'ಸರ್ಕಾರ್' ಚಿತ್ರದಲ್ಲಿ ಜಯಲಲಿತಾ ವಿಲನ್, ಎಐಎಡಿಎಂಕೆ ಕಿಡಿ
ಚೆನ್ನೈ, ನವೆಂಬರ್ 07: ತಮಿಳಿನ ಜನಪ್ರಿಯ ನಟ ವಿಜಯ್ ಅಭಿಯನದ ಸರ್ಕಾರ್ ಚಿತ್ರದಲ್ಲಿ ಜಯಲಲಿತಾ ಅವರನ್ನು ಕೆಟ್ಟದಾಗಿ ಬೆಂಬಿಸಲಾಗಿದೆ ಎಂದು ಎಐಎಡಿಎಂಕೆ ಕಿಡಿಕಾರಿದೆ. ಈ ಬಗ್ಗೆ ಸೂಕ್ತ ಕ್ರಮ ಜರುಗಿಸಬೇಕು ಹಾಗೂ ಆ ಪಾತ್ರ, ಸನ್ನಿವೇಶ ಬದಲಾಯಿಸಬೇಕು ಎಂದು ತಮಿಳುನಾಡಿನ ಸಚಿವ ಕಡಂಬೂರ್ ರಾಜು ಅವರು ಆಗ್ರಹಿಸಿದ್ದಾರೆ.
ತಮಿಳುನಾಡಿನ ವಾರ್ತಾ ಹಾಗೂ ಪ್ರಸಾರ ಸಚಿವ ಕೆ ರಾಜು ಅವರು ಈ ಬಗ್ಗೆ ಪ್ರತಿಕ್ರಿಯಿಸಿ, ಜೆ ಜಯಲಲಿತಾ ಅವರ ನೇತೃತ್ವದ ಸರ್ಕಾರವನ್ನು ಕೆಟ್ಟದಾಗಿ ತೋರಿಸಲಾಗಿದೆ. ಚಿತ್ರದ ವಿಲನ್ ಪಾತ್ರಧಾರಿಗೆ ಕೋಮಲವಲ್ಲಿ ಎಂದು ಹೆಸರಿಡಲಾಗಿದೆ. ಇದು ದಿವಂಗತ ಜೆ ಜಯಲಲಿತಾ ಅವರ ಮೂಲ ಹೆಸರಾಗಿದೆ.

ವಿಜಯ್ ಅವರ ಇತ್ತೀಚಿನ ಚಿತ್ರಗಳು ಸಾಮಾಜಿಕ ಕಳಕಳಿಯ ಹೆಸರಿನಲ್ಲಿ ನೇರವಾಗಿ ಕೇಂದ್ರ ಹಾಗೂ ರಾಜ್ಯ ಸರ್ಕಾರದ ವಿರುದ್ಧವೇ ಮೂಡಿ ಬಂದಿವೆ. ಈ ಚಿತ್ರಗಳ ಯಶಸ್ಸಿನ ಮೂಲಕ ವಿಜಯ್ ಅವರು ರಾಜಕೀಯ ಪ್ರವೇಶಿಸುವ ನಿರೀಕ್ಷೆಯಿದೆ.
ಕೇಂದ್ರ ಸರ್ಕಾರದ ಅಡಿಯಲ್ಲಿ ಸೆನ್ಸಾರ್ ಬೋರ್ಡ್ ಇದ್ದು, ಅವರಿಗೆ ಇಲ್ಲಿನ ರಾಜಕೀಯ ಸೂಕ್ಷ್ಯತೆಯ ಅರಿವಿಲ್ಲ. ಚಿತ್ರತಂಡವು ಆಕ್ಷೇಪಾರ್ಹ ದೃಶ್ಯಗಳಿಗೆ ಕತ್ತರಿ ಹಾಕದಿದ್ದರೆ ಸೂಕ್ತ ಕ್ರಮ ಜರುಗಿಸಬೇಕಾಗುತ್ತದೆ ಎಂದು ರಾಜು ಹೇಳಿದ್ದಾರೆ.
ನವೆಂಬರ್ 06ರಂದು ತೆರೆ ಕಂಡಿರುವ ಸರ್ಕಾರ್ ಚಿತ್ರವನ್ನು ಎಆರ್ ಮುರಗದಾಸ್ ನಿರ್ದೇಶಿಸಿದ್ದು, ಡಿಎಂಕೆ ಒಡೆತನ ಸನ್ ನೆಟ್ವರ್ಕ್ ನ ಚೇರ್ಮನ್ ಕಲಾನಿಧಿ ಮಾರನ್ ಅವರು ನಿರ್ಮಾಣ ಮಾಡಿದ್ದಾರೆ.
