ಒಂದು ತಿಂಗಳ ಪೆರೋಲ್ ಮೇಲೆ ಹೊರ ಬಂದ ರಾಜೀವ್ ಗಾಂಧಿ ಹಂತಕಿ
ಚೆನ್ನೈ, ಜುಲೈ 25: ಮಾಜಿ ಪ್ರಧಾನಿ ರಾಜೀವ್ ಗಾಂಧಿ ಅವರನ್ನು ಹತ್ಯೆಗೈದ ಪ್ರಕರಣದಲ್ಲಿ ಆಜೀವ ಪರ್ಯಂತ ಜೈಲುಶಿಕ್ಷೆ ಅನುಭವಿಸುತ್ತಿರುವ ನಳಿನಿ ಶ್ರೀಹರನ್ ಒಂದು ತಿಂಗಳ ಪೆರೋಲ್ ಮೇಲೆ ಹೊರಬಂದಿದ್ದಾಳೆ.
ನಳಿನಿ ಮಗಳು ಹರ್ಷಿತಾ ಅವರ ಮದುವೆ ಇರುವ ಕಾರಣ ಮದ್ರಾಸ್ ಹೈಕೋರ್ಟ್ 1 ತಿಂಗಳ ಪೆರೋಲ್ ನೀಡಿದೆ. ಬಿಡುಗಡೆ ಪ್ರಕ್ರಿಯೆಯನ್ನು ಬೇಗ ಪೂರ್ಣಗೊಳಿಸುವಂತೆ ತಮಿಳುನಾಡು ಸರ್ಕಾರಕ್ಕೆ ಸೂಚಿಸಿತ್ತು. ಇದೀಗ ಪೆರೋಲ್ ಮೂಲಕ ನಳಿನಿ ಹೊರ ಬಂದಿದ್ದಾರೆ.
ಇನ್ನು ಪೆರೋಲ್ ಮೇಲೆ ಹೊರಗಿರುವಷ್ಟು ದಿನಗಳ ಕಾಲ ನಳಿನಿ ಯಾವುದೇ ಸಂದರ್ಶನ ನೀಡುವಂತಿಲ್ಲ . ಹಾಗೂ ಯಾವುದೇ ರಾಜಕೀಯ ವ್ಯಕ್ತಿಗಳನ್ನು ಭೇಟಿ ಮಾಡಬಾರದು ಅಂತಾನೂ ಕೋರ್ಟ್ ಸೂಚನೆ ನೀಡಿದೆ .

ವೆಲ್ಲೂರ್ ನ ಮಹಿಳೆಯರ ಜೈಲಿನಲ್ಲಿ ಕಳೆದ 27 ವರ್ಷಗಳಿಂದ ಜೀವಾವಧಿ ಶಿಕ್ಷೆ ಅನುಭವಿಸುತ್ತಿರುವ ನಳಿನಿ , ತನ್ನ ಮಗಳ ಮದುವೆಯ ಕಾರ್ಯಕ್ಕೆ ಓಡಾಡಲು 6 ತಿಂಗಳ ರಜೆ ನೀಡುವಂತೆ ಕೋರ್ಟ್ ಗೆ ಮನವಿ ಮಾಡಿದ್ದರು. ವಿಚಾರಣೆ ನಡೆಸಿದ ಮದ್ರಾಸ್ ಹೈಕೋರ್ಟ್ ವಿಭಾಗೀಯ ಪೀಠದ ನ್ಯಾಯಾಧೀಶ ಎಂ . ನಿರ್ಮಲ್ ಕುಮಾರ್ 1 ತಿಂಗಳ ಕಾಲ ಪೆರೋಲ್ ನೀಡಿದೆ .
1991 ರ ಮೇ 21 ರಂದು ತಮಿಳುನಾಡಿನ ಶ್ರೀಪೆರಂಬದೂರ್ನಲ್ಲಿ ಚುನಾವಣಾ ಪ್ರಚಾರ ಕೈಗೊಂಡಿದ್ದ ಮಾಜಿ ಪ್ರಧಾನಿ ರಾಜೀವ್ ಗಾಂಧಿ ಅವರು ಎಲ್ಟಿಟಿಇ ಉಗ್ರರು ನಡೆಸಿದ್ದ ಆತ್ಮಾಹುತಿ ಬಾಂಬ್ ದಾಳಿಗೆ ಬಲಿಯಾಗಿದ್ದರು .
ಈ ಪ್ರಕರಣಕ್ಕೆ ಸಂಬಂಧಿಸಿ ನಳಿನಿ ಶ್ರೀಹರನ್ , ಆಕೆಯ ಪತಿ ಮುರುಗನ್ ಸೇರಿದಂತೆ ಒಟ್ಟು 6 ಮಂದಿ ಜೀವಾವಧಿ ಶಿಕ್ಷೆ ಅನುಭವಿಸುತ್ತಿದ್ದಾರೆ.
-
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್












Click it and Unblock the Notifications