ತಮಿಳುನಾಡಿನಲ್ಲಿ ಕೊರೊನಾ ಹಾಟ್ಸ್ಪಾಟ್ ಮಾರುಕಟ್ಟೆ ತೆರೆಯಲು ಪ್ರತಿಭಟನೆ
ಚೆನ್ನೈ, ಮೇ 18: ತಮಿಳುನಾಡಿನಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 10 ಸಾವಿರ ಗಡಿದಾಟಿದೆ. ಮಹಾರಾಷ್ಟ್ರ, ಗುಜರಾತ್ ಬಳಿಕ ಅತಿ ಹೆಚ್ಚು ಸೋಂಕಿತರನ್ನು ಹೊಂದಿರುವ ರಾಜ್ಯ ತಮಿಳುನಾಡು. ಚೆನ್ನೈನಲ್ಲಿ ಮಾತ್ರ ಸುಮಾರು 6000 ಕೇಸ್ ದಾಖಲಾಗಿದೆ.
Recommended Video
ದೇಶದ ಪ್ರಮುಖ ಹಾಟ್ಸ್ಪಾಟ್ ಆಗಿರುವ ಚೆನ್ನೈನಲ್ಲಿ ಹೂವು ಮಾರುಕಟ್ಟೆ ತೆರೆಯುವಂತೆ ಪ್ರತಿಭಟನೆ ನಡೆದಿದೆ. ಚೆನ್ನೈನ ಕೋಯಂಬೆಡು ಮಾರುಕಟ್ಟೆಯಲ್ಲಿ ಹೂವು ಮಾರಾಟ ಮಾಡಲು ಅವಕಾಶ ಕೊಡಬೇಕು ಎಂದು ಒತ್ತಾಯಿಸಿ ಹೂವು ಮಾರಾಟಗಾರರು ಇಂದು ಪ್ರತಿಭಟನೆ ಮಾಡಿದ್ದಾರೆ.
ಕೋಯಂಬೆಡು ಮಾರುಕಟ್ಟೆ ಚೆನ್ನೈನ ಕೊರೊನಾ ಹಾಟ್ಸ್ಪಾಟ್ ಪ್ರದೇಶ. ಚೆನ್ನೈನ ಪೂರ್ತಿ ಕೇಸ್ಗಳ ಪೈಕಿ ಇಲ್ಲಿಂದಲೇ 1500ಕ್ಕೂ ಅಧಿಕ ಜನರಿಗೆ ಸೋಂಕು ತಗುಲಿದೆ ಎಂದು ಹೇಳಲಾಗಿದೆ. ಈ ಮಾರುಕಟ್ಟೆಯಿಂದಲೇ ಹೆಚ್ಚು ಸೋಂಕು ಹರಡಿದೆ ಎಂಬ ಕಾರಣಕ್ಕೆ ಮಾರುಕಟ್ಟೆ ಬಂದ್ ಮಾಡಲಾಗಿದೆ.

ಆದರೆ, ನಾಲ್ಕನೇ ಹಂತದಲ್ಲಿ ಕೇಂದ್ರ ಸರ್ಕಾರ ರಾಜ್ಯಗಳಲ್ಲಿ ಮತ್ತಷ್ಟು ವಿನಾಯಿತಿ ಘೋಷಿಸಿದೆ. ಈ ಹಿನ್ನೆಲೆ ಕೋಯಂಬೆಡು ಮಾರುಕಟ್ಟೆಯಲ್ಲಿ ಹೂವು ಮಾರಾಟ ಮಾಡಲು ಅನುಮತಿ ಕೇಳುತ್ತಿದ್ದಾರೆ. ಈ ಮಾರುಕಟ್ಟೆಯನ್ನು ನಂಬಿ ಸುಮಾರು 2000 ಕುಟುಂಬಗಳು ಜೀವನ ಮಾಡುತ್ತಿದೆ. ''ತಿನ್ನಲು ಊಟವಿಲ್ಲದೆ, ಕೆಲಸವೂ ಇಲ್ಲದಂತಾಗಿದೆ'' ಎಂದು ಪ್ರತಿಭಟನೆ ಮಾಡಿದ್ದಾರೆ.
Tamil Nadu: Koyambedu Wholesale Flowers Market Merchants' Association today protested in Chennai demanding the state government to allow the sale of flowers amid lockdown due to #COVID19. Moorghaiya, President of Association says, "2000 families are starving without food and job" pic.twitter.com/Q9oiZqeQR5
— ANI (@ANI) May 18, 2020
ಈ ಬಗ್ಗೆ ಚೆನ್ನೈ ಜಿಲ್ಲಾಡಳಿತ ಆಗಲಿ ಅಥವಾ ತಮಿಳುನಾಡು ಸರ್ಕಾರ ಆಗಲಿ ಯಾವುದೇ ತೀರ್ಮಾನಕ್ಕೆ ಬಂದಿಲ್ಲ.
