ಗಾಯಕ ಎಸ್ಪಿಬಿ ಆರೋಗ್ಯ ಕುರಿತಂತೆ ಪುತ್ರ ಚರಣ್ ಸ್ಪಷ್ಟನೆ
ಚೆನ್ನೈ, ಆ. 24: ಸಂಗೀತ ದಿಗ್ಗಜ ಎಸ್ ಪಿ ಬಾಲಸುಬ್ರಹ್ಮಣ್ಯಂ ಅವರ ಕೊವಿಡ್ 19 ವರದಿ ನೆಗಟಿವ್ ಎಂಬ ಸುದ್ದಿಯನ್ನು ಅವರ ಪುತ್ರ ಎಸ್ ಪಿ ಬಿ ಚರಣ್ ಅಲ್ಲಗೆಳೆದಿದ್ದಾರೆ. ಚೆನ್ನೈನ ಎಂಜಿಎಂ ಹೆಲ್ತ್ ಕೇರ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಹಿರಿಯ ಗಾಯಕ ಎಸ್ಪಿಬಿ ಆರೋಗ್ಯ ಸ್ಥಿತಿ ಬಗ್ಗೆ ಪುತ್ರ ಚರಣ್ ಸ್ಪಷ್ಟನೆ ನೀಡಿದ್ದಾರೆ.
Recommended Video
"ನಾನು ಆಸ್ಪತ್ರೆಯ ವೈದ್ಯರ ಜೊತೆ ಮಾತನಾಡಿದ ಬಳಿಕ ಅಪ್ಪನ ಆರೋಗ್ಯದ ಬಗ್ಗೆ ಮಾಹಿತಿ ನೀಡುತ್ತಿದ್ದೆ. ಆದರೀಗ ಬೆಳಗ್ಗೆ ಮಾಹಿತಿ ನೀಡುತ್ತಿದ್ದೇನೆ. ಅಪ್ಪನ ಕೊರೊನಾ ವರದಿ ನೆಗೆಟಿವ್ ಬಂದಿದೆ ಎನ್ನುವ ವದಂತಿ ಹರಿದಾಡುತ್ತಿದೆ. ಈ ಬಗ್ಗೆ ಆಸ್ಪತ್ರೆಯಿಂದ ಯಾವುದೇ ಖಚಿತ ಮಾಹಿತಿ ಇಲ್ಲ, ನನ್ನ ಹೆಸರಿನಲ್ಲಿ ಈ ಬಗ್ಗೆ ಹರಡಿರುವ ಸುದ್ದಿ ಸತ್ಯಕ್ಕೆ ದೂರವಾಗಿದೆ. ಎಸ್ ಪಿ ಬಿ ಇನ್ನೂ ವೆಂಟಿಲೇಟರ್ ಮೂಲಕವೇ ಉಸಿರಾಡುತ್ತಿದ್ದಾರೆ'' ಎಂದಿದ್ದಾರೆ.
ಆಗಸ್ಟ್ 5ರಂದು ಶೀತ ಮತ್ತು ಜ್ವರ ಕಾಣಿಸಿಕೊಂಡು ಉಸಿರಾಟ ತೊಂದರೆಯಾಗಿದ್ದರಿಂದ ಎಸ್‌ಪಿಬಿ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ವೈದ್ಯಕೀಯ ಪರೀಕ್ಷೆಯಿಂದ ಅವರಿಗೆ ಕೊವಿಡ್ 19 ಲಕ್ಷಣಗಳಿರುವುದು ದೃಢಪಟ್ಟಿತ್ತು.

ಮನೆಯಲ್ಲಿಯೇ ಕ್ವಾರಂಟೈನ್‌ನಲ್ಲಿ ಇರುವಂತೆ ವೈದ್ಯರು ಸೂಚಿಸಿದ್ದರು. ಆದರೆ, ಕುಟುಂಬದ ಸದಸ್ಯರ ಸಲಹೆ ಮೇರೆಗೆ ಅವರು ಆಸ್ಪತ್ರೆಗೆ ದಾಖಲಾಗಿದ್ದರು.
16ಕ್ಕೂ ಅಧಿಕ ಭಾಷೆಯಲ್ಲಿ 40,000ಕ್ಕೂ ಹೆಚ್ಚು ಹಾಡುಗಳನ್ನು ಹಾಡಿರುವ ಹಿರಿಯ ಗಾಯಕ ಎಸ್ ಪಿ ಬಾಲಸುಬ್ರಹ್ಮಣ್ಯಂ ವಿಡಿಯೋ ಸಂದೇಶ ನೀಡಿ, ಕೋವಿಡ್ 19 ಸೋಂಕಿನ ಸಣ್ಣ ಪ್ರಮಾಣದ ಲಕ್ಷಣ ಕಾಣಿಸಿಕೊಂಡಿರುವುದಾಗಿ ತಿಳಿಸಿದ್ದರು.
ಇದಾದ ಬಳಿಕ ಅವರ ಶ್ವಾಸಕೋಶದ ಸೋಂಕು ಉಲ್ಬಣಿಸಿ, ಆರೋಗ್ಯ ಸ್ಥಿತಿ ಕ್ಷೀಣಿಸತೊಡಗಿತ್ತು. ಕೊವಿಡ್ 19 ಕೂಡಾ ನೆಗಟಿವ್ ಎಂದು ಬಂದಿದೆ ಎಂಬ ಸುದ್ದಿ ಹಬ್ಬಿದ್ದರಿಂದ ಆಪಾರ ಸಂಖ್ಯೆಯ ಅಭಿಮಾನಿಗಳು ತಮ್ಮ ಪ್ರಾರ್ಥನೆ ಫಲಿಸಿತು ಎಂಬ ಖುಷಿಯಲ್ಲಿದ್ದರು. ಆದರೆ, ಆರೋಗ್ಯ ಸ್ಥಿತಿ ಇನ್ನೂ ಸುಧಾರಿಸಿಲ್ಲ ಎಂದು ತಿಳಿದು ಬಂದಿದೆ.
-
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ












Click it and Unblock the Notifications