ಖ್ಯಾತ ಗಾಯಕ ಎಸ್‌ಪಿ ಬಾಲಸುಬ್ರಹ್ಮಣ್ಯಂ ಆರೋಗ್ಯ ಸ್ಥಿತಿ ಗಂಭೀರ

ಚೆನ್ನೈ, ಆಗಸ್ಟ್ 14: ಖ್ಯಾತ ಗಾಯಕ ಎಸ್‌ಪಿ ಬಾಲಸುಬ್ರಹ್ಮಣ್ಯಂ ಅವರಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, ಆರೋಗ್ಯ ಸ್ಥಿತಿ ಗಂಭೀರವಾಗಿದೆ.

ಆಗಸ್ಟ್ 5ರಂದು ಶೀತ ಮತ್ತು ಜ್ವರ ಕಾಣಿಸಿಕೊಂಡು ಉಸಿರಾಟ ತೊಂದರೆಯಾಗಿದ್ದರಿಂದ ಎಸ್‌ಪಿಬಿ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ವೈದ್ಯಕೀಯ ಪರೀಕ್ಷೆಯಿಂದ ಅವರಿಗೆ ಕೊವಿಡ್ 19 ಲಕ್ಷಣಗಳಿರುವುದು ದೃಢಪಟ್ಟಿತ್ತು.

ಮನೆಯಲ್ಲಿಯೇ ಕ್ವಾರಂಟೈನ್‌ನಲ್ಲಿ ಇರುವಂತೆ ವೈದ್ಯರು ಸೂಚಿಸಿದ್ದರು. ಆದರೆ, ಕುಟುಂಬದ ಸದಸ್ಯರ ಸಲಹೆ ಮೇರೆಗೆ ಅವರು ಆಸ್ಪತ್ರೆಗೆ ದದಾಖಲಾಗಿದ್ದರು. ಈ ಸಂಬಂಧ ಅವರು ವಿಡಿಯೋವೊಂದನ್ನು ಬಿಡುಗಡೆ ಮಾಡಿದ್ದರು.

Singer SP Balasubrahmanyam Diagnised With Covid 19 Is Critical, On Life Support

ಕಳೆದ ಎರಡು ಮೂರು ದಿನಗಳಿಂದ ನನ್ನ ಆರೋಗ್ಯ ಸರಿ ಇರಲಿಲ್ಲ, ಉಸರಾಟದ ತೊಂದರೆ ಕಾಣಿಸಿಕೊಂಡಿತ್ತು. ಇದರ ಬಗ್ಗೆ ನಾನು ನಿರ್ಲಕ್ಷ್ಯವಹಿಸದೆ ವೈದ್ಯರ ಬಳಿಗೆ ಬಂದೆ ಎಂದು ತಿಳಿಸಿದ್ದರು.

ಇದೀಗ ಅವರ ಆರೋಗ್ಯ ಕ್ಷೀಣಿಸುತ್ತಿದ್ದು, ಅವರಿಗೆ ಕೃತಕ ಉಸಿರಾಟ ವ್ಯವಸ್ಥೆ ಕಲ್ಪಿಸಲಾಗಿದೆ. ಅವರನ್ನು ಐಸಿಯುನಲ್ಲಿರಿಸಲಾಗಿದೆ. ಬಾಲಸುಬ್ರಹ್ಮಣ್ಯಂ ಅವರು 40 ಸಾವಿರಕ್ಕೂ ಹೆಚ್ಚು ಗೀತೆಗಳನ್ನು ಹಾಡಿದ್ದಾರೆ.

ಖ್ಯಾತ ಹಿನ್ನೆಲೆ ಗಾಯಕ ಎಸ್.ಪಿ.ಬಾಲಸುಬ್ರಹ್ಮಣ್ಯಂ(74ವರ್ಷ) ಅವರಿಗೆ ಕೋವಿಡ್ 19 ಸೋಂಕು ದೃಢಪಟ್ಟಿರುವ ಬಗ್ಗೆ ಸ್ವತಃ ಎಸ್ ಪಿಬಿ ಅವರು ತಮ್ಮ ಫೇಸ್ ಬುಕ್ ನಲ್ಲಿ ವಿಡಿಯೋವನ್ನು ಶೇರ್ ಮಾಡುವ ಮೂಲಕ ಆಗಸ್ಟ್ 5ರಂದು ಖಚಿತಪಡಿಸಿದ್ದರು.

16ಕ್ಕೂ ಅಧಿಕ ಭಾಷೆಯಲ್ಲಿ 40,000ಕ್ಕೂ ಹೆಚ್ಚು ಹಾಡುಗಳನ್ನು ಹಾಡಿರುವ ಹಿರಿಯ ಗಾಯಕ ಎಸ್ ಪಿ ಬಾಲಸುಬ್ರಹ್ಮಣ್ಯಂ ಹಂಚಿಕೊಂಡಿರುವ ವಿಡಿಯೋ ಸಂದೇಶದಲ್ಲಿ, ತನಗೆ ಕೋವಿಡ್ 19 ಸೋಂಕಿನ ಸಣ್ಣ ಪ್ರಮಾಣದ ಲಕ್ಷಣ ಕಾಣಿಸಿಕೊಂಡಿರುವುದಾಗಿ ತಿಳಿಸಿದ್ದರು.

ಈ ಹಿನ್ನೆಲೆಯಲ್ಲಿ ತಾನು ಸ್ವಯಂ ಆಗಿ ಆಸ್ಪತ್ರೆಗೆ ದಾಖಲಾಗಿದ್ದು, ಚಿಕಿತ್ಸೆಯೊಂದಿಗೆ ವಿಶ್ರಾಂತಿ ಪಡೆಯುತ್ತಿದ್ದೇನೆ. ಯಾಕೆಂದರೆ ಕುಟುಂಬದ ಇತರ ಸದಸ್ಯರಿಗೆ ಸಮಸ್ಯೆಯಾಗಬಾರದು ಎಂಬ ಮುನ್ನೆಚ್ಚರಿಕೆಯಿಂದ ಈ ನಿರ್ಧಾರ ತೆಗೆದುಕೊಂಡಿರುವುದಾಗಿ ಹೇಳಿದ್ದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+