ಶಂಕರರಾಮನ್ ಕೊಲೆ ಪ್ರಕರಣ: ಕಂಚಿಶ್ರೀಗಳಿಗೆ ಮುಕ್ತಿ
ಪುದುಚೇರಿ, ಸೆ.14:ಶಂಕರರಾಮನ್ ಕೊಲೆ ಪ್ರಕರಣ ಸಂಬಂಧಿಸಿದಂತೆ ಆರೋಪಿಗಳಾಗಿದ್ದ ಕಂಚಿ ಮಠದ ಹಿರಿಯ ಹಾಗೂ ಕಿರಿಯ ಸ್ವಾಮೀಜಿಗಳು ಖುಲಾಸೆಯಾಗಿರುವುದನ್ನು ಪ್ರಶ್ನಿಸಿ ಮೇಲ್ಮನವಿ ಸಲ್ಲಿಸದಿರಲು ಕೇಂದ್ರಾಡಳಿತ ಪ್ರದೇಶ ಪುದುಚೇರಿ ನಿರ್ಧರಿಸಿದೆ. ಇದರಿಂದಾಗಿ ಕಂಚಿಶ್ರೀಗಳು ಹಾಗೂ ಭಕ್ತಾದಿಗಳು ಸಂತಸಭರಿತರಾಗಿದ್ದಾರೆ. ಸುಮಾರು 10 ವರ್ಷಗಳ ಕಾಲ ಕಂಚಿಶ್ರೀಗಳಿಗೆ ಕಾಟ ಕೊಟ್ಟ ಈ ಕೊಲೆ ಪ್ರಕರಣ ಈ ರೀತಿ ಮುಕ್ತಾಯ ಕಂಡಿದೆ.
ಕಂಚಿ ಮಠದ ಹಿರಿಯ ಶ್ರೀ ಜಯೇಂದ್ರ ಸರಸ್ವತಿ ಹಾಗೂ ಕಿರಿಯ ಶ್ರೀ ವಿಜಯೇಂದ್ರ ಸರಸ್ವತಿ ಅವರನ್ನು ಖುಲಾಸೆಗೊಳಿಸಿ ಎಂಟು ತಿಂಗಳ ಹಿಂದೆ ವಿಚಾರಣಾ ನ್ಯಾಯಾಲಯ ನೀಡಿದ್ದ ತೀರ್ಪಿನ ವಿರುದ್ಧ ಮೇಲ್ಮನವಿ ಸಲ್ಲಿಸದೆ ಇರಲು ಪುದುಚೇರಿ ಸರ್ಕಾರ ನಿರ್ಧರಿಸಿದೆ. ತೀರ್ಪನ್ನು ಪ್ರಶ್ನಿಸದಂತೆ ವಿಶೇಷ ಸರ್ಕಾರಿ ಅಭಿಯೋಜಕರಿಗೆ ಸೂಚಿಸಿ ಪುದುಚೇರಿ ಸರ್ಕಾರ ಆದೇಶ ಹೊರಡಿಸಿದೆ.

ಏನಿದು ಪ್ರಕರಣ?: ಕಾಂಚಿಪುರಂನ ವರದರಾಜ ಪೆರುಮಾಳ್ ದೇಗುಲದಲ್ಲಿ 2004ರ ಸೆ.3ರಂದು ಉದ್ಯೋಗಿ ಶಂಕರರಾಮನ್ ಭೀಕರವಾಗಿ ಕೊಲೆಯಾಗಿದ್ದರು. ಈ ಸಂಬಂಧ ಕಂಚಿ ಹಿರಿಯಶ್ರೀಗಳಾದ ಜಯೇಂದ್ರ ಸರಸ್ವತಿ ಹಾಗೂ ವಿಜಯೇಂದ್ರ ಸರಸ್ವತಿ ಅವರನ್ನು ಅದೇ ವರ್ಷದ ನವೆಂಬರ್‌ನಲ್ಲಿ ಬಂಧಿಸಲಾಗಿತ್ತು. ಸುಪ್ರೀಂಕೋರ್ಟ್ ನಿರ್ದೇಶನದ ಮೇರೆಗೆ ಈ ಪ್ರಕರಣದ ವಿಚಾರಣೆಯನ್ನು ತಮಿಳುನಾಡಿನಿಂದ ಪುದುಚೇರಿಗೆ ವರ್ಗಾಯಿಸಲಾಗಿತ್ತು. ಕಂಚಿ ಮಠದ ಶ್ರೀಗಳು ಸೇರಿದಂತೆ 21 ಜನ ಆರೋಪಿಗಳು ಈ ಪ್ರಕರಣದಲ್ಲಿ ಖುಲಾಸೆಯಾಗಿದ್ದರು.
ಖುಲಾಸೆ ತೀರ್ಪಿನ ವಿರುದ್ಧ ಮೇಲ್ಮನವಿ ಸಲ್ಲಿಸಲು ಪುದುಚೇರಿ ಗರ್ವರ್ನರ್ ಲೆ. ವಿರೇಂದ್ರ ಕಟಾರಿಯಾ ಅವರು ಸರ್ಕಾರಕ್ಕೆ ಅನುಮತಿ ನೀಡಿದ್ದರು. ಆದರೆ, ಕಟಾರಿಯಾ ಅವರು ರಾಜೀನಾಮೆ ನೀಡಿ ರಾಜ್ಯಪಾಲ ಹುದ್ದೆ ತೊರೆದ ಈ ಬೆಳವಣಿಗೆ ನಡೆದಿದೆ. ಪುಚುಚೇರಿಯ ಕಾನೂನು ವಿಭಾಗದ ಅಭಿಪ್ರಾಯ ಸಂಗ್ರಹಿಸಿ ಮೇಲ್ಮನವಿ ಸಲ್ಲಿಸದಿರಲು ನಿರ್ಧರಿಸಲಾಯಿತು ಎಂದು ಅಟರ್ನಿ ಜನರಲ್ ಮುಕುಲ್ ರೊಹ್ಟಕಿ ಹೇಳಿದ್ದಾರೆ.
-
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
ಕೆಡಿ ಹಾಡಿನ ವಿವಾದ; ನಮ್ಮವರೇ ಕಾಲೆಳೆಯುವುದು ಸರಿಯಲ್ಲ: ಪ್ರೇಮ್ ಬೆಂಬಲಕ್ಕೆ ನಿಂತ ಯಶ್ ತಾಯಿ ಪುಷ್ಪ












Click it and Unblock the Notifications