ಚಿತ್ರಮಂದಿರದಲ್ಲಿ ರಾಷ್ಟ್ರಗೀತೆಗೆ ಅಗೌರವ: 7 ಮಂದಿ ವಿರುದ್ಧ ಪ್ರಕರಣ

Posted By:
Subscribe to Oneindia Kannada

ಚೆನ್ನೈ, ಡಿಸೆಂಬರ್ 12: ಸಿನಿಮಾ ಪ್ರದರ್ಶನ ವೇಳೆ ರಾಷ್ತ್ರಗೀತೆಗೆ ಅಗೌರವ ತೋರಿದ ಆರೋಪದಲ್ಲಿ ಚೆನ್ನೈ ಪೊಲೀಸರು ಭಾನುವಾರ ಮಹಿಳೆ ಸೇರಿದಂತೆ ಏಳು ಮಂದಿ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.

ಎಲ್ಲ ಚಿತ್ರಮಂದಿರಗಳಲ್ಲೂ ಸಿನಿಮಾ ಆರಂಭಕ್ಕೂ ಮುನ್ನ ರಾಷ್ಟ್ರಗೀತೆಯನ್ನು ಹಾಕಬೇಕು ಹಾಗೂ ಎದ್ದು ನಿಂತು ಗೌರವ ಸಲ್ಲಿಸಬೇಕು ಎಂದು ಸುಪ್ರೀಂ ಕೋರ್ಟ್ ಕಡ್ಡಾಯಗೊಳಿಸಿ, ಅದೇಶ ನೀಡಿದ ನಂತರ ದಾಖಲಾಗುತ್ತಿರುವ ಮೊದಲ ಪ್ರಕರಣ ಇದು. ಅಶೋಕ್ ನಗರದ ಕಾಶಿ ಚಿತ್ರಮಂದಿರದಲ್ಲಿ ರಾಷ್ಟ್ರಗೀತೆ ಬರುತ್ತಿದ್ದ ವೇಳೆ ಏಳು ಮಂದಿ ಸೆಲ್ಫಿ ತೆಗೆದುಕೊಳ್ಳುತ್ತಿದ್ದರು ಎಂದು ಆರೋಪಿಸಲಾಗಿದೆ.

ಇದನ್ನು ನೋಡಿದ ಸಿನಿಮಾ ನೋಡಲು ಬಂದಿದ್ದ ಮತ್ತೊಂದು ಗುಂಪು ಆಕ್ಷೇಪ ವ್ಯಕ್ತಪಡಿಸಿದೆ. ರಾಷ್ಟ್ರೀಯ ಗೌರವ ಕಾಯ್ದೆ 1971ರ ಅಡಿಯಲ್ಲಿ ಆರೋಪಿಗಳ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ನೆಸಪಾಕ್ಕಂನ ನಿವಾಸಿ ವಿಜಯಕುಮಾರ್ ಎಂಬುವರು ನೀಡಿದ ದೂರಿನನ್ವಯ ಪ್ರಕರಣ ದಾಖಲಿಸಲಾಗಿದೆ.[ಚಿತ್ರಮಂದಿರಗಳಲ್ಲಿ ರಾಷ್ಟ್ರಗೀತೆ, ರಾಷ್ಟ್ರಧ್ವಜ ಪ್ರದರ್ಶನ ಕಡ್ಡಾಯ]

Flag

ವಿರುಗಂಬಾಕ್ಕಂನ ಮಹಿಳೆ ಎಂ.ಶ್ರೀಲಾ ಎಂಬುವರ ವಿರುದ್ಧ ಕೂಡ ದೂರು ದಾಖಲಾಗಿದೆ. ಪ್ರತಿಯಾಗಿ ವಿಜಯಕುಮಾರ್ ವಿರುದ್ಧ ಶ್ರೀಲಾ ದೂರು ದಾಖಲಿಸಿದ್ದಾರೆ. ತನಗೂ ಹಾಗೂ ಸ್ನೇಹಿತರಿಗೂ ಬೆದರಿಕೆ ಹಾಕಿದರು, ಅವಾಚ್ಯ ಶಬ್ದಗಳಿಂದ ನಿಂದಿಸಿದರು ಎಂದು ದೂರು ನೀಡಿದ್ದಾರೆ.[1975ರಲ್ಲಿ ಚಿತ್ರಮಂದಿರಗಳಲ್ಲಿ ರಾಷ್ಟ್ರಗೀತೆ ಮೊಳಗುವುದು ನಿಂತಾಗ]

ನವೆಂಬರ್ 30ರಂದು ಸುಪ್ರೀಂ ಕೋರ್ಟ್ ನೀಡಿದ ಆದೇಶದ ಪ್ರಕಾರ ಎಲ್ಲ ಚಿತ್ರಮಂದಿರಗಳಲ್ಲೂ ಸಿನಿಮಾ ಆರಂಭಕ್ಕೂ ಮುನ್ನ ಕಡ್ಡಾಯವಾಗಿ ರಾಷ್ಟ್ರಗೀತೆ ಹಾಕಬೇಕು ಹಾಗೂ ಅದಕ್ಕೆ ಎದ್ದು ನಿಂತು ಗೌರವ ಸಲ್ಲಿಸಬೇಕು. ಈ ನಿಯಮಕ್ಕೆ ಅಂಗವೈಕಲ್ಯ ಇರುವವರಿಗೆ ವಿನಾಯಿತಿ ನೀಡಲಾಗಿತ್ತು.

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

English summary
The Chennai police on Sunday registered a case against seven persons, including a woman, for disrespecting the national anthem at a cinema in the city.
Please Wait while comments are loading...