ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಚೆನ್ನೈನ ಬಿಜೆಪಿ ಕಚೇರಿ ಮೇಲೆ ಪೆಟ್ರೋಲ್ ಬಾಂಬ್ ಎಸೆತ: ಓರ್ವ ಅರೆಸ್ಟ್

|
Google Oneindia Kannada News

ಚೆನ್ನೈ, ಫೆಬ್ರವರಿ 10: ಚೆನ್ನೈನಲ್ಲಿರುವ ತಮಿಳುನಾಡು ಬಿಜೆಪಿಯ ಕೇಂದ್ರ ಕಚೇರಿ ಮೇಲೆ ಗುರುವಾರ ನಸುಕಿನಲ್ಲಿ ಅಪರಿಚಿತ ವ್ಯಕ್ತಿಗಳು ಪೆಟ್ರೋಲ್ ಬಾಂಬ್ ಎಸೆದಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ವಿನೋದ್ ಎಂದು ಗುರುತಿಸಲಾದ ಓರ್ವ ವ್ಯಕ್ತಿಯನ್ನು ಇದುವರೆಗೆ ಬಂಧಿಸಲಾಗಿದೆ. ರಾಜ್ಯ ಬಿಜೆಪಿ ಕೇಂದ್ರವಾದ ಕಮಲಾಲಯದಲ್ಲಿ ಗುರುವಾರ ಬೆಳಗಿನ ಜಾವ 1.30ರ ಸುಮಾರಿಗೆ ಬೈಕ್‌ನಲ್ಲಿ ಬಂದ ವ್ಯಕ್ತಿಗಳು ಕಟ್ಟಡದ ಮೇಲೆ ಬಾಂಬ್ ಎಸೆದ ಘಟನೆ ನಡೆದಿದೆ. ಘಟನೆಯಲ್ಲಿ ಯಾರಿಗೂ ಗಾಯವಾಗಿಲ್ಲ.

ರೌಡಿ ಶೀಟರ್ ಆಗಿರುವ ವ್ಯಕ್ತಿ ದ್ವಿಚಕ್ರ ವಾಹನದಲ್ಲಿ ಆಗಮಿಸಿ ಪಕ್ಷದ ಕಚೇರಿಯ ಪ್ರವೇಶ ದ್ವಾರದಲ್ಲಿ ಬಾಟಲಿಗಳನ್ನು ಎಸೆದು ಪರಾರಿಯಾಗಿದ್ದಾನೆ. ತಕ್ಷಣ ಪೊಲೀಸರು ಎಚ್ಚೆತ್ತುಕೊಂಡಿದ್ದು, ಅಧಿಕಾರಿಗಳ ತಂಡ ಸ್ಥಳ ಪರಿಶೀಲನೆ ನಡೆಸಿದ್ದು, ಸಿಸಿಟಿವಿ ಕ್ಯಾಮೆರಾಗಳನ್ನು ಪರಿಶೀಲಿಸಿದ್ದಾರೆ. ದುಷ್ಕರ್ಮಿಯು 38 ವರ್ಷದ ವಿನೋದ್ ಅಲಿಯಾಸ್ 'ಕರುಕ್ಕ' ವಿನೋತ್ ಎಂದು ಗುರುತಿಸಲಾಗಿದೆ. ಈತ ಕೊಲೆ ಯತ್ನ ಸೇರಿದಂತೆ ಹಲವಾರು ಅಪರಾಧ ಪ್ರಕರಣಗಳನ್ನು ಎದುರಿಸುತ್ತಿದ್ದಾನೆ ಎಂದು ನಗರ ಪೊಲೀಸ್ ಪ್ರಕಟಣೆ ತಿಳಿಸಿದೆ.

