• search
  • Live TV
ಚೆನ್ನೈ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ಶಿವಶಂಕರ್ ಬಾಬಾ ವಿರುದ್ಧ ಲೈಂಗಿಕ ಕಿರುಕುಳ ಆರೋಪ

|
Google Oneindia Kannada News

ಚೆನ್ನೈ, ಜೂನ್ 13: ಸ್ವಯಂಘೋಷಿತ ದೇವಮಾನವ ಶಿವಶಂಕರ್ ಬಾಬಾ ವಿರುದ್ಧ ಲೈಂಗಿಕ ಕಿರುಕುಳ ಆರೋಪ ಹೊರೆಸಲಾಗಿದೆ. ಶಾಲಾ ಮಕ್ಕಳಿಗೆ ಲೈಂಗಿಕವಾಗಿ ಹಿಂಸೆ ನೀಡಿದ ಆರೋಪದ ಮೇಲೆ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ.

ಶಾಲೆಯ ಕೆಲವು ವಿದ್ಯಾರ್ಥಿಗಳು ನೀಡಿದ ದೂರಿನ ಮೇರೆಗೆ ತನಿಖೆ ನಡೆಸಿ ಕ್ರಮ ಜರುಗಿಸಲಾಗಿದೆ. ಚೆನ್ನೈನ ಪ್ರತಿಷ್ಠಿತ ಸುಶೀಲ್ ಹರಿ ಇಂಟರ್ ನ್ಯಾಷನಲ್ ವಸತಿ ಶಾಲೆಯ ಸ್ಥಾಪಕರ ವಿರುದ್ಧ ಲೈಂಗಿಕ ಕಿರುಕುಳ ನೀಡಿದ ದೂರು ದಾಖಲಾಗಿದೆ ಎಂದು ಪೊಲೀಸರು ಹೇಳಿದರು.

ಪ್ರಕರಣ ವಿಚಾರಣೆಗಾಗಿ ಮಕ್ಕಳ ಹಕ್ಕು ಆಯೋಗದ ಮುಂದೆ ಹಾಜರಾಗಬೇಕಿತ್ತು. ಆದರೆ, ಹೃದಯಾಘಾತವಾಗಿದೆ ಎಂದು ವೈದ್ಯರಿಂದ ವರದಿ ಪಡೆದು ವಿಚಾರಣೆಗೆ ಹಾಜರಾಗಿಲ್ಲ ಎಂದು ತಿಳಿದು ಬಂದಿದೆ.

ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ(POCSO)ಕಾಯ್ದೆ, ಭಾರತೀಯ ದಂಡ ಸಂಹಿತೆ(ಐಪಿಎಸ್) ವಿವಿಧ ಕಾಯ್ದೆಯಡಿಯಲ್ಲಿ ಪ್ರಕರಣ ದಾಖಲಿಸಿಕೊಂಡು ಎಫ್ಐಆರ್ ಹಾಕಲಾಗಿದೆ ಎಂದು ಮಹಾಬಲಿಪುರಂ ಮಹಿಳಾ ಪೊಲೀಸ್ ಠಾಣಾಧಿಕಾರಿ ತಿಳಿಸಿದರು.

ಪೋಕ್ಸೋ ಕಾಯ್ದೆಯಡಿ ಎರಡು ಪ್ರಕರಣ ದಾಖಲಾಗಿದ್ದು, ಶಿವಶಂಕರ್ ಬಾಬಾಗಾಗಿ ಹುಡುಕಾಟ ಜಾರಿಯಲ್ಲಿದೆ. ಉತ್ತರ ಭಾರತದಲ್ಲಿ ನೆಲೆ ಕಂಡುಕೊಂಡಿರುವ ಶಂಕೆ ವ್ಯಕ್ತವಾಗಿದೆ.

ಇತ್ತೀಚೆಗೆ ಪ್ರತಿಷ್ಠಿತ ಶಾಲೆಯೊಂದರ ಶಿಕ್ಷಕ ರಾಜಗೋಪಾಲನ್ (59) ಅವರು ಲೈಂಗಿಕ ಕಿರುಕುಳ ಆರೋಪದ ಮೇಲೆ ಬಂಧನವಾಗಿದ್ದನ್ನು ಇಲ್ಲಿ ಉಲ್ಲೇಖಿಸಬಹುದು.

English summary
Sexual abuse case: Self-styled godman Siva Shankar Baba booked under Pocso Act.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X