ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಚೆನ್ನೈನಲ್ಲಿ ಮಳೆ ಮತ್ತಷ್ಟು ಹೆಚ್ಚಾಗುವ ಸೂಚನೆ: ರೆಡ್ ಅಲರ್ಟ್ ಘೋಷಣೆ

|
Google Oneindia Kannada News

ಚೆನ್ನೈ, ನವೆಂಬರ್ 17: ಚೆನ್ನೈನಲ್ಲಿ ಮುಂದಿನ ದಿನಗಳಲ್ಲಿ ಮಳೆ ಮತ್ತಷ್ಟು ಹೆಚ್ಚಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಎರಡು ದಿನಗಳ ಕಾಲ ಗಂಟೆಗೆ 40 ರಿಂದ 50 ಕಿಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ವರದಿ ನೀಡಿದೆ. ಸಂಬಂಧಿತ ಚಂಡಮಾರುತದ ಪರಿಚಲನೆಯೊಂದಿಗೆ ಕಡಿಮೆ ಒತ್ತಡದ ಪ್ರದೇಶವು ಬಂಗಾಳಕೊಲ್ಲಿಯಲ್ಲಿದೆ. ನ.18 ರ ವೇಳೆಗೆ ದಕ್ಷಿಣ ಆಂಧ್ರಪ್ರದೇಶ ಮತ್ತು ಉತ್ತರ ತಮಿಳುನಾಡು ಕರಾವಳಿಯನ್ನು ತಲುಪಬಹುದು.

ರಾಜ್ಯದ ಕರಾವಳಿ, ದಕ್ಷಿಣ ಒಳನಾಡಿನ ಜಿಲ್ಲೆಗಳಿಗೆ ಭಾರಿ ಮಳೆಯ ಎಚ್ಚರಿಕೆರಾಜ್ಯದ ಕರಾವಳಿ, ದಕ್ಷಿಣ ಒಳನಾಡಿನ ಜಿಲ್ಲೆಗಳಿಗೆ ಭಾರಿ ಮಳೆಯ ಎಚ್ಚರಿಕೆ

ಭಾರಿ ಮಳೆಯಿಂದಾಗಿ ಚೆನ್ನೈ ಮತ್ತು ಪಕ್ಕದ ಜಿಲ್ಲೆಗಳ ಗ್ರಾಮಗಳು ಜಲಾವೃತವಾಗಿದ್ದು, ಹಲವಾರು ಮಂದಿ ಪರಿಹಾರ ಶಿಬಿರಗಳಲ್ಲಿದ್ದಾರೆ. ಗ್ರೇಟರ್ ಚೆನ್ನೈ ಕಾರ್ಪೊರೇಷನ್ ಅವರನ್ನು ಅವರ ಮನೆಗಳಿಗೆ ಸ್ಥಳಾಂತರಿಸಲು ಕ್ರಮ ತೆಗೆದುಕೊಳ್ಳುತ್ತಿದ್ದು, ಆದಾಗ್ಯೂ, ಸುಮಾರು 848 ಜನರು ಇನ್ನೂ ಪರಿಹಾರ ಶಿಬಿರಗಳಲ್ಲಿದ್ದಾರೆ ಎಂದು ತಿಳಿದು ಬಂದಿದೆ.

Red Alert In Chennai, Heavy Rainfall Predicted In Adjoining Districts Next 2 Days

