ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ತೂತುಕುಡಿ ಪೊಲೀಸ್ ಫೈರಿಂಗ್ ಕುರಿತು ವಿವಾದಾತ್ಮಕ ಹೇಳಿಕೆ: ನಟ ರಜನೀಕಾಂತ್‌ಗೆ ಎರಡನೇ ಬಾರಿ ಸಮನ್ಸ್

|
Google Oneindia Kannada News

ತೂತುಕುಡಿ, ಡಿಸೆಂಬರ್ 21: ತೂತುಕುಡಿ ಪೊಲೀಸ್ ಫೈರಿಂಗ್ ಪ್ರಕರಣಕ್ಕೆ ಸಂಬಂಧಿಸಿದಂತೆ ವಿವಾದಾತ್ಮಕ ಹೇಳಿಕೆ ನೀಡಿದ್ದ ಸೂಪರ್‌ ಸ್ಟಾರ್ ರಜನೀಕಾಂತ್‌ಗೆ ಎರಡನೇ ಬಾರಿ ಸಮನ್ಸ್ ಜಾರಿಗೊಳಿಸಲಾಗಿದೆ.

ಕಳೆದ ಎರಡು ವರ್ಷಗಳ ಹಿಂದೆ ನಡೆದಿದ್ದ ತೂತುಕುಡಿ ಪೊಲೀಸ್ ಫೈರಿಂಗ್ ಘಟನೆ ಬಗ್ಗೆ ವಿಚಾರಣೆ ನಡೆಸುತ್ತಿರುವ ಏಕ ವ್ಯಕ್ತಿ ಆಯೋಗವು, ಬರುವ ಜನವರಿ 19 ರಂದು ವಿಚಾರಣೆಗೆ ಹಾಜರಾಗುವಂತೆ ಸೂಪರ್ ಸ್ಟಾರ್ ರಜನಿಕಾಂತ್ ಅವರಿಗೆ ಸಮನ್ಸ್ ನೀಡಿದೆ. ವಿಚಾರಣೆಗಾಗಿ ಎರಡನೇ ಬಾರಿಗೆ ರಜನಿಕಾಂತ್ ಅವರಿಗೆ ಆಯೋಗ ಸಮನ್ಸ್ ನೀಡಿದೆ.

ರಜನಿಕಾಂತ್ ಪತ್ನಿಗೆ ನ್ಯಾಯಾಂಗ ನಿಂದನೆ ಕ್ರಮದ ಎಚ್ಚರಿಕೆ ನೀಡಿದ ಹೈಕೋರ್ಟ್ರಜನಿಕಾಂತ್ ಪತ್ನಿಗೆ ನ್ಯಾಯಾಂಗ ನಿಂದನೆ ಕ್ರಮದ ಎಚ್ಚರಿಕೆ ನೀಡಿದ ಹೈಕೋರ್ಟ್

ಬರುವ ವರ್ಷದ ಜನವರಿ 19 ರಂದು ವಿಚಾರಣೆಗೆ ಹಾಜರಾಗುವಂತೆ ಆಯೋಗ ಸಮನ್ಸ್ ನೀಡಿದೆ. 24 ನೇ ಹಂತದ ವಿಚಾರಣೆಯನ್ನು 2021 ರ ಜನವರಿ 18 ರಿಂದ 22 ರವರೆಗೆ ನಿಗದಿಪಡಿಸಲಾಗಿದೆ.

Rajinikanth Summoned For His Remark In 2018 Sterlite Violence Case

ರಿಜಿಸ್ಟರ್ ಪೋಸ್ಟ್ ಮೂಲಕ ಸಮನ್ಸ್ ಕಳುಹಿಸಲಾಗಿದೆ ಎಂದು ಆಯೋಗದ ಮೂಲಗಳು ಖಚಿತಪಡಿಸಿವೆ. ಸಾಕ್ಷ್ಯಧಾರದ ಮೇಲೆ ರಜನಿಕಾಂತ್ ಈ ಪ್ರಕರಣವನ್ನು ಇತ್ಯರ್ಥಪಡಿಸಿಕೊಳ್ಳುವ ಸಾಧ್ಯತೆಯಿರುವುದಾಗಿ ಮೂಲಗಳು ಹೇಳಿವೆ.

2018 ರ ಮೇ ತಿಂಗಳಲ್ಲಿ ರಜನಿಕಾಂತ್ ಸಂತ್ರಸ್ತರನ್ನು ಭೇಟಿ ಮಾಡಲು ಬಂದಾಗ ಸ್ಟರ್ಲೈಟ್ ವಿರೋಧಿ ಪ್ರತಿಭಟನಾಕಾರರ ಮೇಲೆ ಪೊಲೀಸರು ಗುಂಡು ಹಾರಿಸಿದ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ್ದರು. ಸಮಾಜ ವಿರೋಧಿ ಶಕ್ತಿಗಳು ಪ್ರತಿಭಟನೆಯೊಳಗೆ ಸೇರಿಕೊಂಡಿದ್ದಾರೆ ಎಂದು ಅವರು ಹೇಳಿದ್ದರು.

ಈ ವರ್ಷದ ಫೆಬ್ರವರಿಯಲ್ಲಿ ನಿವೃತ್ತ ನ್ಯಾಯಾಧೀಶ ಅರುಣಾ ಜಗದೀಶನ್ ನೇತೃತ್ವದ ಆಯೋಗ, ರಜನಿಕಾಂತ್ ಗೆ ಸಮನ್ಸ್ ನೀಡಿತ್ತು. ಆದರೆ, ತೂತುಕುಡಿಗೆ ಬಂದರೆ ಕಾನೂನು ಮತ್ತು ಸುವ್ಯವಸ್ಥೆಗೆ ತೊಂದರೆಯಾಗಲಿದೆ ಎಂದು ಹೇಳುವ ಮೂಲಕ ರಜನೀಕಾಂತ್‌ ವಿನಾಯಿತಿ ಬಯಸಿದ್ದರು.

English summary
Superstar Rajinikanth, who is set to make his political debut ahead of next year’s Tamil Nadu state elections, has been summoned by a judicial panel investigating the 2018 case of alleged violence at Vedanta Sterlite factory in Tuticorin.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X