ಚೆನ್ನೈ ವಿಮಾನ ನಿಲ್ದಾಣದಲ್ಲಿ 34 ಲಕ್ಷ ರೂ. ಮೌಲ್ಯದ ಚಿನ್ನ ವಶಕ್ಕೆ
ಚೆನ್ನೈ, ಆಗಸ್ಟ್ 05: ದುಬೈನಿಂದ ಅಕ್ರಮವಾಗಿ ತಂದಿದ್ದ ಚಿನ್ನವನ್ನು ಚೆನ್ನೈ ವಿಮಾನ ನಿಲ್ದಾಣದಲ್ಲಿ ವಶಕ್ಕೆ ಪಡೆಯಲಾಗಿದೆ. ವಶಪಡಿಸಿಕೊಂಡ ಚಿನ್ನದ ಮೌಲ್ಯ 34.5 ಲಕ್ಷ ರೂ. ಎಂದು ಅಂದಾಜಿಸಲಾಗಿದೆ.
ಬುಧವಾರ ದುಬೈನಿಂದ ಚೆನ್ನೈಗೆ ಬಂದ ವಿಮಾನದಲ್ಲಿದ್ದ ಇಬ್ಬರು ಪ್ರಯಾಣಿಕರು ಚಿನ್ನವನ್ನು ಕಳ್ಳಸಾಗಣೆ ಮಾಡುತ್ತಿದ್ದರು. ಪ್ರಯಾಣಿಕರಿಂದ ಒಟ್ಟು 731 ಗ್ರಾಂ ಚಿನ್ನವನ್ನು ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.
ಜೀನ್ಸ್ ಪ್ಯಾಂಟ್ ತೊಟ್ಟಿದ್ದ ಇಬ್ಬರು ಪ್ರಯಾಣಿಕರು ಬೆಲ್ಟ್‌ನಲ್ಲಿ ಚಿನ್ನದ ಗಟ್ಟಿಯನ್ನು ಇಟ್ಟುಕೊಂಡು ಬಂದಿದ್ದರು. ತಪಾಸಣೆ ವೇಳೆ ಚಿನ್ನಪತ್ತೆಯಾಗಿದೆ.

ಇಬ್ಬರು ಪ್ರಯಾಣಿಕರನ್ನು ವಶಕ್ಕೆ ಪಡೆದುಕೊಂಡ ಅಧಿಕಾರಿಗಳು ವಿಚಾರಣೆ ನಡೆಸಿದ್ದಾರೆ. ಕಸ್ಟಮ್ಸ್ ಅಧಿಕಾರಿಗಳು ಈ ಕುರಿತು ಪ್ರಕರಣ ದಾಖಲು ಮಾಡಿಕೊಂಡಿದ್ದು, ವಿಚಾರಣೆ ಮುಂದುವರೆಸಿದ್ದಾರೆ.
ಮೂವರು ಇಡಿ ವಶಕ್ಕೆ : ಕೇರಳದಲ್ಲಿ ಭಾರಿ ಚರ್ಚೆಗೆ ಕಾರಣವಾಗಿರುವ ಅಕ್ರಮ ಚಿನ್ನ ಸಾಗಣೆ ಪ್ರಕರಣದ ತನಿಖೆಗೆ ಇಡಿ ಕೈ ಜೋಡಿಸಿದೆ. ಪ್ರಕರಣ ಪ್ರಮುಖ ಆರೋಪಿ ಸ್ವಪ್ನಾ ಸುರೇಶ್ ಸೇರಿದಂತೆ ಮೂವರು ಆರೋಪಿಗಳನ್ನು ಮೂರು ದಿನಗಳ ಕಾಲ ವಶಕ್ಕೆ ಪಡೆದುಕೊಂಡಿದೆ.












Click it and Unblock the Notifications