ಸಿದ್ದಗಂಗಾ ಶ್ರೀಗಳು ಇಂದು ಡಿಸ್ಚಾರ್ಜ್: ಮಧ್ಯಾಹ್ನ ಮಠಕ್ಕೆ ಆಗಮನ
ಚೆನ್ನೈ, ಡಿಸೆಂಬರ್ 19: ಸಿದ್ದಗಂಗಾ ಶ್ರೀಗಳ ಆರೋಗ್ಯದಲ್ಲಿ ಚೇತರಿಕೆ ಕಾಣಿಸಿಕೊಂಡಿದ್ದು ಇಂದು ಮಧ್ಯಾಹ್ನ ಡಿಸ್ಚಾರ್ಜ್ ಆಗಲಿದ್ದು ಏರ್ ಆಂಬುಲೆನ್ಸ್ ಮೂಲಕ ಮಠಕ್ಕೆ ಆಗಮಿಸುವ ಸಾಧ್ಯತೆ ಇದೆ.
ಪಿತ್ತಕೋಶದ ಸೋಂಕು ಉಂಟಾಗಿದ್ದ ಕಾರಣ ಚೆನ್ನೈನ ರೇಲಾ ಆಸ್ಪತ್ರೆಯಲ್ಲಿ ಶ್ರೀ ಶಿವಕುಮಾರ ಸ್ವಾಮೀಜಿಯವರು ಚಿಕಿತ್ಸೆ ಪಡೆಯುತ್ತಿದ್ದರು. ಆರೋಗ್ಯದಲ್ಲಿ ಚೇತರಿಕೆ ಕಾಣಿಸಿಕೊಂಡಿದ್ದು, ಬುಧವಾರ ಮಧ್ಯಾಹ್ನ 12 ಗಂಟೆಯ ಸುಮಾರಿಗೆ ಚೆನ್ನೈನಿಂದ ಏರ್ ಆಂಬ್ಯುಲೆನ್ಸ್ ಮೂಲಕ ತುಮಕೂರಿಗೆ ತೆರಳಲಿದ್ದಾರೆ ಎನ್ನವು ಮಾಹಿತಿ ಲಭ್ಯವಾಗಿದೆ.
ಸುತ್ತೂರು ಶ್ರೀಗಳು ಆಸ್ಪತ್ರೆಗೆ ಆಗಮಿಸಿದ್ದು, ಸಿದ್ದಗಂಗಾ ಮಠದ ಸ್ವಾಮೀಜಿಗಳು ಆಸ್ಪತ್ರೆಯಿಂದ ಬಿಡುಗಡೆ ಹೊಂದುತ್ತಿದ್ದಾರೆ ಎಂದು ಕಿರಿಯ ಶ್ರೀಗಳು ಮಾಹಿತಿ ನೀಡಿದ್ದಾರೆ. ಕಳೆದ 12 ದಿನಗಳಿಂದ ಚೆನ್ನೈನ ರೇಲಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು.

ಮಂಗಳವಾರ ಶ್ರೀಗಳನ್ನ ವಾರ್ಡ್ ಗೆ ಶಿಫ್ಟ್ ಮಾಡಲಾಗಿದ್ದು, ಎಂದಿನಂತೆ ಇಷ್ಟಲಿಂಗ ಪೂಜೆ ನೆರವೇರಿಸಿದ್ದರು. ದ್ರವರೂಪದ ಆಹಾರವನ್ನ ಸೇವಿಸಿದ್ದರು. ಏರ್ ಅಂಬುಲೆನ್ಸ್ ಮೂಲಕ ಹೆಚ್‍ಎಎಲ್‍ಗೆ ಬಂದಿಳಿಯಲಿದ್ದಾರೆ. ಹೆಚ್‍ಎಎಲ್‍ನಿಂದ ನೇರವಾಗಿ ಸಿದ್ದಗಂಗಾ ಮಠಕ್ಕೆ ತೆರಳಲಿದ್ದು, ಅಲ್ಲಿ ಚಿಕಿತ್ಸೆ ಮುಂದುವರಿಯಲಿದೆ ಎನ್ನುವ ಮಾಹಿತಿಗಳು ಲಭ್ಯವಾಗಿದೆ.












Click it and Unblock the Notifications