• search
  • Live TV
ಚೆನ್ನೈ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ತಮಿಳುನಾಡಿನಲ್ಲಿ 31,500 ಸಾವಿರ ಕೋಟಿ ವೆಚ್ಚದ ಅಭಿವೃದ್ಧಿ ಯೋಜನೆಗಳಿಗೆ ಪ್ರಧಾನಿ ಮೋದಿ ಶಿಲಾನ್ಯಾಸ

|
Google Oneindia Kannada News

ಚೆನ್ನೈ, ಮೇ 26: ಪ್ರಧಾನಿ ನರೇಂದ್ರ ಮೋದಿ ಗುರುವಾರ ಚೆನ್ನೈನ ಜವಾಹರಲಾಲ್ ನೆಹರು ಕ್ರೀಡಾಂಗಣದಲ್ಲಿ ಬೆಂಗಳೂರು-ಚೆನ್ನೈ ಎಕ್ಸ್‌ಪ್ರೆಸ್‌ ವೇ ಸೇರಿದಂತೆ ವಿವಿಧ 31,500 ಕೋಟಿ ವೆಚ್ಚದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಿದರು.

ಚೆನ್ನೈಗೆ ಭೇಟಿ ನೀಡಿದ ಪ್ರಧಾನಿ ಮೋದಿಯವರನ್ನು ತಮಿಳುನಾಡು ರಾಜ್ಯಪಾಲ ಆರ್.ಎನ್. ರವಿ ಸ್ವಾಗತಿಸಿದರು. ಡಿಎಂಕೆ ನಾಯಕ ಮತ್ತು ಸಚಿವರಾದ ದೊರೈಮುರುಗನ್ ಮತ್ತು ಕೆ.ಪೊನ್ಮುಡಿ ಉಪಸ್ಥಿತರಿದ್ದರು. ಚೆನ್ನೈ ನಗರದಲ್ಲಿ ಪ್ರಧಾನಿ ಮೋದಿ ಭರ್ಜರಿ ರೋಡ್‌ ಶೋ ನಡೆಸಿದರು.

ಭಾರತದ ಅತಿದೊಡ್ಡ ಡ್ರೋನ್ ಉತ್ಸವಕ್ಕೆ ಮೋದಿಯಿಂದ ಚಾಲನೆಭಾರತದ ಅತಿದೊಡ್ಡ ಡ್ರೋನ್ ಉತ್ಸವಕ್ಕೆ ಮೋದಿಯಿಂದ ಚಾಲನೆ

ಅಭಿವೃದ್ಧಿ ಶಿಲಾನ್ಯಾಸ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್, ರಾಜ್ಯಪಾಲ ಆರ್.ಎನ್.ರವಿ, ಕೇಂದ್ರ ರಾಜ್ಯ ಸಚಿವ ಎಲ್. ಮುರುಗನ್ ಸೇರಿದಂತೆ ಹಲವರು ಉಪಸ್ಥಿತರಿದ್ದರು. 2,960 ಕೋಟಿ ರೂ. ಮೌಲ್ಯದ ಐದು ಯೋಜನೆಗಳನ್ನು ಪ್ರಧಾನಿ ದೇಶಕ್ಕೆ ಸಮರ್ಪಿಸಿದರು.

 ವಿವಿಧ ರೈಲು ಮಾರ್ಗಗಳ ಉದ್ಘಾಟನೆ

ವಿವಿಧ ರೈಲು ಮಾರ್ಗಗಳ ಉದ್ಘಾಟನೆ

75 ಕಿ.ಮೀ. ಉದ್ದದ ಮಧುರೈ-ಥೇಣಿ ರೈಲ್ವೆ ಗೇಜ್ ಪರಿವರ್ತನೆ ಯೋಜನೆ, 500 ಕೋಟಿ ರೂ.ಗಿಂತ ಹೆಚ್ಚಿನ ಯೋಜನಾ ವೆಚ್ಚದಲ್ಲಿ ನಿರ್ಮಿಸಲಾಗಿದೆ, ಈ ಭಾಗದಲ್ಲಿ ಸಂಚಾರಕ್ಕೆ ಅನುಕೂಲ ಮಾಡಿಕೊಡಲಿದ್ದು, ಪ್ರವಾಸೋದ್ಯಮ ಅಭಿವೃದ್ಧಿಗೂ ಸಹಾಯಕವಾಗಲಿದೆ.

