ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಚಿತ್ರಮಂದಿರಗಳಲ್ಲಿ ಶೇ.100ರಷ್ಟು ಆಸನಭರ್ತಿಗೆ ಅವಕಾಶ; ತಮಿಳುನಾಡು ಸರ್ಕಾರಕ್ಕೆ ಕೇಂದ್ರದ ಪತ್ರ

|
Google Oneindia Kannada News

ಚೆನ್ನೈ, ಜನವರಿ 06: ಸಿನಿಮಾ ಮಂದಿರಗಳಲ್ಲಿ ಶೇ 100ರಷ್ಟು ಆಸನ ಭರ್ತಿಗೆ ತಮಿಳುನಾಡು ಸರ್ಕಾರ ಅವಕಾಶ ನೀಡಿದ್ದು, ಇದಕ್ಕೆ ಕೇಂದ್ರ ಸರ್ಕಾರ ಆಕ್ಷೇಪ ವ್ಯಕ್ತಪಡಿಸಿದೆ. ಕೊರೊನಾ ಸೋಂಕಿಗೆ ಸಂಬಂಧಿಸಿದಂತೆ ಕೇಂದ್ರದ ಮಾರ್ಗಸೂಚಿಗಳನ್ನು ಪಾಲಿಸುವಂತೆ ತಮಿಳುನಾಡಿಗೆ ಸೂಚಿಸಿದೆ.

ಕೊರೊನಾ ಮಾರ್ಗಸೂಚಿ ಪ್ರಕಾರ ಚಿತ್ರಮಂದಿರಗಳಲ್ಲಿ ಶೇಕಡಾ ನೂರರಷ್ಟು ಅನುಮತಿ ನೀಡಬಾರದು ಎಂದು ಕೇಂದ್ರ ಗೃಹ ಸಚಿವಾಲಯ ಬುಧವಾರ ತಮಿಳು ನಾಡು ಸರ್ಕಾರಕ್ಕೆ ಪತ್ರದ ಮೂಲಕ ತಿಳಿಸಿದೆ.

ವೈರಲ್ ಆಯ್ತು ತಮಿಳುನಾಡು ಸರ್ಕಾರ, ನಟರಿಗೆ ವೈದ್ಯ ಬರೆದ ಪತ್ರವೈರಲ್ ಆಯ್ತು ತಮಿಳುನಾಡು ಸರ್ಕಾರ, ನಟರಿಗೆ ವೈದ್ಯ ಬರೆದ ಪತ್ರ

ಸಿನಿಮಾ, ಚಿತ್ರಮಂದಿರ ಹಾಗೂ ಮಲ್ಟಿಪ್ಲೆಕ್ಸ್ ಗಳಲ್ಲಿ ಆಸನ ಭರ್ತಿಯನ್ನು 50% ಇಂದ 100%ಕ್ಕೆ ಏರಿಸಲು ತಮಿಳುನಾಡು ಸರ್ಕಾರ ಆದೇಶ ಹೊರಡಿಸಿರುವುದು ಮಾರ್ಗಸೂಚಿಯ ಉಲ್ಲಂಘನೆ. ಯಾವುದೇ ಸಂದರ್ಭದಲ್ಲಿಯೂ ನಿಯಮ ಉಲ್ಲಂಘನೆ ಮಾಡುವಂತಿಲ್ಲ ಎಂದು ಆರೋಗ್ಯ ಸಚಿವಾಲಯ ಪತ್ರ ಬರೆದಿದೆ.

 Revoke 100% Occupancy In Theatres Said Central To Tamil Nadu Government

ಈ ಅಂಶವನ್ನು ಗಮನದಲ್ಲಿಟ್ಟುಕೊಂಡು ಕೇಂದ್ರದ ಮಾರ್ಗಸೂಚಿಗಳಿಗೆ ಅನುಗುಣವಾಗಿ ತಮಿಳುನಾಡು ಸರ್ಕಾರ ಆದೇಶವನ್ನು ಸರಿಪಡಿಸಿ ಅಗತ್ಯ ಆದೇಶ ಹೊರಡಿಸಬೇಕು ಎಂದು ಸೂಚಿಸಿದೆ.

ಚಿತ್ರಮಂದಿರಗಳಲ್ಲಿ ಶೇ.100ರಷ್ಟು ಆಸನ ಭರ್ತಿಗೆ ಅನುಮತಿ ನೀಡಿದ ತಮಿಳುನಾಡು ಸರ್ಕಾರದ ಕ್ರಮಕ್ಕೆ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿತ್ತು. ಕಾಲಿವುಡ್ ಚಿತ್ರೋದ್ಯಮದಲ್ಲಿ ಅನೇಕರು ಈ ಕ್ರಮವನ್ನು ಸ್ವಾಗತಿಸಿದರೆ, ಇನ್ನೂ ಕೆಲವು ನಿರ್ಧಾರವನ್ನು ಬೇಜವಾಬ್ದಾರಿ ಎಂದು ಖಂಡಿಸಿದ್ದರು. ಸಿನಿಮಾ ಮಂದಿರ ಮಾಲೀಕರು ಹಾಗೂ ನಟರು ಸರ್ಕಾರಕ್ಕೆ ಶೇಕಡಾ 100ರಷ್ಟು ಆಸನ ಭರ್ತಿಗೆ ಅನುಮತಿ ನೀಡಲು ಮನವಿ ಮಾಡಿದ್ದರು. ಆನಂತರ ಅವಕಾಶವನ್ನು ಕಲ್ಪಿಸಿಕೊಡಲಾಗಿತ್ತು.

English summary
The Union home ministry on Wednesday told the Tamil Nadu government that hundred per cent occupancy in movie theatres cannot be allowed yet
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X