-
ಮುಂಬೈ ವಿರುದ್ಧದ ಹೈವೋಲ್ಟೇಜ್ ಕದನಕ್ಕೆ ಆರ್ಸಿಬಿ ಪ್ಲೇಯಿಂಗ್ 11ನಲ್ಲಿ ಮಹತ್ವದ ಬದಲಾವಣೆ ಸಾಧ್ಯತೆ -
Dhurandhar 2 Pakistan: ಅರಬ್ ರಾಷ್ಟ್ರದ ಸಾಲ ತೀರಿಸಲು ದುರಂಧರ್ 2 ಬಿಡುಗಡೆಗೆ ಮುಂದಾಯ್ತಾ ಪಾಕಿಸ್ತಾನ, ಟ್ವಿಸ್ಟ್ -
Lata Mangeshkar & Asha Bhosle: ಆ ಒಂದು ಕಾರಣಕ್ಕೆ ತಂಗಿ ಆಶಾ ಬೋಸ್ಲೆ ಜೊತೆ ಮಾತು ಬಿಟ್ಟಿದ್ದ ಲತಾ ಮಂಗೇಶ್ಕರ್ -
Karntaka Weather: ಹವಾಮಾನ ವೈಪರೀತ್ಯ! ರಾಜ್ಯದ ಒಳನಾಡು, ಕರಾವಳಿ ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ -
ಗಂಡ-ಹೆಂಡತಿ ಜಗಳ ಇಡೀ ದಿನ ತೋರಿಸಿದರೆ ಸಮಾಜಕ್ಕೆ ಏನು ಪ್ರಯೋಜನ: ಮಾಧ್ಯಮಗಳಿಗೆ ಸಿಎಂ ಪ್ರಶ್ನೆ -
Gas Booking New Rules: ಎಲ್ಪಿಜಿ ಗ್ಯಾಸ್ ಬುಕ್ಕಿಂಗ್ನಲ್ಲಿ ಹೊಸ ನಿಯಮ, ಎಷ್ಟು ದಿನಕ್ಕೆ ಸಿಗುತ್ತೆ ಗ್ಯಾಸ್ ಸಿಲಿಂಡರ್ -
ಮೈಸೂರು-ಬೆಂಗಳೂರು ರೈಲು ಪ್ರಯಾಣಿಕರಿಗೆ ಗುಡ್ನ್ಯೂಸ್ ಕೊಟ್ಟ ವಿ.ಸೋಮಣ್ಣ -
'ಕೋಟಿಗೊಬ್ಬ' ರೀರಿಲೀಸ್: ವಿಷ್ಣುದಾದಾ ಅಭಿಮಾನಿಗಳಿಂದ ಸಂಭ್ರಮ, ಪ್ರಸನ್ನ ಥಿಯೇಟರ್ನಲ್ಲಿ ನಾಳೆ 10,000 ಮಂದಿಗೆ ನಾನ್ವೆಜ್ ಊಟ -
Ram Gopal Varma: ದಾವೂದ್ ಇಬ್ರಾಹಿಂ ಇಲ್ಲದಿದ್ದರೆ ನಾನು ಬದುಕು ಕಟ್ಟಿಕೊಳ್ಳುತ್ತಿರಲಿಲ್ಲ: ನಿರ್ದೇಶಕ ರಾಮ್ ಗೋಪಾಲ್ ವರ್ಮಾ -
Smriti Mandhana: ಸ್ಮೃತಿ ಮಂಧಾನ-ಪಲಾಶ್ ಮುಚ್ಚಲ್ ಮತ್ತೆ ಒಂದಾಗ್ತಾರಾ? ಇಬ್ಬರ ಕುಟುಂಬಗಳ ಸೀಕ್ರೆಟ್ ಮೀಟಿಂಗ್ ವಿಡಿಯೋ ವೈರಲ್ -
Asha Bhosle Kannada Songs: ಆಶಾ ಭೋಸ್ಲೆ ಹಾಡಿದ ಕನ್ನಡದ ಹಾಡುಗಳು: ಕರ್ನಾಟಕದ ಜನರ ಮನ ಗೆದ್ದ ಖ್ಯಾತ ಗಾಯಕಿ -
Government Schools: ಈ ವರ್ಷದಿಂದಲೇ ಸರ್ಕಾರಿ ಶಾಲೆಗಳಲ್ಲಿ ದ್ವಿಭಾಷಾ ನೀತಿ: ಎಲ್ಲ ಶಿಕ್ಷಕರಿಗೆ ಇಂಗ್ಲಿಷ್ ಟ್ರೈನಿಂಗ್












Click it and Unblock the Notifications