ಆರ್.ಕೆ ನಗರ ಉಪಚುನಾವಣೆಯಲ್ಲಿ 59 ಅಭ್ಯರ್ಥಿಗಳಿಂದ ಸ್ಪರ್ಧೆ!

ಚೆನ್ನೈ, ಡಿಸೆಂಬರ್ 7: ತಮಿಳುನಾಡು ಮಾಜಿ ಮುಖ್ಯಮಂತ್ರಿ ಜಯಲಲಿತಾ ನಿಧನದಿಂದ ತೆರವಾಗಿರುವ ಆರ್.ಕೆ ನಗರ ಉಪಚುನಾವಣೆಯಲ್ಲಿ ಬರೋಬ್ಬರಿ 59 ಅಭ್ಯರ್ಥಿಗಳು ಸ್ಪರ್ಧಿಸುತ್ತಿದ್ದಾರೆ.

ಚುನಾವಣೆಯಲ್ಲಿ ಸ್ಪರ್ಧಿಸುತ್ತಿರುವ ಅಭ್ಯರ್ಥಿಗಳ ಪಟ್ಟಿಯನ್ನು ಚುನಾವಣಾ ಆಯೋಗ ಬಿಡುಗಡೆ ಮಾಡಿದ್ದು ಇದರಲ್ಲಿ 47 ಪಕ್ಷೇತರ ಅಭ್ಯರ್ಥಿಗಳು ಸೇರಿದ್ದಾರೆ.

R K Nagar bypoll: EC releases final list of 59 candidates, just one woman in fray

ಡಿಎಂಕೆಯಿಂದ ಮರುದು ಗಣೇಶನ್, ಎಐಎಡಿಎಂಕೆಯಿಂದ ಇ. ಮಧುಸೂದನ್, ಶಶಿಕಲಾ ಬಣದಿಂದ ಟಿಟಿವಿ ದಿನಕರನ್ ಸ್ಪರ್ಧೆಯಲ್ಲಿದ್ದಾರೆ. ಇನ್ನು ಇಲ್ಲಿ ಚುನಾವಣೆಗೆ ಸ್ಪರ್ಧಿಸಲು ಆಸಕ್ತಿ ತೋರಿದ್ದ ನಟ ವಿಶಾಲ್ ಹಾಗೂ ಜಯಲಲಿತಾ ಅವರ ಸೋದರ ಸಂಬಂಧಿ ದೀಪಾ ನಾಮಪತ್ರ ತಿರಸ್ಕೃತವಾಗಿತ್ತು.

ರಾಧಾಕೃಷ್ಣನ್ ನಗರ (ಆರ್.ಕೆ ನಗರ) ದಲ್ಲಿ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಕಣಕ್ಕಿಳಿಸಿದ್ದರೆ ಕಾಂಗ್ರೆಸ್ ಸ್ಪರ್ಧೆಯಿಂದ ದೂರ ಉಳಿದಿದೆ. ವಿಶೇಷವೆಂದರೆ ಕಣದಲ್ಲಿ ಕೇವಲ ಓರ್ವ ಮಹಿಳೆ ಮಾತ್ರ ಇದ್ದಾರೆ.

R K Nagar bypoll: EC releases final list of 59 candidates, just one woman in fray

ಈ ಹಿಂದೆಯೇ ಆರ್.ಕೆ ನಗರ ಉಪಚುನಾವಣೆಗೆ ದಿನಾಂಕ ಘೋಷಣೆ ಮಾಡಲಾಗಿತ್ತು. ಆದರೆ ಚುನಾವಣೆಗೂ ಕ್ಷೇತ್ರದಲ್ಲಿ ಮೊದಲು ಭರ್ಜರಿ ಹಣ ಚೆಲ್ಲಿದ್ದರಿಂದ ಚುನಾವಣಾ ಆಯೋಗ ಚುನಾವಣೆಯನ್ನೇ ರದ್ದುಗೊಳಿಸಿತ್ತು.

ಇದೀಗ ಎರಡನೇ ಬಾರಿಗೆ ಚುನಾವಣೆಗೆ ದಿನಾಂಕ ನಿಗದಿಪಡಿಸಲಾಗಿದೆ. ಆರ್.ಕೆ ನಗರ ವಿಧಾನಸಭೆ ಉಪಚುನಾವಣೆಗೆ ಡಿಸೆಂಬರ್ 21ರಂದು ಮತದಾನ ಪ್ರಕ್ರಿಯೆ ನಡೆಯಲಿದೆ. ಡಿಸೆಂಬರ್ 24ರಂದು ಮತ ಎಣಿಕೆ ನಡೆಯಲಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+