎಂಕೆ) ಮುಖ್ಯಸ್ಥರೂ ಆಗಿರುವ ಸ್ಟಾಲಿನ್ 'ಇಲ್ಲಂ ತೇಡಿ ಕಲ್ವಿ' (ಬಾಗಿಲಿಗೆ ಶಿಕ್ಷಣ) ಯೋಜನೆಗೆ ಚಾಲನೆ ನೀಡಿದ್ದಾರೆ. ಆ ಬಳಿಕ ಮಾತನಾಡುತ್ತಾ ಈ ಎನ್‌ಇಪಿ ರಾಜ್ಯದಲ್ಲಿ ಜಾರಿ ಮಾಡಲಾಗದು ಎಂದಿದ್ದಾರೆ.

ಕೊರೊನಾ ವೈರಸ್‌ ಸೋಂಕು ಕಾಣಿಸಿಕೊಂಡ ಬಳಿಕ ಸೋಂಕು ಹರಡುವುದನ್ನು ತಡೆಯುವ ನಿಟ್ಟಿನಲ್ಲಿ ಮಾರ್ಚ್ 2020 ರಿಂದ ಲಾಕ್‌ಡೌನ್ ವಿಧಿಸಲಾಗಿದೆ. ಅಂದಿನಿಂದ ತರಗತಿ ಇಲ್ಲದ ಕಾರಣ ಮಕ್ಕಳಿಗೆ ಶೈಕ್ಷಣಿಕ ಕೌಶಲ್ಯಗಳನ್ನು ನೀಡಲು ಯೋಜನೆಯನ್ನು ಜಾರಿಗೊಳಿಸಲಾಗುತ್ತಿದೆ.

"ರಾಜ್ಯ ಸರ್ಕಾರವು ಒಂದು ತಜ್ಞರ ಸಮಿತಿಯನ್ನು ರಚನೆ ಮಾಡಲಿದೆ. ಈ ಸಮಿತಿಯು ರಾಜ್ಯಕ್ಕೆ ಹೊಸದಾದ ಶಿಕ್ಷಣ ನೀತಿಯನ್ನು ರಚನೆ ಮಾಡಲಿದೆ. ಅದನ್ನು ರಾಜ್ಯದಲ್ಲಿ ಜಾರಿಗೆ ತರಲಾಗುವುದು," ಎಂದು ಎಎನ್‌ಐ ಜೊತೆ ಮಾತನಾಡುತ್ತಾ ತಮಿಳುನಾಡು ಮುಖ್ಯಮಂತ್ರಿ ಎಂ ಕೆ ಸ್ಟಾಲಿನ್‌ ತಿಳಿಸಿದರು.

ರಾಷ್ಟ್ರೀಯ ಶಿಕ್ಷಣ ನೀತಿಯನ್ನು (ಎನ್‌ಇಪಿ) ನರೇಂದ್ರ ಮೋದಿ ನೇತೃತ್ವದ ಸರ್ಕಾರವು ಜಾರಿಗೆ ತಂದ ಸಂದರ್ಭದಿಂದಲೇ ಎಂ ಕೆ ಸ್ಟಾಲಿನ್‌ ಈ ರಾಷ್ಟ್ರೀಯ ಶಿಕ್ಷಣ ನೀತಿಗೆ ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ. "ಹಿಂದಿ ಮತ್ತು ಸಂಸ್ಕೃತವನ್ನು ಎಲ್ಲರ ಮೇಲೆ ಹೇರುವ ಪ್ರಯತ್ನವನ್ನು ಕೇಂದ್ರ ಸರ್ಕಾರವು ಮಾಡುತ್ತಿದೆ," ಎಂದು ಸ್ಟಾಲಿನ್‌ ಆರೋಪ ಮಾಡಿದ್ದಾರೆ. ಹಾಗೆಯೇ ಸಮಾನ ಮನಸ್ಕ ರಾಜಕೀಯ ಪಕ್ಷಗಳು ಮತ್ತು ಇತರ ರಾಜ್ಯಗಳ ಮುಖ್ಯಮಂತ್ರಿಗಳೊಂದಿಗೆ ಕೈಜೋಡಿಸುವ ಮೂಲಕ ಇದರ ವಿರುದ್ಧ ಹೋರಾಡುವುದಾಗಿ ಪ್ರತಿಜ್ಞೆ ಮಾಡಿದ್ದರು.