-
Gold Rate: ಆಭರಣ ಪ್ರಿಯರಿಗೆ ಗುಡ್ ನ್ಯೂಸ್: ಮಾರುಕಟ್ಟೆಯಲ್ಲಿಂದು ಕೊಂಚ ಇಳಿಕೆ ಕಂಡ ಚಿನ್ನ, ಬೆಳ್ಳಿ ದರ -
Karnataka Weather: ಬಿಸಿಲಿನ ಬೇಗೆಯ ನಡುವೆ ಕರುನಾಡಿಗೆ ವರುಣನ ತಂಪು: ಎಲ್ಲೆಲ್ಲಿ ಮಳೆ, ಎಲ್ಲೆಲ್ಲಿ ಬಿಸಿಲು? ಇಲ್ಲಿದೆ ವರದಿ -
IPL ಐಪಿಎಲ್ ಫ್ರೀ ಟಿಕೆಟ್ ವಿವಾದ: ವೆಂಕಟೇಶ್ ಪ್ರಸಾದ್ – ಸಿದ್ದರಾಮಯ್ಯ ಭೇಟಿ ಫೋಟೋಗೆ ತೇಜಸ್ವಿ ಸೂರ್ಯ ಕೆಂಡ -
ಬೆಂಗಳೂರಲ್ಲಿ ಸ್ವಚ್ಛತಾ ಅಭಿಯಾನಕ್ಕೆ ಚುರುಕು:12 ಬ್ಲ್ಯಾಕ್ ಸ್ಪಾಟ್ ನಿರ್ಮೂಲನೆ, 35 ಲೋಡ್ ತ್ಯಾಜ್ಯ ತೆರವು -
1ನೇ ತರಗತಿ ದಾಖಲಾತಿ: 6 ವರ್ಷ ತುಂಬಿರಬೇಕು ಎಂಬ ನಿಯಮವನ್ನು ಕೊಂಚ ಸಡಿಲಿಕೆ ಮಾಡಿದ ಸರ್ಕಾರ -
ಮಾ.30ರಂದು ನಡೆಯಬೇಕಿದ್ದ SSLC ಹಿಂದಿ ಪರೀಕ್ಷೆ ದಿಢೀರ್ ಮುಂದೂಡಿಕೆ: ಕಾರಣವೇನು? -
ಬೆಂಗಳೂರು-ಅರಸೀಕೆರೆ ನಡುವೆ ನೂತನ ಮೆಮು ರೈಲು ಸೇವೆ: ಈಡೇರಿತು ಪ್ರಯಾಣಿಕರ ಬಹುದಿನದ ಬೇಡಿಕೆ -
Viral Videlo: 2 ಗಂಟೆ ಸ್ಟ್ಯಾಚ್ಯೂ ರೀತಿ ನಿಂತ ಯುವಕ ವಿಡಿಯೋ ವೈರಲ್, ಭಾರತಕ್ಕೂ ಬಂತಾ ಅಮೆರಿಕದ ಜಾಂಬಿ ಡ್ರಗ್ಸ್ -
ಉದ್ಯೋಗ ಸಂದರ್ಶನ ಮಾಡಲು ಹೋದ CEOಗೆ ಬೆವರಿಳಿಸಿದ ಅಭ್ಯರ್ಥಿ, Viral ಆಯ್ತು ವಿಚಿತ್ರ ಕಥೆ -
Summer Camp: ನಟನ ಮೈಸೂರು ಸಂಸ್ಥೆಯಿಂದ ಮಕ್ಕಳಿಗೆ ಬೇಸಿಗೆ ಶಿಬಿರ 'ರಜಾಮಜಾ' ಆಯೋಜನೆ -
115 ರೂಪಾಯಿಯ ಪೊಂಗಲ್ಗೆ 273 ರೂ. ಬಿಲ್: ಸ್ವಿಗ್ಗಿ ವಿರುದ್ಧ ಸುಮಲತಾ ಅಂಬರೀಷ್ ಆಕ್ರೋಶ -
Sri Rama Navami 2026: ಶ್ರೀ ರಾಮನವಮಿ; ಧರ್ಮದ ಜಯದ ದಿವ್ಯ ಸಂದೇಶ












Click it and Unblock the Notifications