ಪ್ರಾಥಮಿಕ ತನಿಖೆಯ ಪ್ರಕಾರ, ಈ ದಾಳಿಯಲ್ಲಿ ಯಾವುದೇ ರಾಜಕೀಯ ಅಥವಾ ಧಾರ್ಮಿಕ ಅಂಶಗಳಿಲ್ಲ. ಸಾರ್ವಜನಿಕ ಹಿತಾಸಕ್ತಿಯ ವಿಷಯಗಳಲ್ಲಿ ಮದ್ಯದ ಅಮಲಿನಲ್ಲಿ ಇಂತಹ ದಾಳಿಗಳನ್ನು ನಡೆಸಿದ ಇತಿಹಾಸವನ್ನು ವಿನೋದ್ ಹೊಂದಿದ್ದಾನೆ. ರಾಷ್ಟ್ರೀಯ ಪ್ರವೇಶ ಮತ್ತು ಅರ್ಹತಾ ಪರೀಕ್ಷೆಯನ್ನು ಬೆಂಬಲಿಸುವ ಬಿಜೆಪಿಯ ನಿಲುವಿಗೆ ವಿರೋಧ ವ್ಯಕ್ತಪಡಿಸಲು ಅವರು ಬಾಟಲಿಗಳನ್ನು ಎಸೆದಿದ್ದಾರೆ ಎಂದು ತನಿಖೆಯಿಂದ ತಿಳಿದುಬಂದಿದೆ. ತನಿಖೆ ಮುಂದುವರಿದಿದೆ. 2015ರಲ್ಲಿ ಮದ್ಯದ ಚಿಲ್ಲರೆ ಮಾರಾಟ ಮಳಿಗೆಯ ಮೇಲೆ ಹಾಗೂ 2017ರಲ್ಲಿ ಇಲ್ಲಿನ ತೆನಾಂಪೇಟೆ ಪೊಲೀಸ್ ಠಾಣೆಯ ಪ್ರವೇಶ ದ್ವಾರದ ಮೇಲೆ ಕೆಲವು ವಿಚಾರಗಳಿಗೆ ಸಂಬಂಧಿಸಿದಂತೆ ಪೆಟ್ರೋಲ್ ಬಾಂಬ್ ಎಸೆದಿದ್ದರು. ಎರಡೂ ಪ್ರಕರಣಗಳಲ್ಲಿ ಅವರನ್ನು ಬಂಧಿಸಲಾಗಿದ್ದು, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

Petrol Bomb Hurled at Bjp Office in Chennai, One Detained

ಬಿಜೆಪಿಯನ್ನು ಹೊರತುಪಡಿಸಿ, ತಮಿಳುನಾಡಿನ ಇತರ ರಾಜಕೀಯ ಪಕ್ಷಗಳು ವೈದ್ಯಕೀಯ ಪ್ರವೇಶಕ್ಕಾಗಿ ರಾಷ್ಟ್ರೀಯ ಪ್ರವೇಶ ಪರೀಕ್ಷೆಯನ್ನು ವಿರೋಧಿಸುತ್ತಿವೆ ಮತ್ತು ಫೆಬ್ರವರಿ 8 ರಂದು ರಾಜ್ಯದಲ್ಲಿ ಪರೀಕ್ಷೆಯನ್ನು ಬೈಪಾಸ್ ಮಾಡಲು ವಿಧಾನಸಭೆಯು ಮತ್ತೊಮ್ಮೆ ಮಸೂದೆಯನ್ನು ಅಂಗೀಕರಿಸಿತು.

Petrol Bomb Hurled at Bjp Office in Chennai, One Detained

"ನಾವು ಈ ಘಟನೆಯ ಬಗ್ಗೆ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ತನಿಖೆಗೆ ಒತ್ತಾಯಿಸುತ್ತೇವೆ. ತಪ್ಪಿತಸ್ಥರನ್ನು ಬಂಧಿಸಿ ಶಿಕ್ಷಿಸಬೇಕು. ನಮ್ಮ ರಾಜ್ಯದಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಹದಗೆಡುತ್ತಿದೆ. ಈ ಘಟನೆಗೆ ಎನ್‌ಐಎ ಏಕೈಕ ಪರಿಹಾರವಾಗಿದೆ, ಅಲ್ಲಿ ಸತ್ಯ ಮತ್ತು ಪಿತೂರಿ ಹೊರಬರುತ್ತದೆ" ಎಂದು ತಮಿಳುನಾಡು ಬಿಜೆಪಿ ಮುಖ್ಯಸ್ಥ ಕೆ ಅಣ್ಣಾಮಲೈ ಹೇಳಿದರು.

Recommended Video

Kanatakaದಲ್ಲಿ ಹೊತ್ತಿದ Hijab ಕಿಡಿಯಿಂದ Uttar Pradesh Election ಫಲಿತಾಂಶದ ಮೇಲೆ ಎಫೆಕ್ಟ್? | Oneindia Kannada

English summary
Unidentified persons hurled petrol bombs at the headquarters of the Tamil Nadu BJP in Chennai in the wee hours of Thursday. One person, identified as Vinodh, has been detained in connection with the incident so far.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X