ನೂತನ ಶಿಕ್ಷಣ ನೀತಿ (ಎನ್‌ಇಪಿ) ಅನ್ನು ಅನುಷ್ಠಾನ ಸೇರಿದಂತೆ ಹಲವು ವಿಷಯಗಳ ಕುರಿತು ಚರ್ಚಿಸಲು ಎಲ್ಲಾ ರಾಜ್ಯಗಳ ಇಲಾಖೆ ಕಾರ್ಯದರ್ಶಿಗಳೊಂದಿಗೆ ಅಂದಿನ ಕೇಂದ್ರ ಶಿಕ್ಷಣ ಸಚಿವ ರಮೇಶ್ ಪೋಖ್ರಿಯಾಲ್‌ ನಡೆಸಿದ್ದ ವರ್ಚುವಲ್‌ ಸಭೆಯನ್ನು ತಮಿಳುನಾಡು ಹಾಜರಾಗಿರಲಿಲ್ಲ. ಇನ್ನು ತಮಿಳುನಾಡು ಮಾತ್ರವಲ್ಲದೇ ಇನ್ನು ಕೆಲವು ರಾಜ್ಯಗಳು ಎನ್‌ಇಪಿಗೆ ವಿರೋಧ ವ್ಯಕ್ತಪಡಿಸಿದೆ. ಕೇರಳ, ಪಶ್ಚಿಮ ಬಂಗಾಳ ಎನ್‌ಇಪಿಗೆ ವಿರೋಧ ವ್ಯಕ್ತಪಡಿಸಿದೆ.

ಕರ್ನಾಟಕದಲ್ಲಿ ವಿಜ್ಞಾನಿಗಳ ಸಲಹೆ ಪಡೆದು ಎನ್‌ಇಪಿ ಜಾರಿ

   Facebook ನ ಇನ್ಮೇಲೆ ಏನಂತ ಕರಿಬೇಕು ಗೊತ್ತಾ? | Oneindia Kannada

   ಈ ನಡುವೆ ಕರ್ನಾಟಕ ಸರ್ಕಾರವು ಈ ರಾಷ್ಟ್ರೀಯ ಶಿಕ್ಷಣ ನೀತಿಯನ್ನು ವಿಜ್ಞಾನಿಗಳ ಸಲಹೆ ಪಡೆದು ಜಾರಿಗೆ ತರಲಾಗುವುದು ಎಂದು ತಿಳಿಸಿದೆ. ರಾಷ್ಟ್ರೀಯ ಶಿಕ್ಷಣ ನೀತಿ (ಎನ್‌ಇಪಿ) ಕರಡು ಪ್ರತಿ ಸಿದ್ದಪಡಿಸಿದ ಖ್ಯಾತ ವಿಜ್ಞಾನಿ ಕಸ್ತೂರಿ ರಂಗನ್ ಅವರಿಂದ ಹಿಡಿದು ಗ್ರಾಮಾಂತರ ಪ್ರದೇಶಗಳ ಶಾಲೆಗಳ ಶಿಕ್ಷಕರ ಅಭಿಪ್ರಾಯವನ್ನು ಕೂಡ ಪಡೆದು ಪ್ರಾಥಮಿಕ ಮತ್ತು ಪ್ರೌಢ ಶಾಲೆ ಹಂತದಲ್ಲಿ 'ರಾಷ್ಟ್ರೀಯ ಶಿಕ್ಷಣ ನೀತಿ-2020' ಜಾರಿಗೆ ತರಲಾಗುವುದು ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ ನಾಗೇಶ್ ತಿಳಿಸಿದ್ದಾರೆ. "ರಾಷ್ಟ್ರೀಯ ಶಿಕ್ಷಣ ನೀತಿ ಜಾರಿ ಬಗ್ಗೆ ಶಿಕ್ಷಣ ಇಲಾಖೆ ಅಧಿಕಾರಿಗಳ ಜೊತೆ ಸಭೆಗಳನ್ನು ನಡೆಸಲಾಗುತ್ತಿದೆ. ಹಲವು ತಜ್ಞರ ಜೊತೆಯೂ ಈ ಬಗ್ಗೆ ಚರ್ಚೆ ನಡೆಸಲಾಗಿದೆ. ವಿಜ್ಞಾನಿ ಕಸ್ತೂರಿ ರಂಗನ್, ರಾಷ್ಟ್ರೀಯ ಶಿಕ್ಷಣ ನೀತಿ ಸಲಹಾ ಸಮಿತಿ ಸದಸ್ಯರು, ವಿಶ್ವವಿದ್ಯಾಲಯ ಅನುದಾನ ಆಯೋಗದ ಸದಸ್ಯರಾದ ಎಂ.ಕೆ ಶ್ರೀಧರ್ ಸೇರಿದಂತೆ ಶಿಕ್ಷಣ ಕ್ಷೇತ್ರದ ಹಲವು ತಜ್ಞರು, ಇಲಾಖೆಯಲ್ಲಿ ಕೆಲಸ ಮಾಡಿದ ಹಾಲಿ ಮತ್ತು ನಿವೃತ್ತ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿ ಮಾಹಿತಿ ಸಂಗ್ರಹ ಮಾಡಲಾಗುತ್ತಿದೆ," ಎಂದು ಕೂಡಾ ಕರ್ನಾಟಕ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ ನಾಗೇಶ್ ಹೇಳಿದ್ದಾರೆ.

   (ಒನ್ಇಂಡಿಯಾ ಸುದ್ದಿ)

   English summary
   NEP won't be implemented in Tamil Nadu, says Tamil Nadu chief minister MK Stalin.
   ತಾಜಾ ಸುದ್ದಿ ತಕ್ಷಣ ಪಡೆಯಿರಿ
   Enable
   x
   Notification Settings X
   Time Settings
   Done
   Clear Notification X
   Do you want to clear all the notifications from your inbox?
   Settings X