590 ಕೋಟಿ ರೂ. ಯೋಜನಾ ವೆಚ್ಚದಲ್ಲಿ ನಿರ್ಮಿಸಲಾಗುವ ತಾಂಬರಂ - ಚೆಂಗಲ್ಪಟ್ಟು ನಡುವಿನ 30 ಕಿ.ಮೀ ಉದ್ದದ ಮೂರನೇ ರೈಲು ಮಾರ್ಗದಿಂದ ಹೆಚ್ಚಿನ ಉಪನಗರ ಸೇವೆಗಳ ಚಾಲನೆಯನ್ನು, ಸಾರಿಗೆ ದಟ್ಟಣೆಯಿಂದ ಸುಗಮಗೊಳಿಸುತ್ತದೆ ಮತ್ತು ಪ್ರಯಾಣಿಕರಿಗೆ ಸೌಕರ್ಯವನ್ನು ಹೆಚ್ಚಿಸುತ್ತದೆ.

 Explained: 8 ವರ್ಷ ಪೂರೈಸಿದ ಪ್ರಧಾನಿ ಮೋದಿ ಸರ್ಕಾರ ಜಾರಿಗೊಳಿಸಿದ 8 ಯೋಜನೆಗಳು Explained: 8 ವರ್ಷ ಪೂರೈಸಿದ ಪ್ರಧಾನಿ ಮೋದಿ ಸರ್ಕಾರ ಜಾರಿಗೊಳಿಸಿದ 8 ಯೋಜನೆಗಳು

 ನೈಸರ್ಗಿಕ ಅನಿಲ ಪೂರೈಕೆಗೆ ಪೈಪ್‌ಲೈನ್

ನೈಸರ್ಗಿಕ ಅನಿಲ ಪೂರೈಕೆಗೆ ಪೈಪ್‌ಲೈನ್

ಇಟಿಬಿಪಿಎನ್ಎಂಟಿ ನೈಸರ್ಗಿಕ ಅನಿಲ ಪೈಪ್‌ಲೈನ್ ನ 115 ಕಿ.ಮೀ. ಉದ್ದದ ಎನ್ನೂರ್-ಚೆಂಗಲ್ಪಟ್ಟು ವಿಭಾಗ ಮತ್ತು 271 ಕಿ.ಮೀ. ಉದ್ದದ ತಿರುವಳ್ಳೂರು-ಬೆಂಗಳೂರು ವಿಭಾಗವನ್ನು ಕ್ರಮವಾಗಿ 850 ಕೋಟಿ ರೂ. ಮತ್ತು 910 ಕೋಟಿ ರೂ. ಯೋಜನಾ ವೆಚ್ಚದಲ್ಲಿ ನಿರ್ಮಿಸಲಾಗುವುದು. ಇದರಿಂದಾಗಿ, ತಮಿಳುನಾಡು, ಕರ್ನಾಟಕ ಮತ್ತು ಆಂಧ್ರಪ್ರದೇಶದ ಗ್ರಾಹಕರು ಹಾಗೂ ಕೈಗಾರಿಕೆಗಳಿಗೆ ನೈಸರ್ಗಿಕ ಅನಿಲ ಪೂರೈಕೆಗೆ ಅನುಕೂಲವಾಗಲಿದೆ.

ಪ್ರಧಾನಮಂತ್ರಿ ಆವಾಸ್ ಯೋಜನೆ (ನಗರ) ಇದರ ಅಡಿಯಲ್ಲಿ ಲೈಟ್ ಹೌಸ್ ಪ್ರಾಜೆಕ್ಟ್ - ಚೆನ್ನೈನ ಭಾಗವಾಗಿ ರೂ. 116 ಕೋಟಿ ವೆಚ್ಚದಲ್ಲಿ ನಿರ್ಮಿಸಲಾದ 1152 ಮನೆಗಳ ಉದ್ಘಾಟನೆ ಮಾಡಿದರು.

 ಬೆಂಗಳೂರು-ಚೆನ್ನೈ ಎಕ್ಸ್ ಪ್ರೆಸ್ ವೇ ನಿರ್ಮಾಣ

ಬೆಂಗಳೂರು-ಚೆನ್ನೈ ಎಕ್ಸ್ ಪ್ರೆಸ್ ವೇ ನಿರ್ಮಾಣ

28,500 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಲಿರುವ ಆರು ಯೋಜನೆಗಳ ಶಂಕುಸ್ಥಾಪನೆಯನ್ನೂ ಪ್ರಧಾನಿ ಮೋದಿ ನೆರವೇರಿಸಿದರು. ಸುಮಾರು 14,870 ಕೋಟಿ ರೂ. ವೆಚ್ಚದಲ್ಲಿ 262 ಕಿ.ಮೀ. ಉದ್ದದ ಬೆಂಗಳೂರು-ಚೆನ್ನೈ ಎಕ್ಸ್ ಪ್ರೆಸ್ ವೇಯನ್ನು ನಿರ್ಮಿಸಲಾಗುವುದು. ಇದು ಕರ್ನಾಟಕ, ಆಂಧ್ರಪ್ರದೇಶ ಮತ್ತು ತಮಿಳುನಾಡು ರಾಜ್ಯಗಳ ಮೂಲಕ ಹಾದುಹೋಗುತ್ತದೆ ಹಾಗೂ ಬೆಂಗಳೂರು ಮತ್ತು ಚೆನ್ನೈ ನಡುವಿನ ಪ್ರಯಾಣದ ಸಮಯವನ್ನು 2-3 ಗಂಟೆಗಳವರೆಗೆ ಕಡಿಮೆ ಮಾಡಲಿದೆ.

