ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಚೆನ್ನೈನಲ್ಲಿ ಶಾಸ್ತ್ರೀಯ ತಮಿಳು ಸಂಸ್ಥೆಯ ಹೊಸ ಕ್ಯಾಂಪಸ್ ಉದ್ಘಾಟಿಸಲಿರುವ ಪ್ರಧಾನಿ ಮೋದಿ

|
Google Oneindia Kannada News

ಚೆನ್ನೈ ಜನವರಿ 11: ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಇಂದು ಚೆನ್ನೈನ ಸೆಂಟ್ರಲ್ ಇನ್‌ಸ್ಟಿಟ್ಯೂಟ್ ಆಫ್ ಕ್ಲಾಸಿಕಲ್ ತಮಿಳು ಸಂಸ್ಥೆಯ ಹೊಸ ಕ್ಯಾಂಪಸ್ ಅನ್ನು ಉದ್ಘಾಟಿಸಲಿದ್ದಾರೆ. ಈ ಕ್ಯಾಂಪಸ್‌ನ್ನು ವಿಡಿಯೋ ಕಾನ್ಫರೆನ್ಸ್ ಮೂಲಕ ಉದ್ಘಾಟನೆ ಮಾಡಲಾಗುವುದು ಎಂದು ಪ್ರಧಾನಿ ಕಚೇರಿ ತಿಳಿಸಿದೆ.

ಇಂದು ಸ್ವಾಮೀಜಿಯವರ ಜನ್ಮದಿನವನ್ನು ದೇಶವು 'ರಾಷ್ಟ್ರೀಯ ಯುವ ದಿನ' ಎಂದು ಆಚರಿಸುತ್ತದೆ. ಸ್ವಾಮೀಜಿಯವರ ಚಿಂತನೆಗಳು ಇಂದಿಗೂ ಮನುಷ್ಯನ ಹೃದಯದಲ್ಲಿ ಉತ್ಸಾಹವನ್ನು ಮೂಡಿಸುತ್ತವೆ. ಒಬ್ಬ ವ್ಯಕ್ತಿಯು ತನ್ನ ಜೀವನದಲ್ಲಿ ಸ್ವಾಮೀಜಿಯ ಚಿಂತನೆಗಳನ್ನು ಅಳವಡಿಸಿಕೊಂಡರೆ, ಅವನು ನಿರಾಶೆಗೊಳ್ಳದೆ ತನ್ನ ಗುರಿಯನ್ನು ಸಾಧಿಸುತ್ತಾನೆ ಎಂದು ಹೇಳಲಾಗುತ್ತದೆ. ಯು ಜನಾಂಗಕ್ಕೆ ಸೂರ್ತಿಯಾಗಿರುವ ಈ ದಿನ ಪ್ರಧಾನಿ ಮೋದಿ ಚೆನ್ನೈನಲ್ಲಿ ಶಾಸ್ತ್ರೀಯ ತಮಿಳು ಸಂಸ್ಥೆಯ ಹೊಸ ಕ್ಯಾಂಪಸ್ ಉದ್ಘಾಟಿಸಲಿದ್ದಾರೆ. ಜೊತೆಗೆ ಕೇಂದ್ರಾಡಳಿತ ಪ್ರದೇಶವಾದ ಪುದುಚೇರಿಯಲ್ಲಿ ಐದು ದಿನಗಳವರೆಗೆ ನಡೆಯಲಿರುವ ರಾಷ್ಟ್ರೀಯ ಯುವಜನೋತ್ಸವವನ್ನು ಉದ್ಘಾಟಿಸಲಿದ್ದಾರೆ.

ಕ್ಯಾಂಪಸ್ ಉದ್ಘಾಟಿಸಲಿರುವ ಪ್ರಧಾನಿ ಮೋದಿ

ಕ್ಯಾಂಪಸ್ ಉದ್ಘಾಟಿಸಲಿರುವ ಪ್ರಧಾನಿ ಮೋದಿ

ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಜನವರಿ 12 ರಂದು ಚೆನ್ನೈನಲ್ಲಿ ಸೆಂಟ್ರಲ್ ಇನ್ಸ್ಟಿಟ್ಯೂಟ್ ಆಫ್ ಕ್ಲಾಸಿಕಲ್ ತಮಿಳ್ ನ ಹೊಸ ಕ್ಯಾಂಪಸ್ ಅನ್ನು ಉದ್ಘಾಟಿಸಲಿದ್ದಾರೆ. ವೀಡಿಯೋ ಕಾನ್ಫರೆನ್ಸ್ ಮೂಲಕ ಉದ್ಘಾಟನೆ ಮಾಡಲಾಗುವುದು ಎಂದು ಪ್ರಧಾನಿ ಕಚೇರಿ ತಿಳಿಸಿದೆ.