ಚೆನ್ನೈ ಮತ್ತು ಪಕ್ಕದ ಜಿಲ್ಲೆಗಳಲ್ಲಿ 20 ಮಿಮೀ ಮಳೆಯಾಗುವ ನಿರೀಕ್ಷೆಯಿದೆ. ಕಡಿಮೆ ಒತ್ತಡ ಕರಾವಳಿ ತಲುಪುತ್ತಿದ್ದು, ಗುರುವಾರ ರಾತ್ರಿಯವರೆಗೂ ಚೆನ್ನೈ ಮತ್ತು ಅಕ್ಕಪಕ್ಕದ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಇತ್ತೀಚಿಗೆ ನಿರಂತರ ಮಳೆಯಿಂದ ಉಂಟಾದ ಪ್ರವಾಹದಿಂದ ಚೆನ್ನೈ ನಿವಾಸಿಗಳು ಇನ್ನೂ ಚೇತರಿಸಿಕೊಳ್ಳುತ್ತಿರುವಾಗಲೇ ಮತ್ತೊಂದು ಮಳೆಯ ಪರಿಸ್ಥಿತಿ ಉತ್ತರ ತಮಿಳುನಾಡನ್ನು ಕಾಡಲಿದೆ. ನವೆಂಬರ್ 17ರಿಂದ 19ರವರೆಗೆ ಚೆನ್ನೈ ಹಾಗೂ ನೆರೆಯ ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದೆ ಎನ್ನಲಾಗುತ್ತಿದೆ.

ತಿರುವಳ್ಳೂರು, ಚೆನ್ನೈ, ಕಾಂಚೀಪುರಂ, ಚೆಂಗಲ್ ಪಟ್ಟು, ರಾಣಿಪೇಟೆ, ವೆಲ್ಲೂರು, ವಿಲ್ಲೂಪುರಂ, ತಿರುವಣ್ಣಮಲೈ, ಕಾಲಕುರಿಚಿ, ಕುಡಲೂರು ಮತ್ತಿತರ ಜಿಲ್ಲೆಗಳಲ್ಲಿ 12 ರಿಂದ 20 ಸೆಂಟಿ ಮೀಟರ್ ಮಳೆಯಾಗುವ ಸಾಧ್ಯತೆಯಿದ್ದು, ಪ್ರಾದೇಶಿಕ ಹವಾಮಾನ ಕೇಂದ್ರ ಆರೆಂಜ್ ಆಲರ್ಟ್ ಹೊರಡಿಸಿದೆ.

ಉತ್ತರ ಅಂಡಮಾನ್ ಸಮುದ್ರ ಹಾಗೂ ಸುತ್ತಮುತ್ತಲಿನ ವಾಯು ಭಾರತ ಕುಸಿತ ಮುಂದಿನ 48 ಗಂಟೆಗಳಲ್ಲಿ ಬಂಗಾಳ ಕೊಲ್ಲಿ ಪ್ರವೇಶಿಸುವ ಸಾಧ್ಯತೆಯಿದ್ದು, ತಮಿಳುನಾಡು ಕರಾವಳಿ ಮತ್ತು ದಕ್ಷಿಣ ಆಂಧ್ರ ಪ್ರದೇಶದಲ್ಲಿ ನವೆಂಬರ್ 18 ರಂದು ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಇಂದು ಮಧ್ಯಾಹ್ನ ಹೊರಡಿಸಿರುವ ಪ್ರಕಟಣೆಯಲ್ಲಿ ತಿಳಿಸಿದೆ.

ನವೆಂಬರ್ 17 ರಂದು ಸಂಜೆ ಉತ್ತರ ಚೆನ್ನೈನಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಪ್ರವಾಹ ಪರಿಸ್ಥಿತಿ ಉಲ್ಬಣಿಸಬಹುದಾದ ಕೆರೆಗಳ ಗುರುತಿಸಲು ಡ್ರೋನ್ ಮೂಲಕ ಸರ್ವೆ ನಡೆಸಲಾಗಿದೆ ಎಂದು ತಮಿಳುನಾಡು ವಿಪತ್ತು ನಿರ್ವಹಣಾ ಪ್ರಾಧಿಕಾರದ ನಿರ್ದೇಶಕ ಎನ್. ಸುಬ್ರಮಣಿಯನ್ ತಿಳಿಸಿದ್ದಾರೆ. ಎಲ್ಲಾ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಉನ್ನತ ಅಧಿಕಾರಿಯೊಬ್ಬರು ಹೇಳಿದ್ದಾರೆ.

