ಖ್ಯಾತ ಗಾಯಕ ಎಸ್‌ಪಿ ಬಾಲಸುಬ್ರಹ್ಮಣ್ಯಂ ಅವರ ಆರೋಗ್ಯ ಸ್ಥಿತಿ ಚಿಂತಾಜನಕ

ಚೆನ್ನೈ, ಸೆಪ್ಟೆಂಬರ್ 24: ಖ್ಯಾತ ಗಾಯಕ ಎಸ್‌ಪಿ ಬಾಲಸುಬ್ರಹ್ಮಣ್ಯಂ ಅವರ ಸ್ಥಿತಿ ಚಿಂತಾಜನಕವಾಗಿದೆ ಎನ್ನುವ ಮಾಹಿತಿ ಲಭ್ಯವಾಗಿದೆ.

ಚೆನ್ನೈನ ಎಂಜಿಎಂ ಆಸ್ಪತ್ರೆ ಇಂದು ಬಿಡುಗಡೆ ಮಾಡಿರುವ ಎಸ್‌ಪಿಬಿ ಅವರ ಹೆಲ್ತ್ ಬುಲೆಟಿನ್‌ಲ್ಲಿ ಇದನ್ನು ಉಲ್ಲೇಖಿಸಲಾಗಿದೆ. ಆಗಸ್ಟ್ 5 ರಿಂದ ಅವರು ಅಲ್ಲಿಯೇ ಚಿಕಿತ್ಸೆ ಪಡೆಯುತ್ತಿದ್ದು, ಅವರ ಆರೋಗ್ಯ ತೀರಾ ಹದಗೆಟ್ಟಿದೆ ಎಂದು ಆಸ್ಪತ್ರೆ ತಿಳಿಸಿದೆ.

ಸೆಪ್ಟೆಂಬರ್ 22 ರಂದು ಅವರ ಮಗ ಚರಣ್ ಅವರ ಆರೋಗ್ಯದ ಕುರಿತು ಮಾಹಿತಿ ನೀಡಿದ್ದು, ಅವರು ಗುಣಮುಖರಾಗುತ್ತಿದ್ದಾರೆ, ಆಸ್ಪತ್ರೆಯಿಂದ ಶೀಘ್ರ ಬಿಡುಗಡೆಯಾಗುತ್ತಾರೆ ಎಂದು ಇನ್‌ಸ್ಟಾಗ್ರಾಂನಲ್ಲಿ ವಿಡಿಯೋ ಅಪ್‌ಲೋಡ್ ಮಾಡಿದ್ದರು.

Singer SP Balasubrahmanyam Health Extremely Critical With Maximal Life Support

ಸೆಪ್ಟೆಂಬರ್ 7 ರಂದು ಎಸ್‌ಪಿಬಿ ಅವರಿಗೆ ಕೊರೊನಾ ನೆಗೆಟಿವ್ ಬಂದಿರುವುದಾಗಿ ಚರಣ್ ಹೇಳಿದ್ದರು. ಆಸ್ಪತ್ರೆಯಲ್ಲಿಯೇ ಅವರ ಮದುವೆ ವಾರ್ಷಿಕೋತ್ಸವವನ್ನು ಆಚರಿಸಲಾಗಿತ್ತು.

ಇದಕ್ಕೂ ಮುನ್ನ ಅವರು ಹಾಡುಗಳನ್ನು ಕೇಳುತ್ತಿದ್ದಾರೆ, ಅವರು ಆರೋಗ್ಯದಲ್ಲಿ ಚೇತರಿಕೆ ಕಾಣುತ್ತಿದೆ, ಸಾಕಷ್ಟು ಮಂದಿ ಹಾಡುಗಾರರು ಕೂಡ ಎಸ್‌ಪಿಬಿ ಅವರ ಎದುರಿಗೆ ಅವರ ನೆಚ್ಚಿನ ಹಾಡುಗಳನ್ನು ಪ್ರಸ್ತುತ ಪಡಿಸಲು ಅವಕಾಶ ಮಾಡಿಕೊಡಿ ಎಂದು ಮನವಿ ಮಾಡುತ್ತಿದ್ದಾರೆ.

ಆಗಸ್ಟ್ 5 ರಂದು ಎಸ್‌ಪಿಬಿ ಅವರು ಆಸ್ಪತ್ರೆಗೆ ದಾಖಲಾಗಿದ್ದರು, ಅವರಿಗೆ ಕೊರೊನಾ ಸೋಂಕು ತಗುಲಿರುವ ಬಗ್ಗೆ ಫೇಸ್‌ಬುಕ್‌ನಲ್ಲಿ ಬರೆದುಕೊಂಡಿದ್ದರು. ಅಕ್ಟೋಬರ್ ಅಂತ್ಯದಲ್ಲಿ ಅವರು ಕೃತಕವಾಗಿ ಉಸಿರಾಡುತ್ತಿದ್ದರು. ಅವರು ಬೇಗ ಚೇತರಿಸಿಕೊಳ್ಳಲಿ ಎಂದು ಅವರ ಕುಟುಂಬ, ಸ್ನೇಹಿತರು, ಅಭಿಮಾನಿಗಳ ಆಶಯವಾಗಿದೆ.

Recommended Video

      Dasara ಉದ್ಘಾಟನೆಯಲ್ಲಿ ಈ ಬಾರಿ 200 ಮಂದಿಗೆ ಮಾತ್ರ ಅವಕಾಶ | Oneindia Kannada

      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+