ವಿಡಿಯೋ ಕಾನ್ಫರೆನ್ಸ್ ಮೂಲಕ ಉದ್ಘಾಟನೆ

ವಿಡಿಯೋ ಕಾನ್ಫರೆನ್ಸ್ ಮೂಲಕ ಉದ್ಘಾಟನೆ

1,450 ಸೀಟುಗಳ ಸಾಮರ್ಥ್ಯ ಹೊಂದಿರುವ ಹೊಸ ವೈದ್ಯಕೀಯ ಕಾಲೇಜುಗಳನ್ನು ಕೇಂದ್ರ ಪ್ರಾಯೋಜಿತ 'ಅಸ್ತಿತ್ವದಲ್ಲಿರುವ ಜಿಲ್ಲೆ/ರೆಫರಲ್ ಆಸ್ಪತ್ರೆಯೊಂದಿಗೆ ಜೋಡಿಸಲಾದ ಹೊಸ ವೈದ್ಯಕೀಯ ಕಾಲೇಜುಗಳ ಸ್ಥಾಪನೆ' ಅಡಿಯಲ್ಲಿ ಸ್ಥಾಪಿಸಲಾಗುತ್ತಿದೆ. ಈ ಯೋಜನೆಯಡಿ ಸರ್ಕಾರಿ ಅಥವಾ ಖಾಸಗಿ ವೈದ್ಯಕೀಯ ಕಾಲೇಜು ಹೊಂದಿರದ ಜಿಲ್ಲೆಗಳಲ್ಲಿ ವೈದ್ಯಕೀಯ ಕಾಲೇಜುಗಳನ್ನು ಸ್ಥಾಪಿಸಲಾಗಿದೆ ಎಂದು ಹೇಳಿಕೆ ತಿಳಿಸಿದೆ.

ಯುವಕರಿಗೆ ಪ್ರೋತ್ಸಾಹ

ಯುವಕರಿಗೆ ಪ್ರೋತ್ಸಾಹ

ಚೆನ್ನೈನಲ್ಲಿ ಸೆಂಟ್ರಲ್ ಇನ್‌ಸ್ಟಿಟ್ಯೂಟ್ ಆಫ್ ಕ್ಲಾಸಿಕಲ್ ತಮಿಳು ಸಂಸ್ಥೆಯ (ಸಿಐಸಿಟಿ) ಹೊಸ ಕ್ಯಾಂಪಸ್ ಸ್ಥಾಪನೆಯು ಭಾರತೀಯ ಪರಂಪರೆಯನ್ನು ಸಂರಕ್ಷಿಸಲು ಮತ್ತು ಶಾಸ್ತ್ರೀಯ ಭಾಷೆಗಳನ್ನು ಉತ್ತೇಜಿಸಲು ಪ್ರಧಾನ ಮಂತ್ರಿಯವರ ದೃಷ್ಟಿಗೆ ಅನುಗುಣವಾಗಿದೆ ಎಂದು ಪಿಎಂಒ ಹೇಳಿದೆ.

ಬಯಲು ರಂಗಮಂದಿರ ಉದ್ಘಾಟನೆ

ಬಯಲು ರಂಗಮಂದಿರ ಉದ್ಘಾಟನೆ

ಜೊತೆಗೆ ಪುದುಚೇರಿ ಸರ್ಕಾರವು ಸುಮಾರು 23 ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಿಸಿರುವ ಪೆರುಂತಲೈವರ್ ಕಾಮರಾಜರ್ ಮಣಿಮಂಡಪಮ್, ಬಯಲು ರಂಗಮಂದಿರವನ್ನು ಹೊಂದಿರುವ ಸಭಾಂಗಣವನ್ನು ಪ್ರಧಾನಿ ಮೋದಿ ಉದ್ಘಾಟಿಸಲಿದ್ದಾರೆ. ಇದನ್ನು ಪ್ರಾಥಮಿಕವಾಗಿ ಶೈಕ್ಷಣಿಕ ಉದ್ದೇಶಗಳಿಗಾಗಿ ಬಳಸಲಾಗುತ್ತದೆ ಮತ್ತು 1000 ಕ್ಕಿಂತ ಹೆಚ್ಚು ಜನರಿಗೆ ಅವಕಾಶ ಕಲ್ಪಿಸುತ್ತದೆ.