5850 ಕೋಟಿ ರೂ. ವೆಚ್ಚದಲ್ಲಿ ಚೆನ್ನೈ ಬಂದರಿನಿಂದ ಮಧುರವಾಯಲ್‌ಗೆ ಸಂಪರ್ಕಿಸುವ ಸುಮಾರು 21 ಕಿಮೀ ಉದ್ದವನ್ನು 4 ಲೇನ್ ಡಬಲ್ ಡೆಕ್ಕರ್ ಎಲಿವೇಟೆಡ್ ರಸ್ತೆಯಾಗಿ ಮಾರ್ಪಡಿಸಲಾಗುವುದು. ಇದು ಚೆನ್ನೈ ಬಂದರಿಗೆ ಸರಕು ವಾಹನಗಳ ಮಾರ್ಗವನ್ನು ಸುಗಮಗೊಳಿಸುತ್ತದೆ.

 ರೈಲು ನಿಲ್ದಾಣಗಳ ಅಭಿವೃದ್ಧಿ

ರೈಲು ನಿಲ್ದಾಣಗಳ ಅಭಿವೃದ್ಧಿ

ತಡೆರಹಿತ ಸಂಪರ್ಕವನ್ನು ಒದಗಿಸುವ ನಿಟ್ಟಿನಲ್ಲಿ ರಾ.ಹೆ-844 ರ 94 ಕಿಮೀ ಉದ್ದದ 4 ಲೇನ್ ನೇರಲೂರಿನಿಂದ ಧರ್ಮಪುರಿ ವಿಭಾಗ ಮತ್ತು 31 ಕಿಮೀ ಉದ್ದದ 2 ಮಾರ್ಗಗಳು ರಾ.ಹೆ. 227 ರ ಮೀನುಸುರುಟ್ಟಿಯಿಂದ ಚಿದಂಬರಂ ಭಾಗಕ್ಕೆ ಸುಸಜ್ಜಿತ ಸಂಪರ್ಕ ವ್ಯವಸ್ಥೆ ನೀಡಲಿದ್ದು, ಕ್ರಮವಾಗಿ ಸುಮಾರು 3870 ಕೋಟಿ ರೂ. ಮತ್ತು 720 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಲಾಗುವುದು.

1800 ಕೋಟಿ ರೂ. ಅಧಿಕ ವೆಚ್ಚದ ಚೆನ್ನೈ ಎಗ್ಮೋರ್, ರಾಮೇಶ್ವರಂ, ಮಧುರೈ, ಕಟ್ಪಾಡಿ ಮತ್ತು ಕನ್ಯಾಕುಮಾರಿ ಎಂಬ ಐದು ರೈಲು ನಿಲ್ದಾಣಗಳ ಅಭಿವೃದ್ಧಿಗೆ ಅಡಿಪಾಯ ಹಾಕಲಾಗಿದೆ. ಆಧುನಿಕ ಸೌಕರ್ಯಗಳನ್ನು ಒದಗಿಸುವ ಮೂಲಕ ಪ್ರಯಾಣಿಕರ ಅನುಕೂಲ ಮತ್ತು ಸೌಕರ್ಯವನ್ನು ಹೆಚ್ಚಿಸುವ ದೃಷ್ಟಿಯಿಂದ ಈ ಯೋಜನೆ ಪ್ರಾರಂಭಿಸಲಾಗಿದೆ.

ಚೆನ್ನೈನಲ್ಲಿ1400 ಕೋಟಿ ರೂ.ಗಳಿಗೂ ಅಧಿಕ ಮೌಲ್ಯದ ಮಲ್ಟಿ ಮಾಡಲ್ ಲಾಜಿಸ್ಟಿಕ್ ಪಾರ್ಕ್ ಶಂಕುಸ್ಥಾಪನೆ ಮಾಡಿದರು. ಇದು ತಡೆರಹಿತ ಇಂಟರ್ ಮೋಡಲ್ ಸರಕು ಸಾಗಣೆ ಗೆ ಪೂರಕವಾಗಿದೆ ಮತ್ತು ಸಾರಿಗೆ-ಸಾಗಾಟ ನಿಟ್ಟಿನಲ್ಲಿ ಬಹು ಕಾರ್ಯಗಳನ್ನು ಸಹ ನಿರ್ವಹಿಸಲಿದೆ.

English summary
Prime Minister Narendra Modi on Thursday laid the foundation stone of development works worth over Rs. 31,000 crores, He held a roadshow in Chennai upon his arrival in the capital city of Tamil Nadu.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X