ತಿರುವಳ್ಳೂರು, ಚೆನ್ನೈ, ರಾಣಿಪೇಟ್ ಮತ್ತು ಕಾಂಚೀಪುರಂ ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರೀ ಮಳೆ ಮತ್ತು ಪ್ರತ್ಯೇಕವಾದ ಅತ್ಯಂತ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಚೆಂಗಲ್ಪಟ್ಟು ಮತ್ತು ತಿರುವಣ್ಣಾಮಲೈ ಜಿಲ್ಲೆಗಳ ಪ್ರತ್ಯೇಕ ಸ್ಥಳಗಳಲ್ಲಿ ಗುಡುಗು ಸಹಿತ ಭಾರೀ ಮಳೆಯಾಗುವ ಸಾಧ್ಯತೆಯಿದೆ.

ಸೇಲಂ, ಧರ್ಮಪುರಿ, ಕೃಷ್ಣಗಿರಿ, ಈರೋಡ್, ಕಲ್ಲಕುರಿಚಿ, ಕಡಲೂರು ಜಿಲ್ಲೆಗಳು ಮತ್ತು ಪುದುಚೇರಿಯ ಪ್ರತ್ಯೇಕ ಸ್ಥಳಗಳಲ್ಲಿ ಭಾರೀ ಮಳೆಯೊಂದಿಗೆ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ.

ಕಾರೈಕಲ್ ಮತ್ತು ಡೆಲ್ಟಾ ಜಿಲ್ಲೆಗಳಲ್ಲಿ ಹಲವೆಡೆ ಗುಡುಗು ಸಹಿತ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಉಳಿದಂತೆ ತಮಿಳುನಾಡಿನ ಹಲವೆಡೆ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ.

ಮುಂದಿನ 24 ಗಂಟೆಗಳಲ್ಲಿ ಕೆಲವು ಪ್ರದೇಶಗಳಲ್ಲಿ ಗುಡುಗು ಸಹಿತ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 32 ಸೆಲ್ಶಿಯಸ್ ಮತ್ತು 25 ಸೆಲ್ಶಿಯಸ್ ಆಗಿರಬಹುದು.

ಮುಂದಿನ 48 ಗಂಟೆಗಳಲ್ಲಿ ಗುಡುಗು ಸಹಿತ ಗುಡುಗು ಸಹಿತ ಭಾರೀ ಮಳೆಯಾಗುವ ಸಂಭವವಿದೆ. ಕಳೆದ ಕೆಲವು ದಿನಗಳಿಂದ ಕನ್ಯಾಕುಮಾರಿ, ಕಾವೇರಿ ನದಿ ಮುಖಜ ಭೂಮಿ ಮತ್ತು ಚೆನ್ನೈ ಸೇರಿದಂತೆ ತಮಿಳುನಾಡಿನ ಉತ್ತರ ಜಿಲ್ಲೆಗಳಲ್ಲಿ ಭಾರಿ ಮಳೆಯಾಗಿದೆ.

ಈಶಾನ್ಯ ಮಾನ್ಸೂನ್‌ನಿಂದಾಗಿ ಕನ್ಯಾಕುಮಾರಿ ಜಿಲ್ಲೆಯಲ್ಲಿ (ಅಕ್ಟೋಬರ್ 1 ಮತ್ತು ನವೆಂಬರ್ 15 ರ ನಡುವೆ) 83.96 ಸೆಂ.ಮೀ ಮಳೆಯಾಗಿದೆ. ಆದರೆ 38.99 ಸೆಂ.ಮೀ ಸಾಮಾನ್ಯವಾಗಿದೆ ಮತ್ತು ಸಾಮಾನ್ಯ ಮಳೆಯಿಂದ ಶೇಕಡಾ 115 ರಷ್ಟಿದೆ ಎಂದು ಐಎಂಡಿ ತಿಳಿಸಿದೆ.

Recommended Video

Bangalore Weather Forecast - ಇನ್ನೂ ಮೂರು ದಿನ ಮಳೆ | Oneindia Kannada

English summary
As a low pressure is moving closer to the coast, a red alert has been issued for Chennai and its neighbouring districts Tiruvallur, Kancheepuram and Chengalpattu on Wednesday and Thursday by the Meteorological Department. Heavy rain is likely to occur in one or two places.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X