ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಶಶಿಕಲಾಗೆ ಮತ್ತೆ ಆಘಾತ, 2000 ಕೋಟಿ ರು ಮೌಲ್ಯದ ಆಸ್ತಿ ಜಪ್ತಿ

|
Google Oneindia Kannada News

ಚೆನ್ನೈ, ಅ. 8: ತಮಿಳುನಾಡಿನ ಮಾಜಿ ಮುಖ್ಯಮಂತ್ರಿ ದಿವಂಗತ ಜೆ ಜಯಲಲಿತಾ ಅವರ ಆಪ್ತೆ ವಿ ಶಶಿಕಲಾ ನಟರಾಜನ್ ಅವರಿಗೆ ಸೇರಿದ ಆಸ್ತಿ ಮುಟ್ಟುಗೋಲು ಹಾಕಿಕೊಳ್ಳುವ ಪ್ರಕ್ರಿಯೆಯನ್ನು ಆದಾಯ ತೆರಿಗೆ ಇಲಾಖೆ ಮುಂದುವರೆಸಿದೆ. ಸುಮಾರು 2000 ಕೋಟಿ ರು ಮೌಲ್ಯದ ಅಸ್ತಿ ಜಪ್ತಿ ಮಾಡಲಾಗಿದೆ.

ಸುಮಾರು 300 ಕೋಟಿ ರು ಮೌಲ್ಯದ ಸಿರುಥಾವೂರ್ ಹಾಗೂ ಕೊಡನಾಡು ಎಸ್ಟೇಟ್ ಗಳನ್ನು ವಶಕ್ಕೆ ಪಡೆಯಲಾಗಿದೆ. ಒಟ್ಟಾರೆ ಜಪ್ತಿಯಾದ ಆಸ್ತಿ ಮೌಲ್ಯ 2000 ಕೋಟಿ ರು ಗೂ ಅಧಿಕ ಎಂದು ಆದಾಯ ತೆರಿಗೆ ಇಲಾಖೆ ಪ್ರಕಟಣೆ ಹೊರಡಿಸಿದೆ.

ಜಯಾ ಅವರ ಕೊಡ್ನಾಡ್ ಎಸ್ಟೇಟ್ ಸೇರಿ ಎಲ್ಲೆಲ್ಲಿ ಐಟಿ ದಾಳಿ?ಜಯಾ ಅವರ ಕೊಡ್ನಾಡ್ ಎಸ್ಟೇಟ್ ಸೇರಿ ಎಲ್ಲೆಲ್ಲಿ ಐಟಿ ದಾಳಿ?

2017ರಲ್ಲಿ ಬೇನಾಮಿ ಆಸ್ತಿ ಗಳಿಕೆ, ಅಕ್ರಮ ಹೂಡಿಕೆ, ಶೆಲ್ ಕಂಪನಿಗಳ ಮೇಲೆ ದೂರು ದಾಖಲಾದ ಹಿನ್ನಲೆಯಲ್ಲಿ ದಾಳಿ ನಡೆಸಲಾಗಿತ್ತು. ಜಯಾಟಿವಿ ಕಚೇರಿ ಸೇರಿದಂತೆ 187 ಸ್ಥಳಗಳಲ್ಲಿ ಸುಮಾರು 700 ಆದಾಯ ತೆರಿಗೆ ಅಧಿಕಾರಿಗಳು ವಿವಿಧೆಡೆ ದಾಳಿ ಮಾಡಿದ್ದರು.

Sasikalas assets worth Rs 2000 crores freezed

ಅಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲು ಸೇರಿರುವ ಶಶಿಕಲಾ, 10 ಕೊಟಿ ರೂ ದಂಡವನ್ನು ಆಕೆ ನ್ಯಾಯಾಲಯಕ್ಕೆ ಕಟ್ಟಬೇಕಿದೆ. ಒಂದೊಮ್ಮೆ ದಂಡ ಕಟ್ಟಲು ಸಾಧ್ಯವಾಗದಿದ್ದಲ್ಲಿ ಒಂದು ವರ್ಷಗಳ ಹೆಚ್ಚಿನ ಜೈಲು ಶಿಕ್ಷೆ ಅನುಭವಿಸಬಹುದಾಗಿದೆ.

ದಂಡ ಕಟ್ಟಿದರೆ 2021ರ ಜನವರಿ 25 ಇಲ್ಲವೇ 2022ರ ಫೆಬ್ರವರಿ 15ಕ್ಕೆ ಬಿಡುಗಡೆಯಾಗಲಿದ್ದಾರೆ ಎಂಬ ಸುದ್ದಿ ಹಬ್ಬಿತ್ತು. ಆದರೆ, ಜನವರಿ 27, 2021ರಂದು ಬಿಡುಗಡೆ ದಿನಾಂಕ ನಿಗದಿಯಾಗಿದೆ ಎಂದು ಅಧಿಕೃತವಾಗಿ ಮಾಹಿತಿ ಬಂದಿದೆ.

ಚಿತ್ರಗಳು: ಶಶಿಕಲಾ ನಟರಾಜನ್ ಸಾಮ್ರಾಜ್ಯದ ಮೇಲೆ ಐಟಿ ದಾಳಿ

ಶಶಿಕಲಾ ಅವರು 1997 ಹಾಗೂ 2014ರಲ್ಲಿ 35 ದಿನಗಳು, 2017ರಲ್ಲಿ 17 ದಿನಗಳ ಪೆರೋಲ್ ಪಡೆದುಕೊಂಡಿದ್ದರು. ಫೆಬ್ರವರಿ 15, 2017ರಲ್ಲಿ ಬಂದ ಕೋರ್ಟ್ ಆದೇಶದಂತೆ ಶಶಿಕಲಾ ಹಾಗೂ ಇತರರು ಪರಪ್ಪನ ಅಗ್ರಹಾರದಲ್ಲಿರುವ ಕೇಂದ್ರ ಕಾರಾಗೃಹ ಸೇರಿದ್ದರು. ಶಶಿಕಲಾ ಅವರು ತಮ್ಮ ಪತಿ ಎಂ.ನಟರಾಜನ್ ನಿಧನರಾದಾಗ ಪೆರೋಲ್ ಮೇಲೆ 15 ದಿನಗಳ ಕಾಲ ಜೈಲಿನಿಂದ ಹೊರಗಿದ್ದರು. ತಂಜಾವೂರಿನಲ್ಲಿ ಪತಿಯ ಅಂತ್ಯಸಂಸ್ಕಾರ ವಿಧಿ ಮುಗಿಸಿಕೊಂಡು ಜೈಲಿಗೆ ಮರಳಿದ್ದರು.

English summary
Income Tax Department on Wednesday froze assets worth Rs 2000 crores owned by late Tamil Nadu Chief Minister J Jayalalithaa's aide V K Sasikala, serving a four year-term in a corruption case.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X