ಪುದುಚೇರಿಯಲ್ ಯುವ ಉತ್ಸವ ಉದ್ಘಾಟಿಸಲಿರುವ ಪ್ರಧಾನಿ

ಪುದುಚೇರಿಯಲ್ ಯುವ ಉತ್ಸವ ಉದ್ಘಾಟಿಸಲಿರುವ ಪ್ರಧಾನಿ

ಆಧ್ಯಾತ್ಮಿಕ ನಾಯಕ ಸ್ವಾಮಿ ವಿವೇಕಾನಂದರ 159ನೇ ಜನ್ಮದಿನಾಚರಣೆ ಅಂಗವಾಗಿ ಕೇಂದ್ರಾಡಳಿತ ಪ್ರದೇಶವಾದ ಪುದುಚೇರಿಯಲ್ಲಿ ಐದು ದಿನಗಳವರೆಗೆ ನಡೆಯಲಿರುವ ರಾಷ್ಟ್ರೀಯ ಯುವಜನೋತ್ಸವವನ್ನು ಪ್ರಧಾನಿ ನರೇಂದ್ರ ಮೋದಿ ಇಂದು ಉದ್ಘಾಟಿಸಲಿದ್ದಾರೆ. ಕೇಂದ್ರ ಮಾಹಿತಿ ಮತ್ತು ಪ್ರಸಾರ ಖಾತೆ ಸಚಿವ ಅನುರಾಗ್ ಠಾಕೂರ್ ಭಾನುವಾರ ಟ್ವೀಟ್ ಮಾಡಿದ್ದು, ಯುವಕರು ಪ್ರಧಾನಿ ಅವರನ್ನು ಕೇಳಲು ಮತ್ತು ಮಾತನಾಡಲು ಬಯಸುವ ವಿಚಾರಗಳನ್ನು ಹಂಚಿಕೊಳ್ಳಲು ಕೇಳಿಕೊಂಡಿದ್ದಾರೆ. ಪ್ರಧಾನಮಂತ್ರಿ ಕಾರ್ಯಾಲಯದ ಅಧಿಕೃತ ಪ್ರಕಟಣೆಯ ಪ್ರಕಾರ, ದೇಶದ ಯುವಜನರು ಕೇಳಲು ಬಯಸುವ ಉತ್ತಮ ವಿಚಾರಗಳಿಗಾಗಿ ಪ್ರಧಾನಮಂತ್ರಿಯವರು ನಿಗಾ ವಹಿಸುತ್ತಾರೆ ಮತ್ತು ಹಬ್ಬದ ದಿನದಂದು ತಮ್ಮ ಭಾಷಣದಲ್ಲಿ ಅವುಗಳನ್ನು ಸೇರಿಸುತ್ತಾರೆ. ಆಸಕ್ತ ಯುವಕರು ತಮ್ಮ ವಿಚಾರಗಳನ್ನು ಹಂಚಿಕೊಳ್ಳಬಹುದು. ಆಧ್ಯಾತ್ಮಿಕ ನಾಯಕ ಸ್ವಾಮಿ ವಿವೇಕಾನಂದರ ಅವರ 159ನೇ ಜನ್ಮದಿನಾಚರಣೆ ಯುವಜನೋತ್ಸವ ರಾಷ್ಟ್ರ ನಿರ್ಮಾಣದ ಕಡೆಗೆ ಯುವಜನರನ್ನು ಏಕೀಕರಿಸುವುದು, ಪ್ರೇರೇಪಿಸುವುದು ಮತ್ತು ಸಕ್ರಿಯಗೊಳಿಸುವ ಗುರಿಯನ್ನು ಹೊಂದಿದೆ. ಉತ್ಸವದಲ್ಲಿ ದೇಶದ ಪ್ರತಿಯೊಂದು ಜಿಲ್ಲೆಯನ್ನು ಪ್ರತಿನಿಧಿಸುವ ಯುವಕರು ಭಾಗವಹಿಸುತ್ತಾರೆ.

