• search
  • Live TV
ಚೆನ್ನೈ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ಶಿವಕಾಶಿಯ ಪಟಾಕಿ ಕಾರ್ಖಾನೆಯಲ್ಲಿ ಅಗ್ನಿ ಅವಘಡ,6 ಮಂದಿ ದುರ್ಮರಣ

|

ಚೆನ್ನೈ,ಫೆಬ್ರವರಿ 25: ಪಟಾಕಿ ಕಾರ್ಖಾನೆಯಲ್ಲಿ ಅಗ್ನಿ ಅವಘಡ ಸಂಭವಿಸಿದ್ದು, 6 ಮಂದಿ ಮೃತಪಟ್ಟಿರುವ ಘಟನೆ ತಮಿಳುನಾಡಿನ ಶಿವಕಾಶಿಯಲ್ಲಿ ಗುರುವಾರ ನಡೆದಿದೆ.

ಕಲೈಯರ್ಕುರಿಚಿ ಪಟಾಕಿ ಕಾರ್ಖಾನೆಯಲ್ಲಿ ಘಟನೆ ನಡೆದಿದ್ದು, ಕಾರ್ಮಿಕರು ತೀವ್ರವಾಗಿ ಗಾಯಗೊಂಡಿದ್ದಾರೆ.

ತಕ್ಷಣವೇ ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿ ಬೆಂಕಿ ನಂದಿಸಿದ್ದಾರೆ, ಅಷ್ಟರೊಳಗೆ ಆರು ಮಂದಿ ಮೃತಪಟ್ಟಿದ್ದರು. ಒಂದೆಮ್ಮೆ ಬೆಂಕಿ ಹಾಗೆಯೇ ಇದ್ದರೆ ಮತ್ತಷ್ಟು ಅನಾಹುತ ಸಂಭವಿಸುವ ಸಾಧ್ಯತೆ ಇತ್ತು.

ತಮಿಳುನಾಡು ಪಟಾಕಿ ಕಾರ್ಖಾನೆಯ ಅಗ್ನಿ ಅವಘಡದಲ್ಲಿ 11 ಮಂದಿ ಸಾವು

ಸತ್ತೂರಿನ ಕಾರ್ಖಾನೆಯೊಂದರಲ್ಲಿ ಅಗ್ನಿ ಅವಘಡ ಸಂಭವಿಸಿ 11ಮಂದಿ ಮೃತಪಟ್ಟ ಘಟನೆ ಮಾಸುವ ಮುನ್ನವೇ ಮತ್ತೊಂದು ದುರಂತ ಸಂಭವಿಸಿದೆ.

ಘಟನೆಯಲ್ಲಿ 22 ಮಂದಿ ಗಾಯಗೊಂಡಿದ್ದರು, ವೆಂಬ ಕೊಟ್ಟೈನ ಪಾಟಿಯಲ್ಲಿರುವ ಅಚಂಕುಲಂನಲ್ಲಿ ಈ ಬೆಂಕಿ ದುರಂತ ಸಂಭವಿಸಿದ್ದು, 9 ಮೃತದೇಹಗಳನ್ನು ಹೊರತೆಗೆಯಲಾಗಿದೆ. ಈ ಪೈಕಿ ಸಟ್ಟೂರ್ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಬೆಂಕಿಯ ಕೆನ್ನಾಲಿಗೆಗೆ ಮೃತದೇಹಗಳು ಸಂಪೂರ್ಣ ಸುಟ್ಟು ಕರಕಲಾಗಿದ್ದು‌. ಗುರುತು ಸಿಗುತ್ತಿರಲಿಲ್ಲ.

ತಮಿಳುನಾಡು ಪಟಾಕಿ ಕಾರ್ಖಾನೆ ಸ್ಫೋಟ ದುರುಂತದಲ್ಲಿ ಮೃತಪಟ್ಟವರಿಗಾಗಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ಸಂತಾಪವನ್ನು ಸೂಚಿಸಿದ್ದರು. ಅಲ್ಲದೆ ಮೃತಪಟ್ಟವರ ಕುಟುಂಬಕ್ಕೆ ತಲಾ ಎರಡು ಲಕ್ಷ ರೂ.ಗಳ ಪರಿಹಾರ ಪ್ರಕಟಿಸಿದ್ದರು.

English summary
Atleast Six people were killed and several injured in a blast at a firecracker factory in Tamil Nadu's Sivakasi on Thursday.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X