Recommended Video

KL Rahul ನಾಯಕತ್ವದ ಏಕದಿನ ಸರಣಿಗೆ ಆಟಗಾರರೇ‌ ಇಲ್ಲ | Oneindia Kannada
ಸ್ವಾಮಿ ವಿವೇಕಾನಂದರ ಜನ್ಮದಿನ

ಸ್ವಾಮಿ ವಿವೇಕಾನಂದರ ಜನ್ಮದಿನ

ಸ್ವಾಮಿ ವಿವೇಕಾನಂದರು ಜನವರಿ 12, 1863 ರಂದು ಕೋಲ್ಕತ್ತಾದ ಕಾಯಸ್ಥ ಕುಟುಂಬದಲ್ಲಿ ಜನಿಸಿದರು. ಸ್ವಾಮೀಜಿಯವರ ಜನ್ಮದಿನವನ್ನು ದೇಶವು ‘ರಾಷ್ಟ್ರೀಯ ಯುವ ದಿನ' ಎಂದು ಆಚರಿಸುತ್ತದೆ. ಸ್ವಾಮೀಜಿಯವರ ಚಿಂತನೆಗಳು ಇಂದಿಗೂ ಮನುಷ್ಯನ ಹೃದಯದಲ್ಲಿ ಉತ್ಸಾಹವನ್ನು ಮೂಡಿಸುತ್ತವೆ. ಒಬ್ಬ ವ್ಯಕ್ತಿಯು ತನ್ನ ಜೀವನದಲ್ಲಿ ಸ್ವಾಮೀಜಿಯ ಚಿಂತನೆಗಳನ್ನು ಅಳವಡಿಸಿಕೊಂಡರೆ, ಅವನು ನಿರಾಶೆಗೊಳ್ಳದೆ ತನ್ನ ಗುರಿಯನ್ನು ಸಾಧಿಸುತ್ತಾನೆ. ಸ್ವಾಮಿ ವಿವೇಕಾನಂದರನ್ನು ಆಲ್ ರೌಂಡರ್ ಎಂದು ಕರೆಯಲಾಗುತ್ತದೆ. ಅವರು ಧರ್ಮ, ತತ್ವಶಾಸ್ತ್ರ, ಇತಿಹಾಸ, ಕಲೆ, ಸಮಾಜ ವಿಜ್ಞಾನ, ಸಾಹಿತ್ಯ ಬಲ್ಲವರಾಗಿದ್ದರು. ಶಿಕ್ಷಣದಲ್ಲಿ ಉತ್ತಮವಾದುದಲ್ಲದೆ ಭಾರತೀಯ ಶಾಸ್ತ್ರೀಯ ಸಂಗೀತದ ಜ್ಞಾನವನ್ನೂ ಹೊಂದಿದ್ದರು. ಇದಲ್ಲದೆ, ವಿವೇಕಾನಂದ ಅವರು ಉತ್ತಮ ಆಟಗಾರರು ಸಹ ಆಗಿದ್ದರು. ಅವರು ಯುವಕರಿಗೆ ಸ್ಫೂರ್ತಿಯಾಗುವುದರಲ್ಲಿ ಯಾವುದರಲ್ಲೂ ಕಡಿಮೆಯಿರಲಿಲ್ಲ. ಅನೇಕ ಸಂದರ್ಭಗಳಲ್ಲಿ ಅವರು ತಮ್ಮ ಅಮೂಲ್ಯವಾದ ಆಲೋಚನೆಗಳು ಮತ್ತು ಸ್ಪೂರ್ತಿದಾಯಕ ಮಾತುಗಳೊಂದಿಗೆ ಮುಂದುವರಿಯಲು ಯುವಕರನ್ನು ಪ್ರೋತ್ಸಾಹಿಸುತ್ತಿದ್ದರು. ಅದಕ್ಕಾಗಿಯೇ ಸ್ವಾಮಿ ವಿವೇಕಾನಂದರ ಜಯಂತಿಯನ್ನು ರಾಷ್ಟ್ರೀಯ ಯುವ ದಿನವನ್ನಾಗಿ ಆಚರಿಸಲಾಗುತ್ತದೆ.

English summary
PM Narendra Modi will be inaugurating the new campus of Central Institute of Classical Tamil in Chennai today. Prime Minister's office informed that the inauguration will be done through video conferencing.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X